ಭದ್ರಾವತಿ ತರೀಕೆರೆ ರಸ್ತೆಯಲ್ಲಿ ಬೃಹತ್ ಕಲ್ಯಾಣ ಮಂಟಪ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಕಾರ್ಮಿಕ ಇಲಾಖೆವತಿಯಿಂದ ನೀಡಲಾಗುವ ಪ್ರತಿರಕ್ಷಣಾ ಕಿಟ್‌ಗಳನ್ನು ವಿತರಿಸಲಾಯಿತು.
ಭದ್ರಾವತಿ, ಜ. ೯: ನಗರದ ತರೀಕೆರೆ ರಸ್ತೆಯಲ್ಲಿ ಬೃಹತ್ ಕಲ್ಯಾಣ ಮಂಟಪ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಕಾರ್ಮಿಕ ಇಲಾಖೆವತಿಯಿಂದ ನೀಡಲಾಗುವ ಪ್ರತಿರಕ್ಷಣಾ ಕಿಟ್‌ಗಳನ್ನು ವಿತರಿಸಲಾಯಿತು.
ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಆರೋಗ್ಯ, ಶೈಕ್ಷಣಿಕ ಮತ್ತು ಆರ್ಥಿಕ ಸೌಲಭ್ಯ ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು. ಕಟ್ಟಡ ಕಾರ್ಮಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಕೋರಲಾಯಿತು.
ಕಲ್ಯಾಣ ಮಂಟಪ ಮಾಲೀಕರಾದ ಸೈಯದ್ ಹಿಸಾರ್, ಸಿವಿಲ್ ಎಂಜಿನಿಯರ್ ಲಕ್ಷ್ಮಣ್ ಪರುಶುರಾಮ್, ಯೂನಿಯನ್ ತಾಲೂಕು ಅಧ್ಯಕ್ಷ, ಮೇಸ್ತ್ರಿ ಚಂದ್ರಶೇಖರ್, ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಂತ್ರಿಕ ಸಲಹೆಗಾರ ಮನೋಹರ್ ಗೌಡ, ತಾಲ್ಲೂಕು ಕಾರ್ಯಾಧ್ಯಕ್ಷ ಅಭಿಲಾಷ್, ಉಪಾಧ್ಯಕ್ಷ ನಾಗೇಂದ್ರರೆಡ್ಡಿ, ಸಂಘಟನಾ ಕಾರ್ಯದರ್ಶಿ ಕುಮಾರ್, ತಾಲ್ಲೂಕು ಸಂಚಾಲಕರಾದ ಮಂಜುನಾಥ್, ಸುರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.