ಭದ್ರಾವತಿಯಲ್ಲಿ ವೀರಯೋಧರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಬುಧವಾರ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಪುಣ್ಯ ಸ್ಮರಣೆ ವಿಶೇಷವಾಗಿ ಆಚರಿಸಲಾಯಿತು.
ಭದ್ರಾವತಿ, ಮಾ. ೨೩: ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಬುಧವಾರ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಪುಣ್ಯ ಸ್ಮರಣೆ ವಿಶೇಷವಾಗಿ ಆಚರಿಸಲಾಯಿತು.
ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗೃಹ ಕಛೇರಿಯಲ್ಲಿ ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ವೀರಯೋಧರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಭಗತ್ ಸಿಂಗ್‌ರವರ ದೇಶ ಪ್ರೇಮ, ಆದರ್ಶತನ ಹಾಗು ಕ್ರಾಂತಿಕಾರಿ ಹೋರಾಟಗಳನ್ನು ಸ್ಮರಿಸಲಾಯಿತು. ಇದಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ಬೈಕ್ ರ್‍ಯಾಲಿ ನಡೆಸಲಾಯಿತು.
ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಆಫ್ತಬ್ ಅಹಮದ್ ನೇತೃತ್ವ ವಹಿಸಿದ್ದರು. ಉದ್ಯಮಿ ಬಿ.ಕೆ ಜಗನ್ನಾಥ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ವಕ್ತಾರ ಆಮೋಸ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಬಿ. ಗಂಗಾಧರ್, ಅಸಂಘಟಿತ ಕಾರ್ಮಿಕ ವಲಯ ನಗರ ಘಟಕದ ಅಧ್ಯಕ್ಷ ಐಸಾಕ್ ಲಿಂಕನ್, ಗ್ರಾಮಾಂತರ ಯುವ ಕಾಂಗ್ರೆಸ್ ಉಪಾಧ್ಯಕ್ಷ ತಬ್ರೆಜ್ ಖಾನ್, ನವೀನ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಸಜ್ಜದ್, ಆನಂದ್, ವರುಣ್ ಹಾಗು ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.