ನೌಕರರ ಸಲಹೆ-ಸಹಕಾರ ಕೋರಿದ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ
![](https://blogger.googleusercontent.com/img/a/AVvXsEjSKiBKs0r1ELtpA5zKFS1p4OtOAXPjxerpv-TXTwSMgGCZ1vWQR20_LFhwOXdwtvaeLv-3sFUtHRYCSehW7JiXzfQIWQjAZie3BOkYNRieSKUfS3Q6rzvMaWBP1z2LSw70pGSbHYly8st09zTAzFFKVHAU24zzvzTqPB_-MeizvZDLe4T6JrZEFmnskw=w400-h173-rw)
ಭದ್ರಾವತಿ ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿರುವ ನಾಗೇಂದ್ರಪ್ಪರವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿಯವರನ್ನು ಭೇಟಿ ಮಾಡಿ ಅಭಿನಂದಿಸಿದರು.
ಭದ್ರಾವತಿ, ಮಾ. ೯: ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿರುವ ನಾಗೇಂದ್ರಪ್ಪರವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿಯವರನ್ನು ಭೇಟಿ ಮಾಡಿ ಅಭಿನಂದಿಸಿದರು.
ತಾಲೂಕಿನಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಸಮಸ್ತ ನೌಕರರ ಸಲಹೆ-ಸಹಕಾರ ಅಗತ್ಯವಿದ್ದು, ಈ ಹಿನ್ನಲೆಯಲ್ಲಿ ಪೂರಕವಾಗಿ ಸ್ಪಂದಿಸುವಂತೆ ಮನವಿ ಮಾಡಿದರು.
ಸಿ.ಎಸ್ ಷಡಾಕ್ಷರಿ ಮಾತನಾಡಿ, ಶಿಕ್ಷಕರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸುವ ಜೊತೆಗೆ ಪ್ರಸ್ತುತ ಶಿಕ್ಷಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಲು ಕ್ರಮ ಕೈಗೊಳ್ಳಬೇಕೆಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ಬಿ ರುದ್ರಪ್ಪ, ಉಪಾಧ್ಯಕ್ಷ ದಿನೇಶ್, ಸಾಹಿತಿ ಅರಳೇಹಳ್ಳಿ ಅಣ್ಣಪ್ಪ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಯು. ಮಹದೇವಪ್ಪ, ನಿರ್ದೇಶಕ ಡಿ.ಎಸ್ ಬಸವಂತರಾವ್ ದಾಳೆ, ಸಂಘದ ಸದ್ಯಸ್ಯರಾದ ಆರ್.ಟಿ ಲೋಹಿತೇಶಪ್ಪ, ಜಾನಪದ ಕಲಾವಿದ ಶಿಕ್ಷಕ ರೇವಣಪ್ಪ, ಸಿಆರ್‌ಪಿ ಚನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.