Saturday, November 27, 2021
ಮುಂದಿನ ೬ ತಿಂಗಳಲ್ಲಿ ರಾಜ್ಯದಲ್ಲಿ ಪುನಃ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ : ಆರ್. ಪ್ರಸನ್ನಕುಮಾರ್
Friday, November 26, 2021
ನಕಲಿ ನೋಟು ಚಲಾವಣೆಗೆ ಯತ್ನ : ಇಬ್ಬರ ಬಂಧನ
ಅಶ್ಲೀಲ ನೃತ್ಯ ಪ್ರದರ್ಶನ : ಕಲಾವಿದರಿಗೆ ಅಗೌರವ
ಕಾನೂನು ಕ್ರಮಕ್ಕೆ ಆಗ್ರಹಿಸಿ ನ.೨೯ರಂದು ಪ್ರತಿಭಟನೆ
ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಜೃಂಭಣೆಯಿಂದ ಜರುಗಿದ ಆಶ್ಲೇಷ ಬಲಿ ಪೂಜೆ
ನ.೨೮ರಿಂದ ಅಮಲೋದ್ಭವಿ ಮಾತೆ ದೇವಾಲಯದ ೮೩ನೇ ವರ್ಷದ ವಾರ್ಷಿಕೋತ್ಸವ
Thursday, November 25, 2021
ವಿಜೃಂಭಣೆಯಿಂದ ಜರುಗಿದ ಶ್ರೀ ಚಿದಂಬರ ಜಯಂತಿ
ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮೇಲೆ ನಿಗಾವಹಿಸಿ : ಎಸಿಬಿ ಮಹಾನಿರ್ದೇಶಕರಿಗೆ ಮನವಿ
ಭದ್ರಾವತಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವಾರು ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮೇಲೆ ನಿಗಾ ವಹಿಸುವಂತೆ ಭ್ರಷ್ಟಾಚಾರ ನಿಗ್ರಹ ದಳದ ಅಪರ ಪೊಲೀಸ್ ಮಹಾನಿರ್ದೇಶಕರಿಗೆ ತಾಲೂಕಿನ ಉಕ್ಕುಂದ ಗ್ರಾಮದ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಮನವಿ ಮಾಡಿದ್ದಾರೆ.
ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ಸುಮಾರು 10 ರಿಂದ 15 ವರ್ಷಗಳವರೆಗೆ ಒಂದೇ ಕಡೆ ಕೆಲವು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಇಲಾಖೆ ಹಾಗೂ ಕಚೇರಿಯ ಸಂಪೂರ್ಣ ಮಾಹಿತಿ ಇದ್ದು, ಅಕ್ರಮವಾಗಿ ಹಣ, ಆಸ್ತಿ ಸಂಪಾದಿಸಬೇಕೆಂಬ ಉದ್ದೇಶದೊಂದಿಗೆ ತಮ್ಮದೇ ಆದ ಪ್ರಭಾವ ಬಳಸಿಕೊಂಡು ಒಂದೇ ಸ್ಥಳದಲ್ಲಿಯೇ ಉಳಿದುಕೊಂಡು ಬಲಿಷ್ಠರಾಗಿದ್ದಾರೆ. ಹಣವನ್ನು ಯಾವ ರೀತಿ ಪಡೆಯಬೇಕು. ಯಾರ ಮುಖಾಂತರ ಪಡೆಯಬೇಕು. ಯಾವ ರೀತಿ ಹಣ, ಆಸ್ತಿ ಹೊಂದಬೇಕೆಂಬ ತಂತ್ರಗಾರಿಕೆಗಳನ್ನು ಅರಿತು ಕೊಂಡಿದ್ದಾರೆ.
ಅರಣ್ಯ ಇಲಾಖೆ, ಪಂಚಾಯತ್ ರಾಜ್ ಖಾತೆ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳಲ್ಲಿ ಕೆಲವು ನೌಕರರು ತಮ್ಮ ನಿವೃತ್ತಿ ಅವಧಿಯನ್ನು ಸಂಪೂರ್ಣವಾಗಿ ಮುಗಿಸಿರುತ್ತಾರೆ. ಒಂದೇ ಕಡೆ ಕರ್ತವ್ಯ ನಿರ್ವಹಿಸಿರುವ ನೌಕರರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಸುಮಾರು ೪-೫ ವರ್ಷ ಮೇಲ್ಪಟ್ಟು ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮೇಲೆ ನಿಗಾವಹಿಸಿದ್ದಲ್ಲಿ ಭ್ರಷ್ಟಾಚಾರಗಳು ಕಡಿಮೆಯಾಗುವ ಜೊತೆಗೆ ಸಾರ್ವಜನಿಕರಿಗೆ ಲಂಚ ನೀಡುವ ಅನಿವಾರ್ಯತೆ, ಒತ್ತಡಗಳು ಕಡಿಮೆಯಾಗಲಿವೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.