ಪೌರಾಯುಕ್ತ ಎಚ್.ಎಂ ಮನುಕುಮಾರ್‌ಗೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಮನವಿ
ಭದ್ರಾವತಿ ನಗರಸಭೆ ವ್ಯಾಪ್ತಿಯ ವಿವಿಧ ಬೇಡಿಕೆಗಳ ಕುರಿತು ಮೇ.೩೦ರಂದು ನಡೆಯಲಿರುವ ಸಾಮಾನ್ಯಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ನಗರಸಭೆ ಪೌರಾಯುಕ್ತ ಎಚ್.ಎಂ ಮನುಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಮೇ. ೨೩: ನಗರಸಭೆ ವ್ಯಾಪ್ತಿಯ ವಿವಿಧ ಬೇಡಿಕೆಗಳ ಕುರಿತು ಮೇ.೩೦ರಂದು ನಡೆಯಲಿರುವ ಸಾಮಾನ್ಯಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ನಗರಸಭೆ ಪೌರಾಯುಕ್ತ ಎಚ್.ಎಂ ಮನುಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
ಜನ್ನಾಪುರ ಸರ್ವೆ ನಂ.೭೦ರ ಸುಮಾರು ೪೫ ಎಕರೆ ೨೦ ಗುಂಟೆ ವಿಸ್ತೀರ್ಣವುಳ್ಳ ಕೆರೆಗೆ ಸಮೀಪದ ಜನ ವಸತಿ ಪ್ರದೇಶಗಳಿಂದ ಕಲ್ಮಶಗೊಂಡ ನೀರು ಬಂದು ಸೇರುತ್ತಿದ್ದು, ಇದನ್ನು ತಡೆಯಲು ಸುಮಾರು ೩ ಕೋ. ರು. ವೆಚ್ಚದಲ್ಲಿ ರಾಜಕಾಲುವೆ ನಿರ್ಮಾಣ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡುವ ಕುರಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದು.
ಕೇಂದ್ರ ಸರ್ಕಾರದ ಕ್ಯಾಚ್ ದ ರೈನ್ (ಮಳೆ ನೀರು ಹಿಡಿಯಿರಿ) ಯೋಜನೆಗೆ ಹಿಂಬುಕೊಡಲು ನಗರಸಭೆ ವ್ಯಾಪ್ತಿಯಲ್ಲಿರುವ ಸುಮಾರು ೭೦ ಕೆರೆಗಳ ಬೌಂಡರಿ ನಿಗದಿಪಡಿಸಿ ಬಸಿ ಕಾಲುವೆ (ಟ್ರಂಚ್) ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಗರಸಭೆಗೆ ೫ ಕೋ. ರು. ವಿಶೇಷ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಕುರಿತು ಚರ್ಚಿಸುವುದು.
ನಟ, ಸಮಾಜ ಸೇವಕ, ಕರ್ನಾಟಕ ರತ್ನ, ಡಾ. ಪುನೀತ್ ರಾಜ್‌ಕುಮಾರ್ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ವಾರ್ಡ್ ನಂ.೧೫ರ ಸುಮಾರು ೮೦೦ ವರ್ಷಗಳ ಇತಿಹಾಸವಿರುವ ೫೦ ಎಕರೆ ೨೦ ಗುಂಟೆ ವಿಸ್ತೀರ್ಣವುಳ್ಳ ಹೊಸಮನೆ ಸರ್ಕಾರಿ ಹಿರೇಕೆರೆಗೆ ಅವರ ಹೆಸರನ್ನು ನಾಮಕರಣಗೊಳಿಸಿ ಆಕರ್ಷಕ ಪ್ರವಾಸಿ ತಾಣವನ್ನಾಗಿಸುವ ಸಂಬಂಧ ಹಾಗು ಜನ್ನಾಪುರ ಸರ್ವೆ ನಂ.೭೦ರ ಸುಮಾರು ೪೫ ಎಕರೆ ೨೦ ಗುಂಟೆ ವಿಸ್ತೀರ್ಣವುಳ್ಳ ಕೆರೆಗೆ ನಗರದ ಅನ್ನದಾತ, ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಅವರ ಹೆಸರನ್ನು ನಾಮಕರಣಗೊಳಿಸುವ ಸಂಬಂಧ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳ ಕುರಿತು ಸಾಮಾನ್ಯ ಸಭೆಯಲ್ಲಿ ಚರ್ಚಿಸುವಂತೆ ಮನವಿ ಮಾಡಲಾಗಿದೆ.
ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ಛೇರ್‍ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಮನವಿ ಸಲ್ಲಿಸಿದರು. ಕಂದಾಯಾಧಿಕಾರಿ ರಾಜ್‌ಕುಮಾರ್ ಉಪಸ್ಥಿತರಿದ್ದರು.