ಒಡಿಶಾ ರಾಜ್ಯದ ಬುಡಕಟ್ಟು ಜನಾಂಗದ ದ್ರೌಪತಿ ಮುರ್ಮು ಅವರು ದೇಶದ ೨ನೇ ಮಹಿಳಾ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಶುಕ್ರವಾರ ಭದ್ರಾವತಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ನಗರದ ರಂಗಪ್ಪ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
ಭದ್ರಾವತಿ, ಜು. ೨೨: ಒಡಿಶಾ ರಾಜ್ಯದ ಬುಡಕಟ್ಟು ಜನಾಂಗದ ದ್ರೌಪತಿ ಮುರ್ಮು ಅವರು ದೇಶದ ೨ನೇ ಮಹಿಳಾ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಶುಕ್ರವಾರ ತಾಲೂಕು ಬಿಜೆಪಿ ಮಂಡಲ ವತಿಯಿಂದ ನಗರದ ರಂಗಪ್ಪ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಬುಡಕಟ್ಟು ಜನಾಂಗದ ಮಹಿಳೆಯೊಬ್ಬರು ದೇಶದ ೧೫ನೇ ರಾಷ್ಟ್ರಪತಿಯಾಗಿರುವುದು ಹೆಮ್ಮೆಯ ವಿಚಾರವಾಗಿದೆ. ದ್ರೌಪದಿ ಮುರ್ಮು ಅವರ ಆಯ್ಕೆ ಭಾರತ ದೇಶದ ಜನರು ಮಾತ್ರವಲ್ಲ ಇಡೀ ಜಗತ್ತು ಕುತೂಹಲದಿಂದ ನೋಡುವಂತಾಗಿದೆ. ಇವರ ಆಯ್ಕೆ ಐತಿಹಾಸಿಕವಾಗಿದೆ ಎಂದು ಬಣ್ಣಿಸಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಮುಖಂಡರಾದ ಮಂಗೋಟೆ ರುದ್ರೇಶ್, ಎನ್. ವಿಶ್ವನಾಥರಾವ್, ಎಂ. ಪ್ರಭಾಕರ್, ನರಸಿಂಹಚಾರ್, ಎಂ. ಮಂಜುನಾಥ್, ಚನ್ನೇಶ್, ರಾಜಶೇಖರ ಉಪ್ಪಾರ, ರಾಮಚಂದ್ರಪ್ಪ, ಗಣೇಶ್‌ರಾವ್, ರಾಮನಾಥ್ ಬರ್ಗೆ, ಬಿ.ಎಸ್ ಶ್ರೀನಾಥ್, ಸತೀಶ್ ಕುಮಾರ್, ಧನುಷ್ ಬೋಸ್ಲೆ, ಮಂಜುನಾಥ್, ಬಿ.ಎಸ್ ನಾರಾಯಣಪ್ಪ, ಸತ್ಯಣ್ಣ, ವಿಜಯ್, ಶೋಭಾ ಪಾಟೀಲ್, ಹೇಮಾವತಿ, ಅನ್ನಪೂರ್ಣ, ಮಂಜುಳ, ಕವಿತಾ ರಾವ್, ಸುಲೋಚನಾ, ಶ್ಯಾಮಲ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.