Monday, June 6, 2022
ಅಪಘಾತದಲ್ಲಿ ಅಪರಿಚಿತ ವಯೋವೃದ್ಧ ಮೃತ
ಭದ್ರಾವತಿ ನಗರದ ವಿವಿಧೆಡೆ ವಿಶ್ವ ಪರಿಸರ ದಿನಾಚರಣೆ
Sunday, June 5, 2022
ಅಗ್ನಿಶಾಮಕ ಠಾಣೆಯಲ್ಲಿ ವಿಶ್ವ ಪರಿಸರ ದಿನ
ಸ್ವಯಂ ಪ್ರೇರಣೆಯಿಂದ ಎಲ್ಲರೂ ಕೈಜೋಡಿಸಿದಾಗ ಮಾತ್ರ ಪರಿಸರ ರಕ್ಷಣೆ ಸಾಧ್ಯ : ಚನ್ನಪ್ಪ
Saturday, June 4, 2022
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಮಾಜಿಕ ಚಟುವಟಿಕೆಗಳಲ್ಲೂ ಮುಂಚೂಣಿ
ಸಚಿವ ನಾಗೇಶ್‌ರನ್ನು ಸಂಪುಟದಿಂದ ವಜಾಗೊಳಿಸಿ : ಎನ್‌ಎಸ್‌ಯುಐ ವತಿಯಿಂದ ಪ್ರತಿಭಟನೆ
ರಾಜ್ಯದ ಬಿಜೆಪಿ ಸರ್ಕಾರ ಶಾಲಾ ಪಠ್ಯ ಪುಸ್ತಕವನ್ನು ಕೇಸರೀಕರಣಗೊಳಿಸುವ ಹುನ್ನಾರ ನಡೆಸುತ್ತಿದ್ದು, ಇದಕ್ಕೆ ಪೂರಕವೆಂಬಂತೆ ಸಂಘ ಪರಿಹಾರದ ಹಿನ್ನಲೆಯುಳ್ಳ ರೋಹಿತ್ ಚಕ್ರತೀರ್ಥ ಅವರನ್ನು ಶಾಲಾ ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಜನರ ದಿಕ್ಕು ತಪ್ಪಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ತಕ್ಷಣ ಶಿಕ್ಷಣ ಸಚಿವ ನಾಗೇಶ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಶನಿವಾರ ಭದ್ರಾವತಿಯಲ್ಲಿ ಎನ್‌ಎಸ್‌ಯುಐ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಜೂ. ೪: ರಾಜ್ಯದ ಬಿಜೆಪಿ ಸರ್ಕಾರ ಶಾಲಾ ಪಠ್ಯ ಪುಸ್ತಕವನ್ನು ಕೇಸರೀಕರಣಗೊಳಿಸುವ ಹುನ್ನಾರ ನಡೆಸುತ್ತಿದ್ದು, ಇದಕ್ಕೆ ಪೂರಕವೆಂಬಂತೆ ಸಂಘ ಪರಿಹಾರದ ಹಿನ್ನಲೆಯುಳ್ಳ ರೋಹಿತ್ ಚಕ್ರತೀರ್ಥ ಅವರನ್ನು ಶಾಲಾ ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಜನರ ದಿಕ್ಕು ತಪ್ಪಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ತಕ್ಷಣ ಶಿಕ್ಷಣ ಸಚಿವ ನಾಗೇಶ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಶನಿವಾರ ಎನ್‌ಎಸ್‌ಯುಐ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ರಾಷ್ಟ್ರಕವಿ ಕುವೆಂಪು ಅವರು ಕೊಡುಗೆಯಾಗಿ ನೀಡಿರುವ ನಾಡಗೀತೆಗೆ ಅವಮಾನ ಮಾಡುವಂತಹ ರಾಷ್ಟ್ರದ್ರೋಹಿ, ಸಂಘ ಪರಿಹಾರದ ಹಿನ್ನಲೆಯ ರೋಹಿತ್ ಚಕ್ರತೀರ್ಥರನ್ನು ಪಠ್ಯಪುಸ್ತಕ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯವಾಗಿದೆ. ಶಾಲಾ ಪಠ್ಯಪುಸ್ತಕವನ್ನು ಕೇಸರೀಕರಣಗೊಳಿಸಿ ವಿದ್ಯಾರ್ಥಿಗಳಲ್ಲಿ ಕೋಮು ದ್ವೇಷ ಭಾವನೆ ಉಂಟು ಮಾಡಲಾಗುತ್ತಿದೆ. ತಕ್ಷಣ ರೋಹಿತ್ ಚಕ್ರತೀರ್ಥರನ್ನು ಅಮಾನತುಗೊಳಿಸಿ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.
ಪಠ್ಯಪುಸ್ತಕ ಕೇಸರೀಕರಣಗೊಳಿಸುತ್ತಿರುವ ಕ್ರಮ ಖಂಡಿಸಿ ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಸೇರಿ ೨೦ ಮಂದಿ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಅವರನ್ನು ಜೈಲಿಗಟ್ಟುವ ಮೂಲಕ ರಾಜ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದನ್ನು ಎನ್‌ಎಸ್‌ಯುಐ ತೀವ್ರವಾಗಿ ಖಂಡಿಸುತ್ತದೆ. ತಕ್ಷಣ ದಾಖಲಾಗಿರುವ ಸುಳ್ಳು ಮೊಕದ್ದಮೆಯನ್ನು ವಜಾಗೊಳಿಸಿ ಬಂಧಿತರನ್ನು ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ಎನ್‌ಎಸ್‌ಯುಐ ತಾಲೂಕು ಅಧ್ಯಕ್ಷ ಮುಸ್ವೀರ್ ಬಾಷ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ನಗರಸಭಾ ಸದಸ್ಯ ಆರ್. ಶ್ರೇಯಸ್(ಚಿಟ್ಟೆ), ಜೆಬಿಟಿ ಬಾಬು ಸೇರಿದಂತೆ ಎನ್‌ಎಸ್‌ಯುಐ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.