Sunday, September 4, 2022

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಸ್ಪರ್ಧೆಗಳಿಗೆ ಚಾಲನೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಸ್ಪರ್ಧೆಗಳಿಗೆ ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ ಚಾಲನೆ ನೀಡಿದರು.
    ಭದ್ರಾವತಿ, ಸೆ. ೪ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಸ್ಪರ್ಧೆಗಳಿಗೆ ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ ಚಾಲನೆ ನೀಡಿದರು.
    ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಜಿ. ಪ್ರಭು, ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ದೈಹಿಕ ಶಿಕ್ಷಕ ಶಿವಲಿಂಗೇಗೌಡ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅನಂದ್, ಕಾರ್ಯದರ್ಶಿ ಶ್ರೀಧರ್ ಸಾವಂತ್, ಅಥ್ಲೆಟಿಕ್ಸ್ ತರಬೇತಿದಾರ ಬಾಳಪ್ಪು ಮಾನೆ, ಖೋ ಖೋ ತರಬೇತಿದಾರ ಶ್ರೀನಿವಾಸ್, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಕಾರ್ತಿಕ್, ಕೇಶವ, ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿ ಶಿವರಾಜ್, ದೇವರಾಜ್, ಕರಣ್‌ಸಿಂಗ್, ಗೋಪಾಲ, ನೂರ್ ಫಾತಿಮಾ, ರೇವತಿ, ಸಿದ್ದಯ್ಯ, ಆನಂದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.     
    ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಅಥ್ಲೆಟಿಕ್ಸ್ ಸ್ಪರ್ಧೆಗಳು, ಪುಟ್‌ಬಾಲ್, ಖೋ ಖೋ, ಕಬಡ್ಡಿ, ವಾಲಿಬಾಲ್, ಥ್ರೋ ಬಾಲ್    ಹಾಗು ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆದವು.



ಭೋವಿ ಕಾಲೋನಿ ಗಣಪತಿ ವಿಜೃಂಭಣೆ ರಾಜಬೀದಿ ಉತ್ಸವ ಮೆರವಣಿಗೆ

ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಭದ್ರಾ ನದಿಯಲ್ಲಿ ಸಂಜೆ ವಿಸರ್ಜನೆ

ಭದ್ರಾವತಿ ಮುಖ್ಯರಸ್ತೆಯ ಭೋವಿ ಕಾಲೋನಿಯಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ೩೮ನೇ ವರ್ಷದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ ವಿಸರ್ಜನೆ ಅಂಗವಾಗಿ ಭಾನುವಾರ ಉತ್ಸವ ಮೆರವಣಿಗೆ ನಡೆಯಿತು.
    ಭದ್ರಾವತಿ, ಸೆ. ೪: ನಗರದ ಹೊಸಮನೆ ಮುಖ್ಯರಸ್ತೆಯ ಭೋವಿ ಕಾಲೋನಿಯಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ೩೮ನೇ ವರ್ಷದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ ವಿಸರ್ಜನೆ ಭಾನುವಾರ ನಡೆಯಿತು.
    ನಗರದ ಪ್ರಮುಖ ಸಂಘನೆಗಳಲ್ಲಿ ಇದು ಸಹ ಒಂದಾಗಿದ್ದು, ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ವಿನಾಯಕ ಮೂರ್ತಿಯನ್ನು ೫ ದಿನಗಳ ಕಾಲ ಪ್ರತಿಷ್ಠಾಪಿಸುವ ಮೂಲಕ ವಿಸರ್ಜಿಸಲಾಯಿತು.
ವಿಸರ್ಜನೆ ಅಂಗವಾಗಿ ನಡೆದ ರಾಜಬೀದಿ ಉತ್ಸವ ಮೆರವಣಿಗೆ ಗಮನ ಸೆಳೆಯಿತು. ಡೊಳ್ಳು ಕುಣಿತ, ವೀರಾಗಾಸೆ, ಗೊಂಬೆ ನೃತ್ಯ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮತ್ತಷ್ಟು ಮೆರಗು ನೀಡಿದವು. ಯುವಕರು ಮೆರವಣಿಗೆಯಲ್ಲಿ ಕೇಸರಿ ಧ್ವಜ ಹಿಡಿದು ಕಲಾ ತಂಡಗಳ ಜೊತೆ ಹೆಜ್ಜೆ ಹಾಕುವ ಮೂಲಕ ಸಂಭ್ರಮಿಸಿದರು.


    ಉತ್ಸವ ಮೆರವಣಿಗೆ ಹೊಸಮನೆ ಮುಖ್ಯರಸ್ತೆ ಮೂಲಕ ರಂಗಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ಗಾಂಧಿವೃತ್ತ ಮೂಲಕ ನಗರಸಭೆ ಮುಂಭಾಗ ಭದ್ರಾ ನದಿವರೆಗೂ ಸಾಗಿತು. ಈ ಬಾರಿ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಅದರಲ್ಲೂ ನಗರಸಭೆ ಮುಂಭಾಗ ಕಟ್ಟೆಚ್ಚರ ವಹಿಸಲಾಗಿತ್ತು.
    ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ವಿಕ್ರಮ್ ಅಮಟೆ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ೫ ಮಂದಿ ಪ್ರೊಬೇಷನರಿ ಉಪಾಧೀಕ್ಷಕರು, ೪ ಮಂದಿ ವೃತ್ತ ನಿರೀಕ್ಷಕರು, ೧೦ ಮಂದಿ ಠಾಣಾಧಿಕಾರಿಗಳು ಹಾಗು ಸುಮಾರು ೧೫೦ ಸಿಬ್ಬಂದಿಗಳು ಭದ್ರತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.


    ವಿನಾಯಕ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘಟನೆಗಳ ಪ್ರಮುಖರು, ಭಕ್ತರು ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.


Saturday, September 3, 2022

ಸೆ.೫ರಂದು ಶಿಕ್ಷಕರ ದಿನಾಚರಣೆ


ಭದ್ರಾವತಿ, ಸೆ. ೩: ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಸೆ.೫ರಂದು ಬೆಳಿಗ್ಗೆ ೧೦ ಗಂಟೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಶಿಕ್ಷಕರ ದಿನಾಚರಣೆ ಹಳೇನಗರದ ಶ್ರೀ ವೀರಶೈವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ತಾಲೂಕು ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ, ನಿವೃತ್ತ ಶಿಕ್ಷಕರಿಗೆ ಹಾಗು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದ ಶಾಲೆಗಳಿಗೆ ಸನ್ಮಾನ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಲಿವೆ.
ತಾಲೂಕಿನ ಎಲ್ಲಾ ಶಿಕ್ಷಕರು, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಕೋರಿದ್ದಾರೆ. ಕೋರಲಾಗಿದೆ. 

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿಇಎಸ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೆ ಬಹುಮಾನ

ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಆಂಗ್ಲ ಹಾಗೂ ಕನ್ನಡ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಭದ್ರಾವತಿ, ಸೆ. ೩:  ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಆಶ್ರಿತದ  ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಆಂಗ್ಲ ಹಾಗೂ ಕನ್ನಡ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಹಳೇನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಆಯೋಜಿಸಲಾಗಿದ್ದ  ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸುವ ಮೂಲಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
    ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಆಡಳಿತಾಧಿಕಾರಿಗಳು, ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಬಬ್ಬೂರುಕಮ್ಮೆ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರ

ಭದ್ರಾವತಿ ನಗರದ ಜನ್ನಾಪುರ ಬಬ್ಬೂರುಕಮ್ಮೆ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಭದ್ರಾವತಿ, ಸೆ. ೩: ನಗರದ ಜನ್ನಾಪುರ ಬಬ್ಬೂರುಕಮ್ಮೆ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಪ್ರತಿಭಾವಂತ ವಿದ್ಯಾರ್ಥಿಗಳಾದ ಸ್ಕಂದ ಭಾರದ್ವಾಜ್ ಮತ್ತು ವಿಕಾಸ್ ಅವರನ್ನು ತಾಲೂಕು ಬ್ರಾಹ್ಮಣ ಸಭಾ ಪ್ರಮುಖರಾದ ಎ.ಎನ್ ಸುರೇಶ್ ಸನ್ಮಾನಿಸಿ ಗೌರವಿಸಿದರು. ಬಬ್ಬೂರುಕಮ್ಮೆ ಸೇವಾ ಸಂಘದ ಅಧ್ಯಕ್ಷ ಎಚ್.ಎಸ್ ನಂಜುಂಡಯ್ಯ ಅಧ್ಯಕ್ಷತೆ ವಹಿಸಿದ್ದರು,
    ಎಚ್.ಆರ್ ಸುಧಾ ಪ್ರಾರ್ಥಿಸಿದರು, ಡಾ.ಎಂ.ಎಚ್ ವಿದ್ಯಾಶಂಕರ್ ಸ್ವಾಗತಿಸಿದರು. ಎಚ್.ಆರ್ ಶ್ರೀಧರೇಶ್ ಭಾರದ್ವಾಜ್ ನಿರೂಪಿಸಿ, ದಿನೇಶ್ ವಂದಿಸಿದರು.

ಸೆ.೪ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಸ್ಪರ್ಧೆಗಳು

    ಭದ್ರಾವತಿ, ಸೆ. ೩: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸೆ.೪ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಸ್ಪರ್ಧೆಗಳು ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ನಡೆಯಲಿವೆ.
    ಅಥ್ಲೆಟಿಕ್ ಸ್ಪರ್ಧೆಗಳು (ಪುರುಷರಿಗೆ) : ೧೦೦೦ ಮೀ., ೨೦೦ ಮೀ., ೪೦೦ ಮೀ., ೫೦೦ ಮೀ., ೧೫೦೦ ಮೀ. ಮತ್ತು ೫೦೦೦ ಮೀ. ಓಟ ಹಾಗು ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಡಿಸ್ಕಸ್ ಎಸೆತ ಮತ್ತು ಜಾವಲಿನ್ ಥ್ರೋ, ೪*೧೦೦ ಮತ್ತು ೪*೪೦೦ ರಿಲೆ ಮತ್ತು ೧೧೦ ಮೀ. ಹರ್ಡಲ್ಸ್ ಸ್ಪರ್ಧೆಗಳು.
    ಅಥ್ಲೆಟಿಕ್ ಸ್ಪರ್ಧೆಗಳು (ಮಹಿಳೆಯರಿಗೆ) : ೧೦೦ ಮೀ., ೨೦೦ ಮೀ., ೪೦೦ ಮೀ., ೮೦೦ ಮೀ., ೧೫೦೦ ಮೀ. ಮತ್ತು ೩೦೦೦ ಮೀ. ಓಟ ಹಾಗು ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಡಿಸ್ಕಸ್ ಎಸೆತ ಮತ್ತು ಜಾವಲಿನ್ ಥ್ರೋ, ೪*೧೦೦ ಮತ್ತು ೪*೪೦೦ ರಿಲೆ ಮತ್ತು ೧೦೦ ಮೀ. ಹರ್ಡಲ್ಸ್ ಸ್ಪರ್ಧೆಗಳು.
    ಉಳಿದಂತೆ ಪುರುಷರಿಗೆ ಪುಟ್‌ಬಾಲ್, ಪುರುಷ ಮತ್ತು ಮಹಿಳೆಯರಿಗೆ ಖೋ-ಖೋ, ಕಬಡ್ಡಿ, ವಾಲಿಬಾಲ್, ಥ್ರೋ ಬಾಲ್ ಮತ್ತು ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆಯಲಿವೆ.
    ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಹಾಗು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಮೊ: ೯೦೦೮೯೪೯೮೪೭ ಅಥವಾ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಜಿ. ಪ್ರಭು, ಮೊ: ೯೮೪೫೪೦೫೮೫೯ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

Friday, September 2, 2022

ಚಿರತೆ ಸೆರೆ ಹಿಡಿದು ಆತಂಕ ದೂರ ಮಾಡಿ, ಸೂಕ್ತ ಪರಿಹಾರ ನೀಡಿ : ವಲಯ ಅರಣ್ಯಾಧಿಕಾರಿಗೆ ಮನವಿ

ಭದ್ರಾವತಿ ತಾಲೂಕಿನ ಅರಹತೊಳಲು, ಕೈಮರ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಅಲ್ಲದೆ ಒಂದು ಹಸು ಚಿರತೆಗೆ ಬಲಿಯಾಗಿದೆ. ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ತಕ್ಷಣ ಚಿರತೆಯನ್ನು ಸೆರೆ ಹಿಡಿದು ರೈತರ ಆತಂಕ ದೂರ ಮಾಡುವಂತೆ ಶಾಂತಿ ಸಾಗರ, ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ.
    ಭದ್ರಾವತಿ, ಸೆ. ೨: ತಾಲೂಕಿನ ಅರಹತೊಳಲು, ಕೈಮರ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಅಲ್ಲದೆ ಒಂದು ಹಸು ಚಿರತೆಗೆ ಬಲಿಯಾಗಿದೆ. ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ತಕ್ಷಣ ಚಿರತೆಯನ್ನು ಸೆರೆ ಹಿಡಿದು ರೈತರ ಆತಂಕ ದೂರ ಮಾಡುವಂತೆ ಶಾಂತಿ ಸಾಗರ, ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ.
    ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಈ ನಡುವೆ ಬೊಮ್ಮನಕಟ್ಟೆ ಗ್ರಾಮದ ಮಂಜಪ್ಪ ಎಂಬ ರೈತನಿಗೆ ಸೇರಿದ ಹಸು ಚಿರತೆಗೆ ಬಲಿಯಾಗಿದ್ದು, ಇದರಿಂದಾಗಿ ಮತ್ತಷ್ಟು ಆತಂಕ ಹೆಚ್ಚಾಗಿದೆ. ಗ್ರಾಮಸ್ಥರು ಮನೆಗಳಿಂದ ಹೊರಬರುತ್ತಿಲ್ಲ. ರೈತರು ಹೊಲ-ಗದ್ದೆ, ತೋಟಗಳಿಗೆ ಹೋಗಲು ಭಯಭೀತರಾಗಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಚಿರತೆಯನ್ನು ಸೆರೆ ಹಿಡಿದು ಆತಂಕ ದೂರ ಮಾಡುವಂತೆ ಹಾಗು ಹಸು ಕಳೆದುಕೊಂಡಿರುವ ರೈತನಿಗೆ ಸೂಕ್ತ ಪರಿಹಾರ ನೀಡುವಂತೆ ಕೋರಲಾಗಿದೆ.
    ರೈತ ಸಂಘದ ತಾಲೂಕು ಅಧ್ಯಕ್ಷ ಹಿರಿಯಣ್ಣಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್, ಶರಶ್ಚಂದ್ರ, ಮಂಜುನಾಥ್, ತಿಮ್ಮಣ್ಣ, ಗೋವಿಂದಪ್ಪ, ಗಂಗಮ್ಮ, ಕರಿಬಸಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.