ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್ ಹಾಗು ಶಿವಸಾಯಿ ಕೃಪಾಧಾಮ ಟ್ರಸ್ಟ್ ವತಿಯಿಂದ ಗುರು ಪೂರ್ಣಿಮೆ ಹಲವು ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶಿಕ್ಷಕರ ಪಾದ ಪೂಜೆ ನೆರವೇರಿಸುವ ಮೂಲಕ ಗಮನ ಸೆಳೆದರು.
ಭದ್ರಾವತಿ, ಜು. ೧೩: ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್ ಹಾಗು ಶಿವಸಾಯಿ ಕೃಪಾಧಾಮ ಟ್ರಸ್ಟ್ ವತಿಯಿಂದ ಗುರು ಪೂರ್ಣಿಮೆ ಹಲವು ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.
ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶಿಕ್ಷಕರ ಪಾದ ಪೂಜೆ ನೆರವೇರಿಸುವ ಮೂಲಕ ಗಮನ ಸೆಳೆದರು. ಇದಕ್ಕೂ ಮೊದಲು ಓಂಕಾರ, ಜ್ಯೋತಿರ್ಧ್ಯಾನ, ಸುಪ್ರಭಾತ, ನಗರ ಸಂಕೀರ್ತನೆ, ಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಸಂಜೆ ಲಲಿತಸಹಸ್ರ ನಾಮಾರ್ಚನೆ, ವೇದಪಾರಾಯಣ, ಭಜನೆ, ಚಿಂತನ, ನಾದಸ್ವರ ಸೇವೆ, ಮಹಾಮಂಗಳಾರತಿ, ಪಾದುಕ ದರ್ಶನ ಮತ್ತು ಪ್ರಸಾದ ವಿತರಣೆ ಆಚರಣೆಗಳು ಜರುಗಿದವು.
ಶಿವಸಾಯಿ ಕೃಪಾಧಾಮದಲ್ಲಿ ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಶ್ರೀ ಸತ್ಯನಾರಾಯನ ಪೂಜೆ, ಗುರು ಪಾದುಕಾ ಪೂಜೆ, ಮಂಗಳಾರತಿ ಮತ್ತು ಪ್ರಸಾದ ವಿತರಣೆ, ಪಲ್ಲಕ್ಕಿ ಉತ್ಸವ, ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಮಂಜುನಾಥ್ ಐತಾಳ್ ಅವರ ನೇತೃತ್ವದಲ್ಲಿ ನಡೆದವು.
ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಕಾಗದನಗರ, ಸುರಗಿತೋಪು, ನ್ಯೂಟೌನ್, ಆಂಜನೇಯ ಅಗ್ರಹಾರ, ವಿದ್ಯಾಮಂದಿರ, ಗಣೇಶ್‌ಕಾಲೋನಿ, ಹಾಲಪ್ಪಶೆಡ್, ಜನ್ನಾಪುರ ಸೇರಿದಂತೆ ವಿವಿಧೆಡೆಗಳಿಂದ ಭಕ್ತಾಧಿಗಳು ಆಗಮಿಸಿ ಸ್ವಾಮಿಯ ದರ್ಶನ ಪಡೆದರು.
ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರದ ಪ್ರಮುಖರಾದ ಡಿ. ಪ್ರಭಾಕರ ಬೀರಯ್ಯ, ಸೌಮ್ಯ ಪ್ರಭಾಕರ ಬೀರಯ್ಯ, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಪ್ರಾಂಶುಪಾಲ ಮೃತ್ಯುಂಜಯ ಕಾನಿಟ್ಕರ್, ಶ್ಯಾಮರಾಯ ಆಚಾರ್, ಉಪಪ್ರಾಂಶುಪಾಲ ಪ್ರಸನ್ನ, ಪರಮೇಶ್ವರಪ್ಪ ಹಾಗು ಮುಖ್ಯ ಶಿಕ್ಷಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಶಿಕ್ಷಣ ಸಂಸ್ಥೆಯ ಎಲ್ಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಭದ್ರಾವತಿ ನ್ಯೂಟೌನ್ .ಶಿವಸಾಯಿ ಕೃಪಾಧಾಮದಲ್ಲಿ ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಶ್ರೀ ಸತ್ಯನಾರಾಯನ ಪೂಜೆ, ಗುರು ಪಾದುಕಾ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು.