![](https://blogger.googleusercontent.com/img/a/AVvXsEh41ZxlRbptrNmRuqGycDVB0440Gbq_1nnh7SA7T6iCTrnhkrE58bT0OwLjCg79xJq0Pib99sySsS8UaglK5f8rv7axOL4wMKkb3H8iC_RZnlAtRNLMxERU1hBNq6sOcKNM2J63DqKNRYsMKy4Sbdsdlqufh-F9L5WPUML2698R3-7pauzZjEZ8AjeGiA=w400-h180-rw)
ಮುಸ್ಲಿಂ ಸಮುದಾಯದವರು ಈ ಬಾರಿ ನಗರದಲ್ಲಿ ಈದ್ ಮಿಲಾದ್ ಹಬ್ಬ ವಿಜೃಂಭಣೆಯಿಂದ ಆಚರಿಸಲು ಮುಂದಾಗಿರುವ ಹಿನ್ನಲೆಯಲ್ಲಿ ಗುರುವಾರ ಪೊಲೀಸ್ ಇಲಾಖೆ ವತಿಯಿಂದ ಭದ್ರಾವತಿ ಹಳೇನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಶಾಂತಿ ಸಭೆ ನಡೆಸಲಾಯಿತು.
ಭದ್ರಾವತಿ, ಅ. ೬: ಮುಸ್ಲಿಂ ಸಮುದಾಯದವರು ಈ ಬಾರಿ ನಗರದಲ್ಲಿ ಈದ್ ಮಿಲಾದ್ ಹಬ್ಬ ವಿಜೃಂಭಣೆಯಿಂದ ಆಚರಿಸಲು ಮುಂದಾಗಿರುವ ಹಿನ್ನಲೆಯಲ್ಲಿ ಗುರುವಾರ ಪೊಲೀಸ್ ಇಲಾಖೆ ವತಿಯಿಂದ ಹಳೇನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಶಾಂತಿ ಸಭೆ ನಡೆಸಲಾಯಿತು.
ಮಹಾಮಾರಿ ಕೊರೋನಾ ಹಿನ್ನಲೆಯಲ್ಲಿ ಕಳೆದ ೨ ವರ್ಷಗಳಿಂದ ಈದ್ ಮಿಲಾದ್ ವಿಜೃಂಭಣೆಯಿಂದ ಆಚರಿಸಲು ಅವಕಾಶವಿರಲಿಲ್ಲ. ಈ ಬಾರಿ ಗೌರಿ-ಗಣೇಶ ಹಬ್ಬ ಆಚರಣೆಯಂತೆ ಈದ್ ಮಿಲಾದ್ ಆಚರಣೆಗೂ ಅವಕಾಶ ನೀಡಲಾಗಿದೆ. ಹಬ್ಬದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಮೆರವಣಿಗೆ ಶಾಂತಿಯುತವಾಗಿ, ಸೌಹಾರ್ದಯುತವಾಗಿ ನಡೆಯಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪ್ರತಿಯೊಬ್ಬರು ಸಹಕಾರ ನೀಡಬೇಕೆಂದು ಕೋರಲಾಯಿತು.
ಪೊಲೀಸ್ ಉಪಾಧೀಕ್ಷಕ ಜಿತೇಂದ್ರಕುಮಾರ್ ದಯಾಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ವೃತ್ತ ನಿರೀಕ್ಷಕರಾದ ರಾಘವೇಂದ್ರ ಕಾಂಡಿಕೆ, ಗುರುರಾಜ್, ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್, ಲಕ್ಷ್ಮೀಪತಿ, ಉಪತಹಸೀಲ್ದಾರ್ ಉಪಸ್ಥಿತರಿದ್ದರು.
ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್, ಖಜಾಂಚಿ ಮಣಿ ಎಎನ್‌ಎಸ್, ನಗರಸಭೆ ಸದಸ್ಯ ಕರೀಗೌಡ, ಪರಿಸರ ಅಭಿಯಂತರ ಪ್ರಭಾಕರ್, ಜೆಡಿಎಸ್ ನಗರ ಅಧ್ಯಕ್ಷ ಆರ್. ಕರುಣಾಮೂರ್ತಿ, ಮುಸ್ಲಿಂ ಸಮುದಾಯದ ಪ್ರಮುಖರಾದ ಮುರ್ತುಜಾ ಖಾನ್, ಮಹಮದ್ ಸನಾವುಲ್ಲಾ, ಅಮೀರ್‌ಜಾನ್, ಜೆಬಿಟಿ ಬಾಬು, ಪೊಲೀಸ್ ಉಪವಿಭಾಗದ ಠಾಣಾಧಿಕಾರಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.