ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ಪೂರ್ವಭಾವಿ ಸಭೆ
೫ ಕೋ.ರು ವೆಚ್ಚದಲ್ಲಿ ಭದ್ರಾವತಿ ಉಜ್ಜನಿಪುರದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾರ್ಮಿಕರ ಭವನದ ಗುದ್ದಲಿ ಪೂಜೆ ಕಾರ್ಯಕ್ರಮದ ಪೂರ್ವಭಾವಿ ಸಭೆ ಶನಿವಾರ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ನಡೆಯಿತು.
ಭದ್ರಾವತಿ, ಜೂ. ೨೫ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನಗರದಲ್ಲಿ ನೂತನ ಕಾರ್ಮಿಕರ ಭವನ ಮಂಜೂರಾತಿಯಾಗಿದ್ದು, ಸುಮಾರು ೫ ಕೋ. ರು. ವೆಚ್ಚದ ಭವನದ ಗುದ್ದಲಿ ಪೂಜೆ ಜೂ.೨೮ರಂದು ನಡೆಯಲಿದೆ. ಈ ಸಂಬಂಧ ಸಂಸದ ಬಿ.ವೈ ರಾಘವೇಂದ್ರ ಶನಿವಾರ ನಗರದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಕ್ಷೇತ್ರದಲ್ಲಿ ಅಸಂಘಟಿತ ಹಾಗು ವಲಸೆ ಕಾರ್ಮಿಕರು ಹೆಚ್ಚಾಗಿದ್ದು, ಅಲ್ಲದೆ ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ತಾತ್ಕಾಲಿಕ ವಸತಿ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಕಾರ್ಮಿಕರ ಭವನದಲ್ಲಿ ವಸತಿ ಸಮುಚ್ಚಯ ನಿರ್ಮಾಣಗೊಳ್ಳಲಿದೆ. ಎಂಪಿಎಂ ಕಾರ್ಖಾನೆ ಸೇರಿದ ಉಜ್ಜನಿಪುರ ವ್ಯಾಪ್ತಿಯಲ್ಲಿ ೨ ಎಕರೆ ಜಮೀನು ಮಂಜೂರಾತಿ ಮಾಡಲಾಗಿದೆ. ಭವನ ನಿರ್ಮಾಣಕ್ಕೆ ಜೂ.೨೮ರಂದು ಮಧ್ಯಾಹ್ನ ೧ ಗಂಟೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಂಸದರು ವಿವಿಧ ಕಾರ್ಮಿಕ ಸಂಘಟನೆಗಳು, ತಹಸೀಲ್ದಾರ್, ನಗರಸಭೆ ಅಧಿಕಾರಿಗಳು ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ತಹಸೀಲ್ದಾರ್ ಆರ್. ಪ್ರದೀಪ್, ಜಿಲ್ಲಾ ಕಾರ್ಮಿಕ ಅಧಿಕಾರಿ, ಕಾರ್ಮಿಕ ನಿರೀಕ್ಷಕರು, ನಗರಸಭೆ ಅಧಿಕಾರಿಗಳು, ಕರ್ನಾಟಕ ಸ್ಟೇಟ್ ಕನಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಅಧ್ಯಕ್ಷ ಚಂದ್ರಶೇಖರ್ ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು.