೧ ಕೆ.ಜಿ ಬೆಳ್ಳಿ ಗದೆ, ೫೦ ಸಾವಿರ ರು. ನಗದು ಬಹುಮಾನ
೩೩ ಗ್ರಾಮ ದೇವತೆಗಳಿಗೆ ಅದಿದೇವತೆಯಾಗಿರುವ ಭದ್ರಾವತಿ ಹಳೇನಗರದ ಶ್ರೀ ಹಳದಮ್ಮ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಕನಕ ಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ಅಂತರಾಜ್ಯ ಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಯಲ್ಲಿ ನಗರದ ಕುಸ್ತಿಪಟು ಕಿರಣ್ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ಭದ್ರಾವತಿ, ಮೇ. ೯ : ೩೩ ಗ್ರಾಮ ದೇವತೆಗಳಿಗೆ ಅದಿದೇವತೆಯಾಗಿರುವ ಹಳೇನಗರದ ಶ್ರೀ ಹಳದಮ್ಮ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಕನಕ ಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ಅಂತರಾಜ್ಯ ಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಯಲ್ಲಿ ನಗರದ ಕುಸ್ತಿಪಟು ಕಿರಣ್ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ಪ್ರತಿ ೨ ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಸಾಂಪ್ರದಾಯಿಕ ಕ್ರೀಡೆಯಾಗಿರುವ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ಅಂತಿಮ ಪಂದ್ಯಾವಳಿಯಲ್ಲಿ ಭದ್ರಾವತಿ ಕಿರಣ್ ಮತ್ತು ಪಂಜಾಬ್‌ನ ರಾಕೇಶ್ ಕಾಳ ನಡುವೆ ರೋಚಕ ಸ್ಪರ್ಧೆ ನಡೆದು ಅಂತಿಮವಾಗಿ ಕಿರಣ್ ಜಯಶೀಲರಾಗುವ ಮೂಲಕ ಪ್ರಥಮ ಬಹುಮಾನ ೧ ಕೆ.ಜಿ ಬೆಳ್ಳಿ ಗದೆ ಮತ್ತು ೫೦ ಸಾವಿರ ರು. ನಗದು ಬಹುಮಾನ ಪಡೆದುಕೊಂಡಿದ್ದಾರೆ.
ಶಾಸಕ ಬಿ.ಕೆ ಸಂಗಮೇಶ್ವರ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಮತ್ತು ಉದ್ಯಮಿ ಮಾರುತಿ ಮೆಡಿಕಲ್ ಆನಂದ್, ದೇವಸ್ಥಾನ ಸೇವಾ ಸಮಿತಿ ಕಾರ್ಯದರ್ಶಿ ಬಿ.ಎಂ ಸಂತೋಷ್ ಹಾಗು ಪದಾಧಿಕಾರಿಗಳು, ಕೇಸರಿ ಪಡೆ ಗಿರೀಶ್, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.