ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಡಿ. ೨೯ರಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಆಯೋಜಿಸಲಾಗಿರುವ ರಾಜ್ಯಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ, ಅಜಾದಿ ಕಾ ಅಮೃತ ಮಹೋತ್ಸವ, ವಿಶ್ವ ಮಾನವ ದಿನಾಚರಣೆ, ರಾಜ್ಯಮಟ್ಟದ 'ಎಚ್.ಎನ್ ಪ್ರಶಸ್ತಿ' ಪ್ರಧಾನ ಸಮಾರಂಭದ ಸಮ್ಮೇಳನ ಸರ್ವಾಧ್ಯಕ್ಷ, ಇಸ್ರೋ ಮಾಜಿ ಅಧ್ಯಕ್ಷ ಡಾ.ಎ.ಎಸ್ ಕಿರಣ್‌ಕುಮಾರ್ ಅವರನ್ನು ಮಂಗಳವಾರ ಸಂಜೆ ಭದ್ರಾವತಿ ಬೈಪಾಸ್ ರಸ್ತೆ ಬಾರಂದೂರಿನಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಭದ್ರಾವತಿ, ಡಿ. ೨೮: ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಡಿ. ೨೯ರಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಆಯೋಜಿಸಲಾಗಿರುವ ರಾಜ್ಯಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ, ಅಜಾದಿ ಕಾ ಅಮೃತ ಮಹೋತ್ಸವ, ವಿಶ್ವ ಮಾನವ ದಿನಾಚರಣೆ, ರಾಜ್ಯಮಟ್ಟದ 'ಎಚ್.ಎನ್ ಪ್ರಶಸ್ತಿ' ಪ್ರಧಾನ ಸಮಾರಂಭದ ಸಮ್ಮೇಳನ ಸರ್ವಾಧ್ಯಕ್ಷ, ಇಸ್ರೋ ಮಾಜಿ ಅಧ್ಯಕ್ಷ ಡಾ.ಎ.ಎಸ್ ಕಿರಣ್‌ಕುಮಾರ್ ಅವರನ್ನು ಮಂಗಳವಾರ ಸಂಜೆ ನಗರದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಪದಾಧಿಕಾರಿಗಳು, ಸದಸ್ಯರು ಹಾಗು ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಬೆಂಗಳೂರು-ತುಮಕೂರು ಮಾರ್ಗವಾಗಿ ಆಗಮಿಸಿದ ಡಾ.ಎ.ಎಸ್ ಕಿರಿಣ್‌ಕುಮಾರ್ ಹಾಗು ಪರಿಷತ್‌ನ ರಾಜ್ಯಾಧ್ಯಕ್ಷ ಡಾ. ಹುಲಿಕಲ್ ನಟರಾಜ್ ಸೇರಿದಂತೆ ಇನ್ನಿತರರನ್ನು ನಗರದ ಬೈಪಾಸ್ ರಸ್ತೆ ಬಾರಂದೂರಿನಲ್ಲಿ ಸನ್ಮಾನಿಸಿ ಪರಿಷತ್ ರಾಜ್ಯ ಸಂಘಟನಾ ಕಾರ್ಯದರ್ಶಿ ವಿ.ಟಿ ಸ್ವಾಮಿ, ಜಿಲ್ಲಾಧ್ಯಕ್ಷ ರಾಜೇಂದ್ರ ಮತ್ತು ತಾಲೂಕು ಅಧ್ಯಕ್ಷ ಸಿ. ಜಯಪ್ಪ ಅಭಿನಂದನಾ ನುಡಿಗಳನ್ನಾಡಿದರು.
ಪರಿಷತ್ ಜಿಲ್ಲಾ ಉಪಾಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ತಾಲೂಕು ಉಪಾಧ್ಯಕ್ಷರಾದ ಎಸ್. ಉಮಾ, ಜಿ. ರಾಜು, ಕಾರ್ಯದರ್ಶಿ ಎ. ತಿಪ್ಪೇಸ್ವಾಮಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಬಸಪ್ಪ, ಸದಸ್ಯರಾದ ಈಶ್ವರಪ್ಪ, ಲೋಕೇಶ್ ಮಾಳೇನಹಳ್ಳಿ, ಸಿ. ರಾಮಾಚಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.