ಭದ್ರಾವತಿ ತಾಲೂಕಿನ ಬಿ.ಆರ್ ಪ್ರಾಜೆಕ್ಟ್ ಪತ್ರ ಸಂಸ್ಕೃತಿ ಸಂಘಟನೆ ಮತ್ತು ರಾಮನಗರ ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಬಿಆರ್‌ಪಿ ಕೆಪಿಟಿಸಿಎಲ್.ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಹಿರಿಯ ರಂಗಭೂಮಿ ಕಲಾವಿದ ವೈ.ಕೆ ಹನುಮಂತಯ್ಯ ಅವರಿಗೆ ದಿವಂಗತ ದೇಶೀಗೌಡ ಮತ್ತು ನಿಂಗಮ್ಮನವರ ರಂಗಭೂಮಿ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು
ಭದ್ರಾವತಿ, ಆ. ೧೮: ತಾಲೂಕಿನ ಬಿ.ಆರ್ ಪ್ರಾಜೆಕ್ಟ್ ಪತ್ರ ಸಂಸ್ಕೃತಿ ಸಂಘಟನೆ ಮತ್ತು ರಾಮನಗರ ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಬಿಆರ್‌ಪಿ ಕೆಪಿಟಿಸಿಎಲ್.ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನಿವೃತ್ತ ಇಂಜಿನಿಯರ್, ಸಾಹಿತಿ ಹೊಸಹಳ್ಳಿ ದಾಳೇಗೌಡ ಅವರು ರಚಿಸಿದ ಬಾರಿಸು ಕನ್ನಡ ಡಿಂಡಿಮವ ಮತ್ತು ಇತರೆ ನಾಟಕಗಳು ಕೃತಿ ಲೋಕಾರ್ಪಣೆ, ಪಿಸುಮಾತು ಪುರುಷ ಸಂಚಿಕೆ ಬಿಡುಗಡೆ, ರಂಗಭೂಮಿ ದತ್ತಿ ಪ್ರಶಸ್ತಿ ಪ್ರದಾನ ಹಾಗು ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಹಿರಿಯ ರಂಗಭೂಮಿ ಕಲಾವಿದ ವೈ.ಕೆ ಹನುಮಂತಯ್ಯ ಅವರಿಗೆ ದಿವಂಗತ ದೇಶೀಗೌಡ ಮತ್ತು ನಿಂಗಮ್ಮನವರ ರಂಗಭೂಮಿ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ವೈ.ಕೆ ಹನುಮಂತಯ್ಯ ಅವರು ಹಿರಿಯ ರಂಗಭೂಮಿ ಕಲಾವಿದರಾಗಿದ್ದು, ನಗರದ ಹಲವಾರು ರಂಗತಂಡಗಳಲ್ಲಿ ಸೇವೆ ಸಲ್ಲಿಸಿದ್ದು, ಅಲ್ಲದೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರ ಕಲಾ ಸೇವೆಗೆ ಹಲವಾರು ಪ್ರಶಸ್ತಿಗಳು ಲಭಿಸಿದ್ದು, ವಿವಿಧ ಸಂಘ-ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ. ಇದೀಗ ದಿವಂಗತ ದೇಶೀಗೌಡ ಮತ್ತು ನಿಂಗಮ್ಮನವರ ರಂಗಭೂಮಿ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಆಧ್ಯಕ್ಷ ಡಿ. ಮಂಜುನಾಥ ಕಾರ್ಯಕ್ರಮ ಉದ್ಘಾಟಿಸಿದರು. ಹೊಸಹಳ್ಳಿ ದಾಳೇಗೌಡ ಅಧ್ಯಕ್ಷತೆ ವಹಿಸಿದ್ದರು. ವಿಶ್ರಾಂತ ಪ್ರಾಂಶುಪಾಲರಾದ ಡಾ. ಕೂಡ್ಲೂರು ವೆಂಕಟಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಾಟಕ ಕೃತಿ ಹಿರಿಯ ಸಾಹಿತಿ ಅಂಬ್ರಯ್ಯಮಠ ಮಾತನಾಡಿದರು.
ರಾಮನಗರ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಹಾಗು ಬುದ್ಧ ಬಸವ ಗಾಂಧಿ ಟ್ರಸ್ಟ್ ಅಧ್ಯಕ್ಷ ಡಾ. ರಾಮಲಿಂಗೇಶ್ವರ (ಸಿಸಿರಾ), ವಿಜಯ ಕಾಲೇಜು ಉಪ ಪ್ರಾಂಶುಪಾಲರಾದ ಡಾ. ಶಾಂತರಾಜು, ತಾಲೂಕು ಕಸಾಪ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.