ಭದ್ರಾವತಿಯಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ಸಮಸ್ತ ನಾಗರೀಕರ ಕಲ್ಯಾಣಾಭಿವೃದ್ಧಿಗಾಗಿ ಶ್ರೀ ವಿನಯ್ ಗುರೂಜಿ ಭಕ್ತ ವೃಂದದಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ದುರ್ಗಾ ಸಪ್ತಪತಿ ಪಾರಾಯಣ ಕಾರ್ಯಕ್ರಮದಲ್ಲಿ ಶ್ರೀ ವಿನಯ್ ಗುರೂಜಿ ಅವರು ದುರ್ಗಾ ದೇವಿಗೆ ಪುಷ್ಪ ನಮನ ಸಲ್ಲಿಸಿದರು.
ಭದ್ರಾವತಿ, ಸೆ. ೩೦: ನವರಾತ್ರಿ ಮಹೋತ್ಸವ ಅಂಗವಾಗಿ ಸಮಸ್ತ ನಾಗರೀಕರ ಕಲ್ಯಾಣಾಭಿವೃದ್ಧಿಗಾಗಿ ಶ್ರೀ ವಿನಯ್ ಗುರೂಜಿ ಭಕ್ತ ವೃಂದದಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ದುರ್ಗಾ ಸಪ್ತಪತಿ ಪಾರಾಯಣ ವಿಜೃಂಭಣೆಯಿಂದ ಜರುಗಿತು.
ಚಿಕ್ಕಮಗಳೂರು ಗೌರಿಗದ್ದೆ ದತ್ತಾಶ್ರಮದ ಶ್ರೀ ವಿನಯ್ ಗುರೂಜಿ ನೇತೃತ್ವದಲ್ಲಿ ಭಕ್ತ ವೃಂದದಿಂದ ಸಿದ್ದಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ ಸೇರಿದಂತೆ ನಗರದ ವಿವಿಧೆಡೆಗಳಿಂದ ಸಾವಿರಾರು ಮಂದಿ ಭಕ್ತಾಧಿಗಳು ಪಾಲ್ಗೊಂಡಿದ್ದರು.
ಇದಕ್ಕೂ ಮೊದಲು ಬೈಕ್ ರ‍್ಯಾಲಿ ಮೂಲಕ ಗುರೂಜಿ ಅವರನ್ನು ಕರೆತರಲಾಯಿತು. ಗುರೂಜಿ ಅವರು ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪ ನಮನ ಸಲ್ಲಿಸಿ ವೇದಿಕೆಯ ಮುಂದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನೂರಾರು ಮಹಿಳೆಯರು ದುರ್ಗಾ ಸಪ್ತಪತಿ ಪಾರಾಯಣ ನಡೆಸಿದರು.
ಭದ್ರಾವತಿಯಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ಸಮಸ್ತ ನಾಗರೀಕರ ಕಲ್ಯಾಣಾಭಿವೃದ್ಧಿಗಾಗಿ ಶ್ರೀ ವಿನಯ್ ಗುರೂಜಿ ಭಕ್ತ ವೃಂದದಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ದುರ್ಗಾ ಸಪ್ತಪತಿ ಪಾರಾಯಣ ವಿಜೃಂಭಣೆಯಿಂದ ಜರುಗಿತು.