ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಭದ್ರಾವತಿಯಲ್ಲಿ ಶುಕ್ರವಾರ ವೈದ್ಯರ ದಿನಾಚರಣೆ ಅಂಗವಾಗಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಜು. ೧: ಸಮಾಜಕ್ಕೆ ವೈದ್ಯರ ಸೇವೆ ಸ್ಮರಣೀಯವಾಗಿದ್ದು, ವೈದ್ಯ ವೃತ್ತಿಯನ್ನು ಗೌರವಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರ ಎಂಬ ಸಂದೇಶದೊಂದಿಗೆ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಶುಕ್ರವಾರ ವೈದ್ಯರ ದಿನಾಚರಣೆ ಅಂಗವಾಗಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ತಾಲೂಕಿನ ವೈದ್ಯರ ಸಮೂಹದ ಪರವಾಗಿ ಡಾ. ಎಂ.ವಿ ಅಶೋಕ್ ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಸಿಹಿ ಹಂಚಲಾಯಿತು. ಡಾ. ಎಂ.ವಿ ಅಶೋಕ್ ಮಾತನಾಡಿ, ವೈದ್ಯರ ವೃತ್ತಿ ಸೇವೆಯನ್ನು ಗುರುತಿಸಿ ಗೌರವಿಸುತ್ತಿರುವುದು ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ. ವೈದ್ಯರಿಗೆ ಸಮಾಜದಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಅಧ್ಯಕ್ಷ ಚಂದ್ರಶೇಖರ್, ಕಾರ್ಯಾಧ್ಯಕ್ಷ ಅಭಿಲಾಷ್, ಪ್ರಮುಖರಾದ ಮನೋಹರ್, ಶಿವಣ್ಣಗೌಡ, ನಗರಸಭಾ ಸದಸ್ಯರಾದ ಜಾರ್ಜ್, ಬಸವರಾಜ ಆನೇಕೊಪ್ಪ, ವೆಂಕಟೇಶ್ ಉಜ್ಜನಿಪುರ, ಹಿರಿಯ ಅರೋಗ್ಯ ಸಹಾಯಕ ಆನಂದ ಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.