ಭಾವಸಾರ ಕ್ಷತ್ರೀಯ ಸಮಾಜದ ವತಿಯಿಂದ ಭದ್ರಾವತಿ ಭೂತನಗುಡಿಯಲ್ಲಿರುವ ಕೃಷ್ಣ ರುಕ್ಮಿಣಿ ದೇವಸ್ಥಾನದಲ್ಲಿ ೩ ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ದಿಂಡಿ ಉತ್ಸವ ಅಂಗವಾಗಿ ಕೊನೆಯ ದಿನವಾದ ಶುಕ್ರವಾರ ಬೆಳಿಗ್ಗೆ ರಾಜಬೀದಿ ಉತ್ಸವ ನಡೆಯಿತು.
ಭದ್ರಾವತಿ, ಮೇ. ೧೩: ಭಾವಸಾರ ಕ್ಷತ್ರೀಯ ಸಮಾಜದ ವತಿಯಿಂದ ನಗರದ ಭೂತನಗುಡಿಯಲ್ಲಿರುವ ಕೃಷ್ಣ ರುಕ್ಮಿಣಿ ದೇವಸ್ಥಾನದಲ್ಲಿ ೩ ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ದಿಂಡಿ ಉತ್ಸವ ಅಂಗವಾಗಿ ಕೊನೆಯ ದಿನವಾದ ಶುಕ್ರವಾರ ಬೆಳಿಗ್ಗೆ ರಾಜಬೀದಿ ಉತ್ಸವ ನಡೆಯಿತು.
ನಗರದ ಬಿ.ಎಚ್ ರಸ್ತೆ, ಸಿ.ಎನ್ ರಸ್ತೆ, ತರಕೆರೆ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅಲಂಕೃತಗೊಂಡ ರಥದಲ್ಲಿ ಕೃಷ್ಣ ರುಕ್ಮಿಣಿ ಮೂರ್ತಿಗಳ ಉತ್ಸವ ಮೆರವಣಿಗೆ ನಡೆಯಿತು.
ಉತ್ಸವದಲ್ಲಿ ಭಾವಸಾರ ಕ್ಷತ್ರೀಯ ಸಮಾಜದವರು ಭಜನೆ, ಕೀರ್ತನೆಗಳೊಂದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
. ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಪ್ರಮುಖರು, ಗಣ್ಯರು, ಜನಪ್ರತಿನಿಧಿಗಳು ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಭಾವಸಾರ ಕ್ಷತ್ರೀಯ ಸಮಾಜದ ಅಧ್ಯಕ್ಷ ಡಿ.ಕೆ ರಾಘವೇಂದ್ರರಾವ್ ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು.