ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ಏಕಾಂಗಿ ಹೋರಾಟ
![](https://blogger.googleusercontent.com/img/b/R29vZ2xl/AVvXsEiPsxf8TaZ37zqi_Z_JKOKb9UXKYvf2YDA8pogY5apNKeHWmIOhmspuP9AdJzo-SdBWirJo6FwWFw13Vy58QpNNtUuk8NEfeH3a84VaVwB_X9M6Bq9xhL7mNaeuqLlTRNA6lQKvoVcLbF2m/w370-h400-rw/D14-BDVT-743975.jpg)
ಭದ್ರಾವತಿ ತಾಲೂಕಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಲೋಪವೆಸಗಿದ್ದು, ಈ ಹಿನ್ನಲೆಯಲ್ಲಿ ಇಲಾಖೆಯ ಠಾಣಾ ನಿರೀಕ್ಷಕ ಮತ್ತು ಉಪ ನಿರೀಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ಸೋಮವಾರ ತಾಲೂಕು ಕಛೇರಿ ಮುಂಭಾಗ ಏಕಾಂಗಿ ಹೋರಾಟ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಭದ್ರಾವತಿ, ಫೆ. ೧೪: ತಾಲೂಕಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಲೋಪವೆಸಗಿದ್ದು, ಈ ಹಿನ್ನಲೆಯಲ್ಲಿ ಇಲಾಖೆಯ ಠಾಣಾ ನಿರೀಕ್ಷಕ ಮತ್ತು ಉಪ ನಿರೀಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ಸೋಮವಾರ ತಾಲೂಕು ಕಛೇರಿ ಮುಂಭಾಗ ಏಕಾಂಗಿ ಹೋರಾಟ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಡೈರಿ ವೃತ್ತದಲ್ಲಿ ರಸ್ತೆ ಪಕ್ಕದಲ್ಲಿರುವ ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಮಹಿಳೆಯರು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಸ್ಥಳೀಯ ನಿವಾಸಿಗಳು ನಿರ್ಭೀತಿಯಿಂದ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಮದ್ಯ ಸೇವನೆ ಮಾಡುವವರಿಂದ ಪ್ರತಿ ದಿನ ಗುಂಪು ಗಲಾಟೆ, ಹೊಡೆದಾಟ ಸೇರಿದಂತೆ ಗಂಭೀರ ಪ್ರಕರಣಗಳು ನಡೆಯುತ್ತಿವೆ. ಈ ಸಂಬಂಧ ಈಗಾಗಲೇ ಹಲವಾರು ಬಾರಿ ಹೋರಾಟ ನಡೆಸಿ ನ್ಯೂಟೌನ್ ಪೊಲೀಸ್ ಠಾಣೆಗೆ ಸಹ ದೂರು ನೀಡಲಾಗಿದೆ. ಅಲ್ಲದೆ ಅಬಕಾರಿ ಇಲಾಖೆಗೂ ಮನವಿ ಸಲ್ಲಿಸಲಾಗಿದೆ. ಮದ್ಯದಂಗಡಿಗಳಿಂದ ಶಾಂತಿಗೆ ಭಂಗವಾಗುತ್ತಿದ್ದರೂ ಸಹ ಯಾವುದೇ ಕೈಗೊಂಡಿಲ್ಲ ಎಂದು ದೂರಲಾಗಿದೆ.
ತಾಲೂಕಿನ ಸಿ.ಎಲ್ ೨ ಮದ್ಯದಂಗಡಿಗಳಲ್ಲಿ ಎಂಆರ್‌ಪಿ ದರದಲ್ಲಿ ಮದ್ಯ ಮಾರಾಟ ಮಾಡಬೇಕು. ಆದರೆ ಅಧಿಕ ಬೆಲೆಗೆ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಅಲ್ಲದೆ ಮದ್ಯ ಖರೀದಿಗೆ ರಶೀದಿಯನ್ನು ನೀಡುತ್ತಿಲ್ಲ. ಜೊತೆಗೆ ಸಾರ್ವಜನಿಕರಿಗೆ ಕಾಣುವಂತೆ ಮದ್ಯದ ಹೆಸರು ಹಾಗು ಬೆಲೆ ಪ್ರಕಟಗೊಳಿಸುತ್ತಿಲ್ಲ. ಈ ಮದ್ಯದಂಗಡಿಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶವಿದೆ. ಆದರೆ ಸ್ಥಳದಲ್ಲಿಯೇ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಈ ಎಲ್ಲಾ ವಿಚಾರಗಳಿಗೆ ಸಂಬಂಧಿಸಿದಂತೆ ಈಗಾಗಲೇ ಅಬಕಾರಿ ಇಲಾಖೆಗೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನಲೆಯಲ್ಲಿ ಕರ್ತವ್ಯ ಲೋಪದ ಆಧಾರದ ಮೇಲೆ ಇಲಾಖೆಯ ಠಾಣಾ ನಿರೀಕ್ಷಕ ಮತ್ತು ಉಪ ನಿರೀಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಮುಖಂಡರಾದ ಶೇಖರಪ್ಪ, ಸುಬ್ಬೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಉಪ ತಹಸೀಲ್ದಾರ್ ಅರಸು ಮತ್ತು ಮಂಜಾನಾಯ್ಕ ಮನವಿ ಸ್ವೀಕರಿಸಿದರು.