Saturday, August 27, 2022

ಹನಿ ಯುನಿಸೆಕ್ಸ್ ಸಲೂನ್ ಅಂಡ್ ಸ್ಪಾ ಉದ್ಘಾಟನೆ



ಭದ್ರಾವತಿ, ಆ.27: ನಗರದ ರಂಗಪ್ಪ ವೃತ್ತದಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಹನಿ ಯುನಿಸೆಕ್ಸ್ ಲೂನ್ ಅಂಡ್ ಸ್ಪಾ ಉದ್ಘಾಟನೆ ಆ. 28 ರಂದು ಬೆಳಗ್ಗೆ 10:30ಕ್ಕೆ ನಡೆಯಲಿದೆ. ಮಾಜಿ ರೂಪದರ್ಶಿ ಚಲನಚಿತ್ರ ನಟಿ ಆಶಾ ಭಟ್ ಉದ್ಘಾಟಿಸುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

ನಿವೃತ್ತ ಕಾರ್ಮಿಕ ಮುಖಂಡ ತಿಮ್ಮೇಗೌಡ ನಿಧನ

ತಿಮ್ಮೇಗೌಡ
    ಭದ್ರಾವತಿ, ಆ. ೨೭:  ತಿಮ್ಲಾಪುರ ನಿವಾಸಿ ನಗರಸಭೆ ಮಾಜಿ ಸದಸ್ಯ ಟಿ. ರಮೇಶ್‌ರವರ ತಂದೆ, ನಿವೃತ್ತ ಕಾರ್ಮಿಕ ಮುಖಂಡ ತಿಮ್ಮೇಗೌಡ(೮೦) ಶನಿವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
    ಪತ್ನಿ ಟಿ.ರಮೇಶ್ ಸೇರಿದಂತೆ ಇಬ್ಬರು ಗಂಡು ಮಕ್ಕಳು, ಓರ್ವ ಪುತ್ರಿಯನ್ನು ಹೊಂದಿದ್ದರು.  ತಿಮ್ಮೇಗೌಡರವರು ವಿಐಎಸ್‌ಎಲ್ ಕಾರ್ಖಾನೆಯಲ್ಲಿ ನೌಕರರಾಗಿ ಸೇವೆ ಸಲ್ಲಿಸುವ ಜೊತೆಗೆ ಎಐಟಿಯುಸಿ ಕಾರ್ಮಿಕ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಸಲ್ಲಿಸಿದ್ದರು. ತಿಮ್ಮಗೌಡರವರು ಎಂಪಿಎಂ ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ಮರಿಸ್ವಾಮಿ ಅವರ ಸಹೋದರರಾಗಿದ್ದಾರೆ. ಇವರ ಅಂತ್ಯಕ್ರಿಯೆ ಹೊಸಬುಳ್ಳಾಪುರ-ಬಾಳೇಮಾರನಹಳ್ಳಿ ರಸ್ತೆಯಲ್ಲಿರುವ ಶ್ರೀ ಸತ್ಯಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ.
    ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸುರೇಶ್, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

ನಗರಸಭೆ ಅಧ್ಯಕ್ಷೆಯಾಗಿ ೧೦ ತಿಂಗಳು ಉತ್ತಮ ಆಡಳಿತ : ಹಲವು ಅಭಿವೃದ್ಧಿ ಕಾರ್ಯ

ಸಹಕಾರ ನೀಡಿದ ಎಲ್ಲರಿಗೂ ಗೀತಾ ಕೆ.ಜಿ ರಾಜ್‌ಕುಮಾರ್ ಕೃತಜ್ಞತೆ

ಭದ್ರಾವತಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ಕೆ.ಜಿ ರಾಜ್‌ಕುಮಾರ್ ಮಾತನಾಡಿದರು.
    ಭದ್ರಾವತಿ, ಆ. ೨೬: ನಗರಸಭೆ ಅಧ್ಯಕ್ಷೆಯಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಕಳೆದ ೧೦ ತಿಂಗಳು ಉತ್ತಮವಾಗಿ ಸೇವೆ ಸಲ್ಲಿಸಿದ್ದು,  ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ನಗರಸಭೆ ನಿರ್ಗಮಿತ ಅಧ್ಯಕ್ಷೆ ಗೀತಾ ಕೆ.ಜಿ ರಾಜ್‌ಕುಮಾರ್ ಹೇಳಿದರು.
    ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರಸಭೆಗೆ ಕಳೆದ ವರ್ಷ ಏ.೨೬ರಂದು ಚುನಾವಣೆ ನಡೆದಿದ್ದು, ಈ ಚುನಾವಣೆಯಲ್ಲಿ  ವಾರ್ಡ್ ನಂ.೨ರಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಮೊದಲ ಅವಧಿಯಲ್ಲಿಯೇ ನನಗೆ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕಾಂಗ್ರೆಸ್ ಪಕ್ಷದ ಮುಖಂಡರು, ನಗರಸಭಾ ಸದಸ್ಯರು ಅಧ್ಯಕ್ಷರಾಗಲು ಅವಕಾಶ ಕಲ್ಪಿಸಿಕೊಟ್ಟರು. ಈ ಹಿನ್ನಲೆಯಲ್ಲಿ ಅ.೧೬ರಂದು ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ೧೦ ತಿಂಗಳ ಅವಧಿಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದೇನೆ ಎಂದರು.
    ಕುಡಿಯುವ ನೀರು, ರಸ್ತೆ ನಿರ್ಮಾಣ, ಉದ್ಯಾನವನಗಳ ಅಭಿವೃದ್ಧಿ, ನಗರದ ಪ್ರಮುಖ ವೃತ್ತಗಳ ಅಭಿವೃದ್ಧಿ, ಸುಸಜ್ಜಿತವಾದ ಖಾಸಗಿ ಬಸ್ ನಿಲ್ದಾಣ, ಪೌರಕಾರ್ಮಿಕರಿಗೆ ಗೃಹ ನಿರ್ಮಾಣ, ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಇನ್ನೂ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದರು.
ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಮತ್ತು ಕೆ.ಜಿ ರಾಜ್‌ಕುಮಾರ್ ಉಪಸ್ಥಿತರಿದ್ದರು.
     ೧೦ ತಿಂಗಳ ಅವಧಿಯಲ್ಲಿ ಪ್ರಮುಖ ಅಭಿವೃದ್ಧಿ ಕಾರ್ಯಗಳು:-
    - ನಗರೋತ್ಥಾನ ಯೋಜನೆಯಡಿ ೩೪ ಕೋ. ರು. ವೆಚ್ಚದ ಅಭಿವೃದ್ಧಿ ಕಾರ್ಯಗಳು.
    - ಎಸ್‌ಎಫ್‌ಸಿ ಹಾಗು ಇತರೆ ಯೋಜನೆಯಡಿ ೭ ಕೋ.ರು. ಅನುದಾನದ ಅಭಿವೃದ್ಧಿ ಕಾರ್ಯಗಳು
    - ೯೨ ಲಕ್ಷ ರು. ವೆಚ್ಚದಲ್ಲಿ ಜಯಶ್ರೀ, ಹುತ್ತಾಕಾಲೋನಿ, ಬಸವೇಶ್ವರ, ಮಾಧವಚಾರ್,
       ಹಾಲಪ್ಪ ಮತ್ತು ರಂಗಪ್ಪ ವೃತ್ತಗಳ ಅಭಿವೃದ್ಧಿ.
    - ವಾರ್ಡ್ ನಂ.೯ರಿಂದ ಪ್ರತಿ ಮನೆಗೆ ಕಸದ ಬುಟ್ಟಿ ವಿತರಣೆ.

Friday, August 26, 2022

ಧಾರ್ಮಿಕ ಆಚರಣೆಗಳ ಮೂಲಕ ಯಶಸ್ಸು ಸಾಧಿಸಲು ಪ್ರಾರ್ಥನೆ ಒಳ್ಳೆಯ ಬೆಳವಣಿಗೆ : ಆರ್.ಎಸ್ ಶೋಭಾ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಪ್ರಗತಿ ಬಂಧು-ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಭದ್ರಾವತಿ ಹಳೇನಗರದ ಭೂತನಗುಡಿ ಶ್ರೀ ಶನೈಶ್ವರ, ಶ್ರೀ ಗಣಪತಿ, ಶ್ರೀ ಕೆಂಚಮ್ಮ ಮತ್ತು ಶ್ರೀ ಭೂತಪ್ಪ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ಪೂಜೆ ವಿಜೃಂಭಣೆಯಿಂದ ಜರುಗಿತು. ಧಾರ್ಮಿಕ ಸಭೆಯನ್ನು ನ್ಯಾಯವಾದಿ, ನೋಟರಿ ಆರ್.ಎಸ್ ಶೋಭಾ ಉದ್ಘಾಟಿಸಿ ಮಾತನಾಡಿದರು.  
    ಭದ್ರಾವತಿ, ಆ. ೨೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಪ್ರಗತಿ ಬಂಧು-ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಹಳೇನಗರದ ಭೂತನಗುಡಿ ಶ್ರೀ ಶನೈಶ್ವರ, ಶ್ರೀ ಗಣಪತಿ, ಶ್ರೀ ಕೆಂಚಮ್ಮ ಮತ್ತು ಶ್ರೀ ಭೂತಪ್ಪ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ಪೂಜೆ ವಿಜೃಂಭಣೆಯಿಂದ ಜರುಗಿತು.
    ಈ ಸಂಬಂಧ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯನ್ನು ನ್ಯಾಯವಾದಿ, ನೋಟರಿ ಆರ್.ಎಸ್ ಶೋಭಾ ಉದ್ಘಾಟಿಸಿ ಮಾತನಾಡಿ, ಶ್ರಾವಣಮಾಸದಲ್ಲಿ ಮಹಿಳೆಯರಿಗೆ ಹಬ್ಬದ ಸಂಭ್ರಮ. ಮಹಿಳೆಯರು ಒಟ್ಟಾಗಿ ವರಮಹಾಲಕ್ಷ್ಮೀ ಆರಾಧಿಸುವ ಮೂಲಕ ಒಕ್ಕೂಟದ ಕಾರ್ಯ ಚಟುವಟಿಕೆಗಳಲ್ಲಿ ಯಶಸ್ಸು ಸಾಧಿಸಲು ಪ್ರಾರ್ಥಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇಂತಹ ಧಾರ್ಮಿಕ ಆಚರಣೆಗಳಿಗೆ ಹೆಚ್ಚಿನ ಮಹತ್ವ ನೀಡುವ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶಯಗಳಿಗೆ ಪೂರಕವಾಗಿ ಒಕ್ಕೂಟವನ್ನು ಮುನ್ನಡೆಸಿಕೊಂಡು ಹೋಗುವಂತೆ ಸಲಹೆ ವ್ಯಕ್ತಪಡಿಸಿದರು.
    ಯೋಜನಾಧಿಕಾರಿ ಪ್ರಕಾಶ್‌ನಾಯ್ಕ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರತಿಯೊಂದು ಕಾರ್ಯದ ಆರಂಭದಲ್ಲಿ ಧಾರ್ಮಿಕ ಆಚರಣೆಗಳಿಗೆ ಹೆಚ್ಚಿನ ಮಹತ್ವ ನೀಡುತ್ತದೆ. ಆ ಮೂಲಕ ಎಲ್ಲರೂ ಧಾರ್ಮಿಕ ಭಾವನೆಗಳನ್ನು ಬೆಳೆಸಿಕೊಳ್ಳಲು ಪ್ರೇರೇಪಿಸುತ್ತದೆ. ಧಾರ್ಮಿಕ ಮಾರ್ಗದಲ್ಲಿ ಸಾಗಿದಾಗ ಯಶಸ್ಸು ಖಂಡಿತ ಲಭಿಸುತ್ತದೆ ಎಂದರು.  
     ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಅರ್. ಕರುಣಾಮೂರ್ತಿ, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್, ನಗರಸಭಾ ಸದಸ್ಯೆ ಅನುಸುಧಾ ಮೋಹನ್, ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ರಾಜಣ್ಣ ಸೇರಿದಂತೆ ಇನ್ನಿತರರು ಇನ್ನಿತರರು ಮಾತನಾಡಿದರು. ಒಕ್ಕೂಟದ ಅಧ್ಯಕ್ಷೆ ಯಶೋಧ ಅಧ್ಯಕ್ಷತೆ ವಹಿಸಿದ್ದರು. ನೇತ್ರಾವತಿ ಸ್ವಾಗತಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಭದ್ರಾವತಿ ದೊಡ್ಡಗೊಪ್ಪೇನಹಳ್ಳಿ (ಡಿಜಿ ಹಳ್ಳಿ) ವೈಷ್ಣವಿ ಜ್ಞಾನ ವಿಕಾಸ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮ ಗ್ರಾಮದ ಮುಖಂಡರಾದ ನಂಜುಂಡಪ್ಪ ಉದ್ಘಾಟಿಸಿದರು.
    ಭದ್ರಾವತಿ, ಆ. ೨೬ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ದೊಡ್ಡಗೊಪ್ಪೇನಹಳ್ಳಿ (ಡಿಜಿ ಹಳ್ಳಿ) ವೈಷ್ಣವಿ ಜ್ಞಾನ ವಿಕಾಸ ಕೇಂದ್ರದಲ್ಲಿ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮ ನಡೆಯಿತು.
    ಕಾರ್ಯಕ್ರಮವನ್ನು ಗ್ರಾಮದ ಮುಖಂಡರಾದ ನಂಜುಂಡಪ್ಪ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಹಳೇನಗರದ ಉದ್ಗೀಥ ಆಯುರ್ವೇದ ಮತ್ತು ಪಂಚಕರ್ಮ ಚಿಕಿತ್ಸಾಲಯದ ವೈದ್ಯ ಡಾ. ಸುದರ್ಶನ್ ಆಚಾರ್, ಸಿರಿಧಾನ್ಯಗಳ ಪರಿಚಯ ತಿಳಿಸಿ, ಸಿರಿಧಾನ್ಯಗಳಿಂದ ಮಾಡಬಹುದಾದ ವಿವಿಧ ಖಾದ್ಯಗಳು, ಆರೋಗ್ಯ ಕಾಪಾಡಿಕೊಳ್ಳಲು ಸಿರಿಧಾನ್ಯ ಬಳಕೆಯ ವಿಧಾನಗಳು ಹಾಗು ಸಿರಿಧಾನ್ಯ ಬಳಕೆಯಿಂದ ಆರೋಗ್ಯದಲ್ಲಿ ಉಂಟಾಗುವ ಬದಲಾವಣೆಗಳ ಬಗ್ಗೆ ಸಮಗ್ರವಾದ ಮಾಹಿತಿ ನೀಡಿದರು.
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನ ಸಿರಿಧಾನ್ಯ ಮೇಲ್ವಿಚಾರಕ ನಾಗರಾಜ್, ಸಿರಿಧಾನ್ಯ, ಪೌಷ್ಠಿಕ ಆಹಾರದ ಅಗತ್ಯತೆ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಸಿರಿ ಮಿಲೆಟ್ ಕುರಿತು ಮಾಹಿತಿ ನೀಡಿದರು.
    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಸವಿತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸ್ವಸಹಾಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸುಶೀಲಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Thursday, August 25, 2022

ವಿನಯ್ ಗುರೂಜಿ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ಭದ್ರಾವತಿ ತಾಲೂಕಿನ ಗೋಣಿಬೀಡು ಮಲ್ಲಿಗೇನಹಳ್ಳಿ ಶ್ರೀ ನವನಾಗ ಬ್ರಹ್ಮ ದತ್ತ ಕ್ಷೇತ್ರ ಸೇವಾ ಟ್ರಸ್ಟ್ ವತಿಯಿಂದ ಚಿಕ್ಕಮಗಳೂರು ಗೌರಿಗದ್ದೆ ಆಶ್ರಮದ ಶ್ರೀ ಅವದೂತ ವಿನಯ್ ಗುರೂಜಿ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಮಲ್ಲಿಗೇನಹಳ್ಳಿ ಅಂಗನವಾಡಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ನಡೆಯಿತು.
    ಭದ್ರಾವತಿ, ಆ. ೨೫ : ತಾಲೂಕಿನ ಗೋಣಿಬೀಡು ಮಲ್ಲಿಗೇನಹಳ್ಳಿ ಶ್ರೀ ನವನಾಗ ಬ್ರಹ್ಮ ದತ್ತ ಕ್ಷೇತ್ರ ಸೇವಾ ಟ್ರಸ್ಟ್ ವತಿಯಿಂದ ಚಿಕ್ಕಮಗಳೂರು ಗೌರಿಗದ್ದೆ ಆಶ್ರಮದ ಶ್ರೀ ಅವದೂತ ವಿನಯ್ ಗುರೂಜಿ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಮಲ್ಲಿಗೇನಹಳ್ಳಿ ಅಂಗನವಾಡಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ನಡೆಯಿತು.
    ಕಾರ್ಯಕ್ರಮಕ್ಕೆ ನಗರಸಭೆ ಮಾಜಿ ಸದಸ್ಯ ಎಂ.ಎ ಅಜಿತ್ ಚಾಲನೆ ನೀಡಿದರು. ಶ್ರೀ ನವನಾಗ ಬ್ರಹ್ಮ ದತ್ತ ಕ್ಷೇತ್ರ ಸೇವಾ ಟ್ರಸ್ಟ್ ವತಿಯಿಂದ ಮಲ್ಲಿಗೇನಹಳ್ಳಿ ಗೋಣಿಬೀಡು ಕ್ಷೇತ್ರದ ಆವರಣದಲ್ಲಿ ಪುಣ್ಯಕೋಟಿ ಎಂಬ ಗೋಶಾಲೆ ಆರಂಭಿಸುವ ಕುರಿತು ಮಾಹಿತಿ ನೀಡಲಾಯಿತು.
    ವಿನಯ್ ಗುರೂಜಿ ಭಕ್ತ ವೃಂದದವರು ಹಾಗು ಗ್ರಾಮಸ್ಥರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಶಾಮಿಯಾನ ಮಾಲೀಕರ ಸಂಘದ ಅಧ್ಯಕ್ಷರಾಗಿ ೨ನೇ ಬಾರಿಗೆ ಸಂತೋಷ್ ಅವಿರೋಧ ಆಯ್ಕೆ


ಭದ್ರಾವತಿ ತಾಲೂಕು ಶಾಮಿಯಾನ ಮಾಲೀಕರ ಸಂಘದ ಅಧ್ಯಕ್ಷರಾಗಿ ಆನೇಕೊಪ್ಪ ಎಂಪಿಎಂ ಬಡಾವಣೆಯ ಸಂತೋಷ್ ಶಾಮಿಯಾನ ಮಾಲೀಕ ಹಾಗು ಬಿಜೆಪಿ ಪಕ್ಷದ ಯುವ ಮುಖಂಡ ಸಂತೋಷ್ ೨ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಭದ್ರಾವತಿ, ಆ. ೨೫:  ತಾಲೂಕು ಶಾಮಿಯಾನ ಮಾಲೀಕರ ಸಂಘದ ಅಧ್ಯಕ್ಷರಾಗಿ ಆನೇಕೊಪ್ಪ ಎಂಪಿಎಂ ಬಡಾವಣೆಯ ಸಂತೋಷ್ ಶಾಮಿಯಾನ ಮಾಲೀಕ ಹಾಗು ಬಿಜೆಪಿ ಪಕ್ಷದ ಯುವ ಮುಖಂಡ ಸಂತೋಷ್ ೨ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಸಂತೋಷ್ ಸಂಘದ ಅಧ್ಯಕ್ಷರಾಗಿ ಮೊದಲ ಅವಧಿಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ್ದು, ಈ ಹಿನ್ನಲೆಯಲ್ಲಿ ೨ನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂತೋಷ್ ವಿವಿಧ ಸಂಘ-ಸಂಸ್ಥೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಹಲವಾರು ಸಮಾಜಮುಖಿ ಸೇವಾಕಾರ್ಯಗಳನ್ನು ಕೈಗೊಂಡಿದ್ದಾರೆ.
    ಉಳಿದಂತೆ ಸಂಘದ ಉಪಾಧ್ಯಕ್ಷರಾಗಿ ಎಸ್‌ವಿಎಸ್ ಶಾಮಿಯಾನದ ಸುರೇಶ್, ಪ್ರಧಾನ ಕಾರ್ಯದರ್ಶಿಯಾಗಿ ಸನ್ನಿ ಡಿಸೋಜ, ಸಹಕಾರ್ಯದರ್ಶಿಯಾಗಿ ಹೆಬ್ಬಂಡಿ ರಸ್ತೆಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಶಾಮಿಯಾನದ ರವಿ, ಖಜಾಂಚಿಯಾಗಿ ಹಳೇನಗರದ ವಿನಾಯಕ ಸೌಂಡ್ಸ್‌ನ ಶಾಮಣ್ಣ ಹಾಗು ಗೌರವಾಧ್ಯಕ್ಷರಾಗಿ ನೂರ್ ಶಾಮಿಯಾನದ ಅಸ್ಲಾಂ ಮತ್ತು ನಿರ್ದೇಶಕರಾಗಿ ಕೂಡ್ಲಿಗೆರೆ ಸಾಜನ್ ಶಾಮಿಯಾನದ ಅಕ್ಬರ್ ಸಾಬ್, ಚಂದ್ರಾಲಯದ ರಮೇಶ್(ಸುರಗಿತೋಪು), ಬೀರೇಶ್ವರ ಶಾಮಿಯಾನದ ಸಂಜು, ಪಾರ್ವತಿ ಶಾಮಿಯಾನದ ಮಹದೇವ, ಬಿಆರ್‌ಪಿ ಶಾಮಿಯಾನದ ಯಲ್ಲಪ್ಪ, ಬಾರಂದೂರು ಬಿಎಂಕೆ ಶಾಮಿಯಾನದ ಕುಮಾರ್, ಜೆಎಂಜೆ ಶಾಮಿಯಾನದ ಬ್ಯಾಪ್ಟಿಸ್ಟ್, ಲೈಟಿಂಗ್ಸ್ ರಮೇಶ್(ಸೀಗೆಬಾಗಿ) ಮತ್ತು  ಉಜ್ಜನಿಪುರ ವೆಂಕಟೇಶ್ವರ ಸೌಂಡ್ಸ್‌ನ ಶ್ರೀನಿವಾಸ್ ಸೇರಿದಂತೆ ಒಟ್ಟು ೧೨ ಜನ  ಆಯ್ಕೆಯಾಗಿದ್ದಾರೆ.