೩ ದಶಕಗಳಿಗೂ ಹೆಚ್ಚು ಕಾಲ ಹೋರಾಟದಲ್ಲಿ ತೊಡಗಿರುವ ಆರ್. ವೇಣುಗೋಪಾಲ್
Tuesday, December 21, 2021
ಹೋರಾಟಗಾರನ ಹುಟ್ಟುಹಬ್ಬಕ್ಕೆ ಕೈಗಡಿಯಾರದ ಉಡುಗೊರೆ
ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಮಸಿ : ಸೂಕ್ತ ಕ್ರಮಕ್ಕೆ ಮನವಿ
Monday, December 20, 2021
ಡಿ.೨೨ರಂದು ಬಿ.ಆರ್ ಪ್ರಾಜೆಕ್ಟ್‌ನಲ್ಲಿ ಉಚಿತ ನೇತ್ರ ತಪಾಸಣಾ, ಶಸ್ತ್ರಚಿಕಿತ್ಸೆ ಶಿಬಿರ
ಎಂಇಎಸ್ ಪುಂಡರನ್ನು ಗಡಿಪಾರು ಮಾಡಿ, ಸಂಘಟನೆ ನಿಷೇಧಿಸಿ : ಆಗ್ರಹ
ತಾಲೂಕು ಕುರುಬರ ಸಂಘದಿಂದ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ
ಭಾರತೀಯ ಉಕ್ಕು ಪ್ರಾಧಿಕಾರಕ್ಕೆ ಪ್ರತಿಷ್ಠಿತ ಗೋಲ್ಡನ್ ಪೀಕಾಕ್ ಎನ್ವಿರಾನ್ಮೆಂಟ್ ಮ್ಯಾನೇಜ್‌ಮೆಂಟ್ ಪ್ರಶಸ್ತಿ
Sunday, December 19, 2021
ಭದ್ರಾವತಿಯಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆ
ಖಾಸಗಿ ಆಸ್ಪತ್ರೆ ನರ್ಸಿಂಗ್ ವಿದ್ಯಾರ್ಥಿನಿಯಲ್ಲಿ ಸೋಂಕು
ಭದ್ರಾವತಿ: ನಗರದಲ್ಲಿ ಮೊದಲ ಬಾರಿಗೆ ಒಮಿಕ್ರಾನ್ ಸೋಂಕು ಕಾಣಿಸಿಕೊಂಡಿದ್ದು, ಈ ಕುರಿತು ಆರೋಗ್ಯ ಸಚಿವ ಡಾ. ಸುಧಾಕರ್ ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ನಗರದ ಖಾಸಗಿ ಆಸ್ಪತ್ರೆಯ ಒಟ್ಟು 27 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ 20 ವರ್ಷದ ಓರ್ವ ವಿದ್ಯಾರ್ಥಿನಿಯಲ್ಲಿ ರೂಪಾಂತರಿ ವೈರಸ್ ಒಮಿಕ್ರಾನ್ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಪರೀಕ್ಷೆ ಬರೆಯಲು ತೆರಳಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳ ತಪಾಸಣೆ ಪಡಿಸಲಾಗಿತ್ತು. ಈ ಸಂದರ್ಭದಲ್ಲಿ 27 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು.
ಈ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಿ ಆಸ್ಪತ್ರೆಯಲ್ಲಿ ಇರುವವರ ಮೇಲೆ ನಿಗಾ ವಹಿಸಲಾಗಿತ್ತು. ಈ ನಡುವೆ ಸೋಂಕಿತರ ಮಾದರಿಯನ್ನು ಹೆಚ್ಚಿನ ತಪಾಸಣೆಗೆ ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ರವಾನೆ ಮಾಡಲಾಗಿತ್ತು. ಇದರ ಫಲಿತಾಂಶ ಭಾನುವಾರ ಹೊರಬಿದ್ದಿದ್ದು ಈ ಪೈಕಿ ಓರ್ವ ವಿದ್ಯಾರ್ಥಿನಿಯಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದೆ. ಈ ವಿದ್ಯಾರ್ಥಿನಿಗೆ ಹೆಚ್ಚಿನ ಚಿಕಿತ್ಸೆ ಮುಂದುವರಿಸಲು ಸೂಚಿಸಲಾಗಿದೆ.