ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಸೋಮವಾರ ಹುಣ್ಣಿಮೆ ಜಾತ್ರಾ ಮಹೋತ್ಸವದ ಅಂಗವಾಗಿ ಅಮ್ಮನವರಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
ಭದ್ರಾವತಿ, ಜ. ೧೭: ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಸೋಮವಾರ ಹುಣ್ಣಿಮೆ ಜಾತ್ರಾ ಮಹೋತ್ಸವದ ಅಂಗವಾಗಿ ಅಮ್ಮನವರಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
ಕೋವಿಡ್ ೩ನೇ ಅಲೆ ನಡುವೆಯೂ ಪ್ರತಿವರ್ಷದಂತೆ ಈ ಬಾರಿ ಸಹ ಗಣಹೋಮ, ದುರ್ಗಾಹೋಮ ಮತ್ತು ಕಲಾ ಹೋಮ ಸೇರಿದಂತೆ ಧಾರ್ಮಿಕ ಆಚರಣೆಗಳು ವಿಜೃಂಭಣೆಯಿಂದ ಜರುಗಿದವು.
ಬೆಳಿಗ್ಗೆಯಿಂದಲೇ ಭಕ್ತಾದಿಗಳು ಕೋವಿಡ್ ಮಾರ್ಗಸೂಚಿ ಅನ್ವಯ ಅಮ್ಮನವರ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ದೇವಸ್ಥಾನದ ಪ್ರಧಾನ ಅರ್ಚಕ ಕೇಶವ ರಾಮಾಂಜನೇಯ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.
ದೇವಸ್ಥಾನ ಸಮಿತಿಯ ಕಾರ್ಯದರ್ಶಿ ಆಂಜನೇಯ, ಸಹಕಾರ್ಯದರ್ಶಿ ಚೆನ್ನಕೇಶವ, ಖಜಾಂಚಿ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೂತನ ಅಧ್ಯಕ್ಷ ಸತೀಶ್ ಮತ್ತು ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.