ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಭದ್ರಾವತಿಯಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಜೂ.೨೮ರಂದು ಹಮ್ಮಿಕೊಳ್ಳಲಾಗಿದ್ದು, ಶಿಬಿರ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಶನಿವಾರ ಸಂಸದ ಬಿ.ವೈ ರಾಘವೇಂದ್ರ ಬಿಜೆಪಿ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸಿದರು.
ಭದ್ರಾವತಿ, ಜೂ. ೨೫ : ಕ್ಷೇತ್ರದಲ್ಲಿರುವ ಅಸಂಘಟಿತ ಹಾಗು ವಲಸೆ ಕಾರ್ಮಿಕರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರ ಆರೋಗ್ಯ ಕಾಳಜಿ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಜೂ.೨೮ರಂದು ಹಮ್ಮಿಕೊಳ್ಳಲಾಗಿದ್ದು, ಶಿಬಿರ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಶನಿವಾರ ಸಂಸದ ಬಿ.ವೈ ರಾಘವೇಂದ್ರ ಬಿಜೆಪಿ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸಿದರು.
ಕ್ಷೇತ್ರದಲ್ಲಿರುವ ಅಸಂಘಟಿತ ಹಾಗು ವಲಸೆ ಕಾರ್ಮಿಕರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರನ್ನು ಗುರುತಿಸಿ ಉಚಿತ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಶಿವಮೊಗ್ಗ ಮ್ಯಾಕ್ಸ್ ಆಸ್ಪತ್ರೆ ಸಹಯೋಗದೊಂದಿಗೆ ಕಾರ್ಮಿಕರ ಕಲ್ಯಾಣ ಮಂಡಳಿ ಮುಂದಾಗಿದೆ. ಜೂ.೨೮ರಂದು ಬೆಳಿಗ್ಗೆ ೯ ಗಂಟೆಗೆ ಶಿಬಿರ ಆರಂಭಗೊಳ್ಳಲಿದ್ದು, ಎಲ್ಲಾ ರೀತಿಯ ಕಾಯಿಲೆಗಳ ತಪಾಸಣೆ ನಡೆಯಲಿದೆ. ಹೆಚ್ಚಿನ ಚಿಕಿತ್ಸೆಗೂ ಅವಕಾಶ ಕಲ್ಪಿಸಿಕೊಡಲಿದ್ದು, ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಬೃಹತ್ ಶಿಬಿರ ಇದಾಗಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಕಾಳಜಿವಹಿಸಿ ಶಿಬಿರ ಯಶಸ್ವಿಗೊಳಿಸುವಂತೆ ಸಂಸದರು ಸಲಹೆ ನೀಡಿದರು.
ಸಭೆಯಲ್ಲಿ ಪಕ್ಷದ ಪ್ರಮುಖರಾದ ಎಂ. ಪ್ರಭಾಕರ್, ಬಿ.ಕೆ ಶ್ರೀನಾಥ್, ಎಸ್. ಕುಮಾರ್, ಮಂಗೋಟೆ ರುದ್ರೇಶ್, ಜಿ. ಆನಂದ್‌ಕುಮಾರ್, ಹೇಮಾವತಿ ವಿಶ್ವನಾಥ್, ಕೆ. ಮಂಜುನಾಥ್, ರಾಮಲಿಂಗಯ್ಯ, ಚಂದ್ರಪ್ಪ, ಶಶಿಕಲಾ, ಅನ್ನಪೂರ್ಣ, ಪ್ರಭಾಕರ್, ರವಿಕುಮಾರ್, ಕರಿಗೌಡ, ಕವಿತಾ ರಾವ್, ಬಿ.ಎಸ್ ನಾರಾಯಣಪ್ಪ, ರಾಮನಾಥ್ ಬರ್ಗೆ, ಚನ್ನೇಶ್, ಶೋಭಾ ಪಾಟೀಲ್, ಮಂಜುಳ, ಎಸ್.ಎನ್ ನಾಗಮಣಿ, ಗೋಕುಲ್‌ಕೃಷ್ಣ, ನಕುಲ್, ಧನುಷ್, ಮಲ್ಲೇಶ್, ವಿಜಯ್, ಚಂದ್ರು ದೇವರಹಳ್ಳಿ ಸೇರಿದಂತೆ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.