ಕೂಡ್ಲಿಗೆರೆ ಎಂ. ನಾಗರಾಜ್
ಭದ್ರಾವತಿ, ಜ. ೧೭: ವೀರಶೈವ ಸಮಾಜದ ಹಿರಿಯ ಮುಖಂಡರು, ವಿನಾಯಕ ಬಸ್ ಮಾಲೀಕರಾದ ಕೂಡ್ಲಿಗೆರೆ ಎಂ. ನಾಗರಾಜ್(೬೭) ಸೋಮವಾರ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರಿ ಹಾಗು ಇಬ್ಬರು ಪುತ್ರರನ್ನು ಹೊಂದಿದ್ದರು. ನಾಗರಾಜ್‌ರವರು ತಾಲೂಕಿನಲ್ಲಿ ವೀರಶೈವ ಸಮಾಜ ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ದಾನಿಗಳಾಗಿ ಗುರುತಿಸಿಕೊಂಡಿದ್ದರು. ಇವರ ಅಂತ್ಯಕ್ರಿಯೆ ಮಂಗಳವಾರ ಕೂಡ್ಲಿಗೆರೆ ಗ್ರಾಮದಲ್ಲಿ ನಡೆಯಲಿದೆ.
ಇವರ ನಿಧನಕ್ಕೆ ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಾಸಕ ಬಿ.ಕೆ ಸಂಗಮೇಶ್ವರ್, ಹಟ್ಟಿ ಚಿನ್ನದ ಗಣಿ ನಿಯಮಿತ, ನಿರ್ದೇಶಕ ಕೂಡ್ಲಿಗೆರೆ ಹಾಲೇಶ್ ಸೇರಿದಂತೆ ವೀರಶೈವ ಸಮಾಜದ ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಮಾಜದ ಪ್ರಮುಖರು ಸಂತಾಪ ಸೂಚಿಸಿದ್ದಾರೆ.