ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಕಾರ್ಖಾನೆ ವೀಕ್ಷಣೆಗೆ ಅವಕಾಶ
ಕೇಂದ್ರ ಸರ್ಕಾರದ ಉಕ್ಕು ಸಚಿವಾಲಯದಿಂದ 'ಆಜಾದಿ ಕಾ ಅಮೃತ್ ಮಹೋತ್ಸವ'ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ 'ಐಕಾನಿಕ್ ವೀಕ್ ಆಚರಣೆ' ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಂಬಂಧ ವಿದ್ಯಾರ್ಥಿಗಳಿಗೆ ಕಾರ್ಖಾನೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.
ಭದ್ರಾವತಿ, ಜು. ೧೨: ಕೇಂದ್ರ ಸರ್ಕಾರದ ಉಕ್ಕು ಸಚಿವಾಲಯದಿಂದ 'ಆಜಾದಿ ಕಾ ಅಮೃತ್ ಮಹೋತ್ಸವ'ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ 'ಐಕಾನಿಕ್ ವೀಕ್ ಆಚರಣೆ' ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಯಶಸ್ವಿಯಾಗಿ ಜರುಗಿತು.
ಜು.೪ರಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ೯ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ 'ಕಾರ್ಬನ್ ಡೈಆಕ್ಸೆಡ್ ಹೊರಸೂಸುವಿಕೆಯ ಕಡಿತ-ತತ್ಸಮಯದ ಅವಶ್ಯಕತೆ' ವಿಷಯ ಕುರಿತು ಪ್ರಬಂಧ ಬರೆಯುವ ಸ್ಪರ್ಧೆಯನ್ನು ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಪ್ರೌಢಶಾಲೆ ಮತ್ತು ಪಿ.ಯು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ನಡೆದ ಸ್ಪರ್ಧೆಯಲ್ಲಿ ತಾಲೂಕಿನ ವಿವಿಧ ಶಾಲಾ ಕಾಲೇಜುಗಳ ಒಟ್ಟು ೧೬೭ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತರಿಗೆ ಆ.೧೫ರ ಸ್ವಾತಂತ್ರ್ಯ ದಿನದಂದು ಪ್ರಶಸ್ತಿ ವಿತರಣೆ ನಡೆಯಲಿದೆ.
ವಿದ್ಯಾರ್ಥಿಗಳಲ್ಲಿ ಸ್ಟೀಲ್ ಪ್ಲಾಂಟ್ ಕಾರ್ಯದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಐಎಸ್‌ಎಲ್ ಕಾರ್ಖಾನೆಯಲ್ಲಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಪಿ.ಯು ಕಾಲೇಜಿನ ಸುಮಾರು ೩೦೦ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ವೀಕ್ಷಿಸಿದರು. ಫೋರ್ಜ್ ಪ್ಲಾಂಟ್, ಹೀಟ್ ಟ್ರೀಟ್‌ಮೆಂಟ್ ಶಾಪ್, ರೋಲ್ ಟರ್ನಿಂಗ್ ಶಾಪ್‌ಗಳಲ್ಲಿ ಸಂಬಂಧಿಸಿದ ತಂತ್ರಜ್ಞರೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಿದರು.
'ಐಕಾನಿಕ್ ವೀಕ್ ಆಚರಣೆ' ಕೊನೆಯ ದಿನ ಉಕ್ಕಿನ ಬಳಕೆಯ ವೀಡಿಯೋಗಳು ಮತ್ತು ಪೋಸ್ಟರ್‌ಗಳನ್ನು ನೌಕರರು ಮತ್ತು ಗುತ್ತಿಗೆ ಕಾರ್ಮಿಕರು ವೀಕ್ಷಿಸಲು ವಿಐಎಸ್‌ಎಲ್ ಇಂಟ್ರಾನೆಟ್ ವೆಬ್‌ಸೈಟ್ ಮತ್ತು ವಾಟ್ಸ್ ಆಪ್ ಗುಂಪುಗಳಲ್ಲಿ ಪ್ರದರ್ಶಿಸಲಾಯಿತು. ಅಲ್ಲದೆ ಸಾರ್ವಜನಿಕರ ವೀಕ್ಷಣೆಗೆ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗ ಡಿಜಿಟಲ್ ಫಲಕದಲ್ಲಿ ಪ್ರದರ್ಶಿಸಲಾಯಿತು.
ವಿಐಎಸ್‌ಎಲ್‌ನ ಉದ್ಯೋಗಿಗಳು ಮತ್ತು ಗುತ್ತಿಗೆ ಕಾರ್ಮಿಕರು 'ಐಕಾನಿಕ್ ವೀಕ್ ಆಚರಣೆಯ' ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಕೇಂದ್ರ ಸರ್ಕಾರದ ಉಕ್ಕು ಸಚಿವಾಲಯದಿಂದ 'ಆಜಾದಿ ಕಾ ಅಮೃತ್ ಮಹೋತ್ಸವ'ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ 'ಐಕಾನಿಕ್ ವೀಕ್ ಆಚರಣೆ' ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಯಶಸ್ವಿಯಾಗಿ ಜರುಗಿತು.
ಈ ಸಂಬಂಧ ಪ್ರೌಢಶಾಲೆ ಮತ್ತು ಪಿ.ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಬಂಧ ಬರೆಯುವ ಸ್ಪರ್ಧೆ ಆಯೋಜಿಸಲಾಗಿತ್ತು.