ಭದ್ರಾವತಿ ಕಡದಕಟ್ಟೆ ರೈಲ್ವೆ ಗೇಟ್ ಬಳಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸೋಮವಾರ ಸಂಸದ ಬಿ.ವೈ ರಾಘವೇಂದ್ರ ವೀಕ್ಷಿಸಿದರು.
ಭದ್ರಾವತಿ, ಜು. ೧೧: ನಗರದ ಕಡದಕಟ್ಟೆ ರೈಲ್ವೆ ಗೇಟ್ ಬಳಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸೋಮವಾರ ಸಂಸದ ಬಿ.ವೈ ರಾಘವೇಂದ್ರ ವೀಕ್ಷಿಸಿದರು.
ಕೆಲವು ತಿಂಗಳಿನಿಂದ ಕಾಮಗಾರಿ ಆರಂಭಗೊಂಡಿದ್ದು, ಶಿವಮೊಗ್ಗ-ಭದ್ರಾವತಿ ನಡುವೆ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಈ ನಡುವೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸಂಸದ ರಾಘವೇಂದ್ರ ಮಳೆ ನಡುವೆಯೂ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೈಲ್ವೆ ಅಧಿಕಾರಿಗಳಿಗೆ ತ್ವರಿತಗತಿಯಲ್ಲಿ ಕಾಮಗಾರಿ ಕೈಗೊಳ್ಳುವ ಜೊತೆಗೆ ಗುಣಮಟ್ಟಕ್ಕೆ ಹೆಚ್ಚಿನ ಗಮನ ನೀಡುವಂತೆ ಹಾಗು ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಎಚ್ಚರವಹಿಸುವಂತೆ ಸೂಚಿಸಿದರು.
ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಅಭಿಯಂತರ ಸತೀಶ್, ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಕಾರ್ಯದರ್ಶಿ ಎಂ. ಪ್ರಭಾಕರ್, ಸ್ಥಳೀಯ ಮುಖಂಡರಾದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಕಾರ್ಯದರ್ಶಿ ಚನ್ನೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ತಾಲೂಕು ಪಂಚಾಯಿತಿ ಸದಸ್ಯ ಕೆ. ಮಂಜುನಾಥ್, ನಗರಸಭಾ ಸದಸ್ಯ ವಿ. ಕದಿರೇಶ್, ಹಟ್ಟಿ ಚಿನ್ನದ ಗಣಿ ಆಡಳಿತ ಮಂಡಳಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ಎಸ್.ಎಸ್ ಜ್ಯೋತಿ ಪ್ರಕಾಶ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.