ದೊಡ್ಡೇರಿ ಗ್ರಾಮದಲ್ಲಿ ಚುಂಚಾದ್ರಿ ಮಹಿಳಾ ವೇದಿಕೆಯಿಂದ ಗುರು ಪೂರ್ಣಿಮಾ
ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಭದ್ರಾವತಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಮಂಗಳವಾರ ಗುರು ಪೂರ್ಣಿಮಾ ಕಾರ್ಯಕ್ರಮ ನಡೆಯಿತು. ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಭದ್ರಾವತಿ, ಜು. ೧೨: ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಮಂಗಳವಾರ ಗುರು ಪೂರ್ಣಿಮಾ ಕಾರ್ಯಕ್ರಮ ನಡೆಯಿತು.
ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಿದರು.
ಡಿ. ದೇವರಾಜ ಅರಸು ಸಂಶೋಧನಾ ಸಂಸ್ಥೆ ನಿರ್ದೇಶಕಿ, ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ಅಧ್ಯಕ್ಷತೆ ವಹಿಸಿ ಗುರು ಪೂರ್ಣಿಮಾ ಮಹತ್ವ ವಿವರಿಸಿದರು.
ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಪಾದ ಪೂಜೆ ನೆರವೇರಿತು. ಇದಕ್ಕೂ ಮೊದಲು ಶಿವಲಿಂಗಕ್ಕೆ ವಿಶೇಷ ಪೂಜೆ ಜರುಗಿತು. ಕುಂಚಕಲಾವಿದ ರಾಘವೇಂದ್ರ, ಭಜನಾ ಗುರು ನಾರಾಯಣ ಶೆಟ್ಟರ್, ವೀಣೆ ಶಿಕ್ಷಕ ಸೋಮು ಮತ್ತು ಸಂಗೀತ ಶಿಕ್ಷಕಿ ದಮಯಂತಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಉಪಾಧ್ಯಕ್ಷೆ ಪುಷ್ಪ ಕೇಶವಮೂರ್ತಿ, ಪ್ರಧಾನ ಕಾರ್ಯದರ್ಶಿ ಲತಾ ಪ್ರಭಾಕರ್, ಕಾರ್ಯದರ್ಶಿ ಶೀಲಾ ರವಿ, ಖಜಾಂಚಿ ಭಾರತಿ ಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಧನುಷ್ ಬೋಸ್ಲೆ, ಜೆ. ನಂದೀಶ್ ಹಾಗು ವೇದಿಕೆ ನಿರ್ದೇಶಕಿಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.