ಭದ್ರಾವತಿ, ಡಿ. ೧೬: ಹಿಂದೂ ಧರ್ಮ ಸಂಸ್ಕೃತಿ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಬಜರಂಗದಳ ಕಾರ್ಯಕರ್ತರು ಈ ಬಾರಿ ಕೈಗೊಂಡಿರುವ ದತ್ತ ಮಾಲೆ ಅಭಿಯಾನ ಭಾನುವಾರ ಮುಕ್ತಾಯಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ಡಿ.೧೭ರ ಶುಕ್ರವಾರ ಸಂಕೀರ್ತನೆ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ಡಿ.೮ರಿಂದ ಆರಂಭಗೊಂಡಿರುವ ಅಭಿಯಾನದಲ್ಲಿ ಈ ಬಾರಿ ಸುಮಾರು ೧೫೦ ಕಾರ್ಯಕರ್ತರು ಮಾಲಾಧಾರಣೆ ಮಾಡಿದ್ದು, ಪ್ರತಿವರ್ಷ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ.
ಸಂಕೀರ್ತನೆ ಶೋಭಾ ಯಾತ್ರೆ ಸಂಜೆ ೪ ಗಂಟೆಗೆ ಹೊಸಮನೆ ಶಿವಾಜಿ ವೃತ್ತದಿಂದ ಆರಂಭಗೊಳ್ಳಲಿದ್ದು, ನೂತನ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ ಕಾಂತೇಶ್ ಸೇರಿದಂತೆ ಇನ್ನಿತರರು ಚಾಲನೆ ನೀಡಲಿದ್ದಾರೆ. ಶೋಭಾ ಯಾತ್ರೆ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದವರೆಗೆ ನಡೆಯಲಿದೆ. ಮಾಲಾಧಾರಿಗಳು ಭಾನುವಾರ ಬೆಳಿಗ್ಗೆ ದತ್ತಪೀಠಕ್ಕೆ ತೆರಳಲಿದ್ದಾರೆ.
ವಿಶ್ವ ಹಿಂದೂ ಪರಿಷತ್ ಜಿಲಾಧ್ಯಕ್ಷ ವಾಸುದೇವನ್, ದಕ್ಷಿಣ ಪ್ರಾಂತ್ಯ ಉಪಾಧ್ಯಕ್ಷ ಹಾ. ರಾಮಪ್ಪ ಸೇರಿದಂತೆ ಇನ್ನಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಶೋಭಾ ಯಾತ್ರೆ ಯಶಸ್ವಿಗೊಳಿಸುವಂತೆ ಬಜರಂಗದಳ ಜಿಲ್ಲಾ ಸಹ ಸಂಚಾಲಕ ರಾಘವನ್ ವಡಿವೇಲು ಕೋರಿದ್ದಾರೆ.