ಬಿ.ಎಸ್.ವೈ ಹುಟ್ಟುಹಬ್ಬ : ವಿಶೇಷ ಪೂಜೆ, ಬಡವರಿಗೆ ಹೊದಿಕೆ ವಿತರಣೆ
ಬಿ.ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಭಾನುವಾರ ಭದ್ರಾವತಿಯಲ್ಲಿ ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗು ಬಡ ವರ್ಗದ ಅಸಹಾಯಕರಿಗೆ ಮಲಗುವ ಹೊದಿಕೆ(ಬ್ಲಾಂಕೆಟ್) ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಫೆ. ೨೭: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕ್ಷೇತ್ರದಲ್ಲಿ ಪಕ್ಷದ ಶಾಸಕರಿಲ್ಲ ಎಂಬ ಕೊರಗನ್ನು ನೀಗಿಸಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿಸಿಕೊಟ್ಟಿದ್ದು, ಕ್ಷೇತ್ರದ ಜನರು ಇವರಿಗೆ ಚಿರಋಣಿಗಳಾಗಬೇಕಾಗಿದೆ ಎಂದು ಸ್ಥಳಿಯ ಬಿಜೆಪಿ ಮುಖಂಡರು ಪ್ರಶಂಸೆ ವ್ಯಕ್ತಪಡಿಸಿದರು.
ಬಿ.ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಭಾನುವಾರ ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಪೂಜೆ ಹಾಗು ಬಡ ವರ್ಗದ ಅಸಹಾಯಕರಿಗೆ ಮಲಗುವ ಹೊದಿಕೆ(ಬ್ಲಾಂಕೆಟ್) ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪಕ್ಷದ ಪ್ರಮುಖರಾದ ವಿ. ಕದಿರೇಶ್, ಜಿ. ಧರ್ಮ ಪ್ರಸಾದ್, ಜಿ. ಆನಂದಕುಮಾರ್, ಎಚ್.ಸಿ ರಮೇಶ್, ಎಸ್. ಕುಮಾರ್ ಮತ್ತು ಎಂ. ಮಂಜುನಾಥ್ ಹಾಗು ಮಹಿಳಾ ಮುಖಂಡರಾದ ಸುಲೋಚನಾ ಪ್ರಕಾಶ್ ಸೇರಿದಂತೆ ಇನ್ನಿತರರು, ಕ್ಷೇತ್ರದಲ್ಲಿ ಪಕ್ಷದ ಶಾಸಕರಿಲ್ಲದಿದ್ದರೂ ಸಹ ಇಲ್ಲಿನ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಸದಾಕಾಲ ಹುಮ್ಮಸ್ಸು ತುಂಬುವ ಜೊತೆಗೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಬಿ.ಎಸ್ ಯಡಿಯೂರಪ್ಪ ಹಾಗು ಸಂಸದ ಬಿ.ವೈ ರಾಘವೆಂದ್ರರವರು ಕೈಗೊಂಡಿದ್ದಾರೆ.
ಕುಡಿಯುವ ನೀರು, ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಮೂಲ ಸೌಕರ್ಯಗಳ ಜೊತೆಗೆ ಮಠ ಮಂದಿರಗಳ ಅಭಿವೃದ್ಧಿ, ಕಾರ್ಮಿಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಸೇವೆ ಒದಗಿಸಲು ಇಎಸ್‌ಐ ಆಸ್ಪತ್ರೆ, ಕೋವಿಡ್ ಸಂಕಷ್ಟದ ಸಮಯದಲ್ಲಿ ನೆರವಿನ ವ್ಯವಸ್ಥೆ, ಬಡ ಹಾಗು ಮಧ್ಯಮ ವರ್ಗದ ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ರೈಲುಗಳ ವ್ಯವಸ್ಥೆ, ರೈಲ್ವೆ ಸೇತುವೆ ನಿರ್ಮಾಣ ಸೇರಿದಂತೆ ಹಲವಾರು ಅಭಿವೃದ್ಧಿಗಳನ್ನು ಯಾವುದೇ ಫಲಾಫೇಕ್ಷೆ ಇಲ್ಲದೆ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಇಂತಹ ಧೀಮಂತ ನಾಯಕರ ಹುಟ್ಟುಹಬ್ಬವನ್ನು ಎಲ್ಲರೂ ಒಗ್ಗಟ್ಟಾಗಿ ಸಂಭ್ರಮದಿಂದ ಆಚರಿಸುವಂತಾಗಿದೆ ಎಂದರು.
ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ಯುವ ಮುಖಂಡ ಕೆ. ಮಂಜುನಾಥ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪ್ರಮುಖರಾದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ದುಗ್ಗೇಶ್ ತೇಲ್ಕರ್, ತಮಿಳು ಸಮಾಜದ ನಾರಾಯಣ, ರವಿಚಂದ್ರ, ಮಣಿ ಎಎನ್‌ಎಸ್, ಎನ್. ರಾಮಕೃಷ್ಣ, ರಾಮನಾಥ ಬರ್ಗೆ, ಬಿ.ಎಸ್ ಶ್ರೀನಾಥ್, ಸುಬ್ರಮಣ್ಯ, ಎಂ.ಎಸ್ ಸುರೇಶಪ್ಪ, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ನಗರಸಭಾ ಸದಸ್ಯೆ ಶಶಿಕಲಾ ನಾರಾಯಣಪ್ಪ, ಅನ್ನಪೂರ್ಣ ಸಾವಂತ್, ಮಂಜುಳ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.