![](https://blogger.googleusercontent.com/img/a/AVvXsEg_0cDTd3GulsDuJl-lujUceBwRZe3T-0WfEpifOJW8GIQlNxNf_plx5ElSmREV_0ppNTup0TUjP5S3m65IC7Czye1LWRHGMFcfy6SreDuaI05sIq1E1TPYqdItiyZRkS_d73O7VGsyu7qJib6ZtK_nVtvqNzeuEW-KPPHgczJgKksKT3q0g6kK_6MKTg=w400-h300-rw)
ಜಾರಿ ನಿರ್ದೇಶನಾಲಯ(ಇ.ಡಿ) ಮತ್ತು ಪೊಲೀಸ್ ಇಲಾಖೆಯನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುವ ಮೂಲಕ ವಿನಾಕಾರಣ ಕಾಂಗ್ರೆಸ್ ಪಕ್ಷದ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಭದ್ರಾವತಿಯಲ್ಲಿ ಯುವ ಕಾಂಗ್ರೆಸ್ ಗ್ರಾಮಾಂತರ ಘಟಕದಿಂದ ನಗರದ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ. ಜು, ೨೭: ಜಾರಿ ನಿರ್ದೇಶನಾಲಯ(ಇ.ಡಿ) ಮತ್ತು ಪೊಲೀಸ್ ಇಲಾಖೆಯನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುವ ಮೂಲಕ ವಿನಾಕಾರಣ ಕಾಂಗ್ರೆಸ್ ಪಕ್ಷದ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಗ್ರಾಮಾಂತರ ಘಟಕದಿಂದ ನಗರದ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರಮುಖರು ಮಾತನಾಡಿ, ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿ ವಿನಾಕಾರಣ ತೊಂದರೆ ನೀಡುತ್ತಿದ್ದಾರೆ. ಇದನ್ನು ವಿರೋಧಿಸಿ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರು ಮೌನ ಪ್ರತಿಭಟನೆಗೆ ಮುಂದಾದಾಗ ಅವರನ್ನು ಬಂಧಿಸಲು ಪೊಲೀಸರು ಯತ್ನಿಸಿದ್ದು, ಈ ಸಂದರ್ಭದಲ್ಲಿ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಬಿ. ವಿ. ಶ್ರೀನಿವಾಸ್ ಅವರ ಹಲ್ಲೆ ನಡೆಸಿ ಬಂಧಿಸಲಾಗಿದೆ ಇದನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದರು.
ಇ.ಡಿ ಮತ್ತು ಪೊಲೀಸ್ ಇಲಾಖೆಯನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುವುದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲವಾದಲ್ಲಿ ದೇಶಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದರು ಎಚ್ಚರಿಸಿದರು.
ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಅಫ್ತಾಬ್ ಅಹ್ಮದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಯುವ ಮುಖಂಡ ಬಿ.ಎಸ್ ಗಣೇಶ್, ನಗರಸಭೆ ಸದಸ್ಯರಾದ ಬಿ.ಎಂ ಮಂಜುನಾಥ್(ಟೀಕು), ಬಷೀರ್ ಅಹ್ಮದ್, ಸೈಯದ್ ರಿಯಾಜ್ ಅಹ್ಮದ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಚಿನ್ ಸಿಂಧ್ಯಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣರಾಜು, ಕಾರ್ಯದರ್ಶಿಗಳಾದ ಕೇಶವ, ನ್ಯಾಯವಾದಿ ಎಂ. ಶಿವಕುಮಾರ್. ಐಸಾಕ್ ಲಿಂಕನ್, ಅಭಿಲಾಶ್, ತಬ್ರೆಜ್ ಖಾನ್, ರಜಿನಿ, ವಿನಯ್, ಹರೀಶ್, ಎಂ.ಡಿ ಸಜ್ಜಾದ್, ಸೈಯದ್ ಸರ್ಫರಾಜ್, ಶ್ರೀನಿವಾಸ್, ಮುನಾವರ್, ಲೋಕೇಶ್, ಉಮರ್, ನಾಗೇಶ್, ಮಂಜು, ಡೊನಾಲ್ಡ್, ಪೃಥ್ವಿರಾಜ್, ರವಿ, ಫೈಸಲ್, ಆಫೀಫ್, ಅಜ್ಗರ್, ಸಾಧಿಕ್, ಮೋನೋ ಮತ್ತು ದಿಲೀಪ್ ಕುಮಾರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.