ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಸ್. ವರದರಾಜ ಅವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಭದ್ರಾವತಿ, ಜೂ. ೩; ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಸ್. ವರದರಾಜ ಅವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
೮೧ ಕೆ.ಜಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಗೆ ಜಿಲ್ಲಾ ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಕ್ರೀಡಾಭಿಮಾನಿಗಳು ಅಭಿನಂಧಿಸಿದ್ದಾರೆ.