ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ನಗರಸಭೆ ವ್ಯಾಪ್ತಿಯ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯಸ್ವಾಮಿ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.
ಭದ್ರಾವತಿ, ಡಿ. ೧೬: ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವ್ಯಾಪ್ತಿಯ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯಸ್ವಾಮಿ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.
ರಥೋತ್ಸವ ಅಂಗವಾಗಿ ಗಣಪತಿ ಪೂಜೆ, ಪುಣ್ಯಾಹ ಪ್ರಧಾನ ಹೋಮ, ರಥಶುದ್ಧಿ, ಅಷ್ಟಾವಧಾನ ಸೇವಾ, ಮಹಾಪೂಜೆ ಮತ್ತು ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಮಧ್ಯಾಹ್ನ ೧೨.೩೦ಕ್ಕೆ ದೇವಸ್ಥಾನ ಮುಂಭಾಗ ಆರಂಭಗೊಂಡ ರಥೋತ್ಸವ ವಿಶ್ವೇಶ್ವರಾಯ ಆಟೋ ನಿಲ್ದಾಣದವರೆಗೂ ಸಾಗಿತು. ಆರಂಭದಲ್ಲಿ ಭಕ್ತಾಧಿಗಳು ಪಟಾಕಿ ಸಿಡಿಸಿ ಶ್ರೀ ಆಂಜನೇಯಸ್ವಾಮಿಗೆ ಜಯಘೋಷ ಹಾಕಿದರು. ಶ್ರೀ ಸತ್ಯಸಾಯಿ ಸೇವಾಕರ್ತರಿಂದ ಭಜನೆ ನಡೆಯಿತು. ನಾದಸ್ವರ ಮತ್ತು ಡೊಳ್ಳು ಕುಣಿತ ಮತ್ತಷ್ಟು ಮೆರಗು ನೀಡಿದವು. ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ನಡೆದವು.
ರಥೋತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಕೆ. ಪರಮೇಶ್, ಈ ಭಾಗದ ವಾರ್ಡ್ ಸದಸ್ಯ ಆರ್. ಮೋಹನ್‌ಕುಮಾರ್ ಸೇರಿದಂತೆ ಎಲ್ಲಾ ನಗರಸಭಾ ಸದಸ್ಯರು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ಮಹಿಳಾ ಸಂಘಟನೆಗಳ ಪ್ರಮುಖರು ಸೇರಿದಂತೆ ಜನ್ನಾಪುರ, ಹುತ್ತಾಕಾಲೋನಿ, ಜಿಂಕ್‌ಲೈನ್, ವೇಲೂರು ಶೆಡ್, ಬಂಢಾರಹಳ್ಳಿ, ವಿದ್ಯಾಮಂದಿರ, ನ್ಯೂಟೌನ್, ಕಾಗದನಗರ ಸೇರಿದಂತೆ ವಿವಿಧೆಡೆಗಳಿಂದ ಭಕ್ತಾಧಿಗಳು ಆಗಮಿಸಿದ್ದರು.
ಕಾಂಗ್ರೆಸ್ ಮುಖಂಡ, ದಾನಿ ಎಚ್.ಸಿ ದಾಸೇಗೌಡ ಅವರಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಅಲ್ಲದೆ ಭಕ್ತರಿಂದ ಅಲ್ಲಲ್ಲಿ ಮಜ್ಜಿಗೆ, ಪಾನಕ ವಿತರಣೆ ಸೇವೆ ನಡೆಯಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ನಗರಸಭೆ ವ್ಯಾಪ್ತಿಯ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯಸ್ವಾಮಿ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು. ರಥೋತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಕೆ. ಪರಮೇಶ್, ಈ ಭಾಗದ ವಾರ್ಡ್ ಸದಸ್ಯ ಆರ್. ಮೋಹನ್‌ಕುಮಾರ್ ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತಾಧಿಗಳು ಪಾಲ್ಗೊಂಡಿದ್ದರು.