ಭದ್ರಾವತಿ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿತ್ತು. ಆಕರ್ಷಕವಾದ ವೈಕುಂಠನಾಥನ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.
ಭದ್ರಾವತಿ, ಜ. ೧೩: ಕೊರೋನಾ ೩ನೇ ಅಲೆ ನಡುವೆಯೂ ನಗರದ ವಿವಿಧ ದೇವಾಲಯಗಳಲ್ಲಿ ಗುರುವಾರ ಸಂಪ್ರದಾಯದಂತೆ ಕೋವಿಡ್ ಮಾರ್ಗಸೂಚಿಗಳನ್ವಯ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು.
ಮಿಲ್ಟ್ರಿಕ್ಯಾಂಪ್‌ನಲ್ಲಿ ವೈಕುಂಠ ಏಕಾದಶಿ:
ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ ೫ ಗಂಟೆಯಿಂದ ಧಾರ್ಮಿಕ ಆಚರಣೆಗಳು ಜರುಗಿದವು. ಸ್ವಾಮಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ ನೆರವೇರಿಸಲಾಯಿತು. ಅಲ್ಲದೆ ಈ ಬಾರಿ ವಿಶೇಷವಾಗಿ ವೈಕುಂಠನಾಥನ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿತ್ತು.
ಆಕರ್ಷಕವಾದ ವೈಕುಂಠನಾಥನ ದರ್ಶನ ಭಕ್ತರ ಮನಸೂರೆಗೊಂಡಿತು. ದೇವಸ್ಥಾನದ ಪ್ರಧಾನ ಅರ್ಚಕ ರವಿಕುಮಾರ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಬೆಳಿಗ್ಗೆಯೇ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ದರ್ಶನ ಪಡೆದುಕೊಂಡರು.
ಭದ್ರಾವತಿ ಕಾಗದನಗರ ವಾರ್ಡ್ ನಂ.೭ರ ಮುಖ್ಯರಸ್ತೆಯಲ್ಲಿರುವ ಶ್ರೀಕ್ಷೇತ್ರ ನಾಗರಕಟ್ಟೆಯಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿತ್ತು.
ಶ್ರೀಕ್ಷೇತ್ರ ನಾಗರಕಟ್ಟೆಯಲ್ಲಿ ವೈಕುಂಠ ಏಕಾದಶಿ:
ಕಾಗದನಗರ ವಾರ್ಡ್ ನಂ.೭ರ ಮುಖ್ಯರಸ್ತೆಯಲ್ಲಿರುವ ಶ್ರೀಕ್ಷೇತ್ರ ನಾಗರಕಟ್ಟೆಯಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಾಗು ಸಹಸ್ರ ದೀಪೋತ್ಸವ ಹಮ್ಮಿಕೊಳ್ಳಲಾಗಿತ್ತು.
ಬೆಳಿಗ್ಗೆ ೫.೩೦ರಿಂದ ಧಾರ್ಮಿಕ ಆಚರಣೆಗಳು ಜರುಗಿದವು. ಇಲ್ಲೂ ಸಹ ವೈಕುಂಠನಾಥನ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ನಾಗರಕಟ್ಟೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ದೇವಾನುದೇವತೆಗಳಿಗೆ ವಿಶೇಷತೆ ಅಲಂಕಾರ ಕೈಗೊಳ್ಳಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ಭಟ್ಟರು ಧಾರ್ಮಿಕ ಆಚರಣೆಗಳ ನೇತೃತ್ವವಹಿಸಿದ್ದರು.
ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿತ್ತು. ಕೋವಿಡ್ ೩ನೇ ಅಲೆ ಹಿನ್ನಲೆಯಲ್ಲಿ ಸರಳವಾಗಿ ಧಾರ್ಮಿಕ ಆಚರಣೆಗಳು ಜರುಗಿದವು.
ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನದಲ್ಲಿ :
ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಜರುಗಿತು.
ವೈಭವದ ವೈಕುಂಠ ಏಕಾದರ್ಶಿ ವೀಕ್ಷಣೆಗೆ ಪ್ರತಿ ವರ್ಷ ಸಾವಿರಾರು ಭಕ್ತಾಧಿಗಳು ಪಾಲ್ಗೊಳ್ಳುಲಿದ್ದು, ಕೋವಿಡ್-೧೯ರ ಹಿನ್ನಲೆಯಲ್ಲಿ ಕಳೆದ ೩ ವರ್ಷಗಳಿಂದ ವೈಕುಂಠ ಏಕಾದಶಿಯನ್ನು ಸಂಪ್ರದಾಯದಂತೆ ಸರಳವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ಸರಳವಾಗಿ ಧಾರ್ಮಿಕ ಆಚರಣೆಗಳು ಜರುಗಿದವು. ಉತ್ಸವ ಮೂರ್ತಿಗೆ ವಿಶೇಷ ಅಲಂಕಾರ ಕೈಗೊಂಡು ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ದೇವಸ್ಥಾನ ಪ್ರಧಾನ ಅರ್ಚಕ ವೇದಬ್ರಹ್ಮ ರಂಗನಾಥ ಶರ್ಮ ಹಾಗು ಸಹಾಯಕ ಅರ್ಚಕ ಶ್ರೀನಿವಾಸ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.
ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿತ್ತು. ಕೋವಿಡ್ ೩ನೇ ಅಲೆ ಹಿನ್ನಲೆಯಲ್ಲಿ ಸರಳವಾಗಿ ಧಾರ್ಮಿಕ ಆಚರಣೆಗಳು ಜರುಗಿದವು.
ಬಾರಂದೂರು ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಾಲಯದಲ್ಲಿ:
ಬಾರಂದೂರು ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವಂದೇಮಾತಂ ಟ್ರಸ್ಟ್ ವತಿಯಿಂ ವೈಕುಂಠ ಏಕಾದಶಿ ಜರುಗಿತು.
ಧಾರ್ಮಿಕ ಆಚರಣೆಗಳೊಂದಿಗೆ ದೇವಸ್ಥಾನದ ಮೂಲ ವಿಗ್ರಹಗಳಿಗೆ ಹಾಗು ಉತ್ಸವ ಮೂರ್ತಿಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಬೆಳಗ್ಗೆಯಿಂದಲೇ ಭಕ್ತಾಧಿಗಳು ದೇವಸ್ಥಾನಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದರು. ವಂದೇಮಾತರಂ ಟ್ರಸ್ಟ್‌ನ ಪ್ರಮುಖರು, ಆಯ್ಯಪ್ಪ ಸ್ವಾಮಿ ಭಕ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಏಕಾದಶಿ ಪ್ರಯುಕ್ತ ದಿನದರ್ಶಿಕೆ ಬಿಡುಗಡೆಗೊಳಿಸಲಾಯಿತು.