![](https://blogger.googleusercontent.com/img/a/AVvXsEjc6dEoq3gtiwc-j16dSxmHzIKO7G2gjVJsbuGnQqQGtXs3yzucNS4pVLeuuB1hNGNHCNggRPZ7MqQciEDmQA02QFV_2Ky4IxbnqK8rWq_1rJfOsjZhlwRSSelqWdmsDoTScq_hDBWsidVWbMbNeUbhK0inHWUlV2qWmprrcnCvC_yQCh5jDGaLeb17ng=w400-h180-rw)
ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಲಿಂಗಾಯತರ ಬೀದಿಯಲ್ಲಿ ಸ್ವಾಗತ್ ಯುವಕರ ಸಂಘದ ವತಿಯಿಂದ ೨೫ನೇ ವರ್ಷದ ವಿನಾಯಕ ಮಹೋತ್ಸವ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಅ.೧೬ರ ಭಾನುವಾರ ನಡೆಯಲಿದ್ದು, ಗುರುವಾರ ಸತ್ಯನಾರಾಯಣ ಪೂಜೆ, ಗಣಹೋಮ, ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು. ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ, ಅ. ೧೩ : ನಗರಸಭೆ ವ್ಯಾಪ್ತಿಯ ಜನ್ನಾಪುರ ಲಿಂಗಾಯತರ ಬೀದಿಯಲ್ಲಿ ಸ್ವಾಗತ್ ಯುವಕರ ಸಂಘದ ವತಿಯಿಂದ ೨೫ನೇ ವರ್ಷದ ವಿನಾಯಕ ಮಹೋತ್ಸವ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಅ.೧೬ರ ಭಾನುವಾರ ನಡೆಯಲಿದೆ.
ಈ ಬಾರಿ ಅಯೋಧ್ಯೆ ಶ್ರೀರಾಮ ಮಂದಿರ ಮಾದರಿ ಭವ್ಯವಾದ ಪ್ರತಿಷ್ಠಾಪನಾ ವೇದಿಕೆ ನಿರ್ಮಿಸುವ ಮೂಲಕ ಅದ್ದೂರಿಯಾಗಿ ವಿನಾಯಕ ಮಹೋತ್ಸವ ಆಚರಿಸಲಾಗುತ್ತಿದ್ದು, ಗುರುವಾರ ಸತ್ಯನಾರಾಯಣ ಪೂಜೆ, ಗಣಹೋಮ, ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು.
ಶಾಸಕರಾದ ಬಿ.ಕೆ ಸಂಗಮೇಶ್ವರ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್‌ರವರ ತಾಯಿ ಉಮಾದೇವಿ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸದಸ್ಯ ಕಾಂತ್‌ರಾಜ್, ಯುವ ಮುಖಂಡರಾದ ಬಿ.ಎಸ್ ಗಣೇಶ್, ಬಿವಿಕೆ ಕೃಷ್ಣರಾಜ್, ಹರೀಶ್, ಸಂಘದ ಗೌರವಾಧ್ಯಕ್ಷ ಆರ್. ವೇಣುಗೋಪಾಲ್, ಅಧ್ಯಕ್ಷ ಸುಂದರ್, ಉಪಾಧ್ಯಕ್ಷ ಎಚ್ ಮಧುಸೂಧನ್, ಪ್ರಧಾನ ಕಾರ್ಯದರ್ಶಿ ಹರ್ಷ, ಮನೋಜ್ ಕುಮಾರ್, ಸಹ ಕಾರ್ಯದರ್ಶಿ ಧನುಷ್, ಪವನ್, ಮಂಜು, ಅರುಣ, ಸಂತೋಷ್, ಖಜಾಂಚಿ ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಕಾರ್ಯಕರ್ತರು, ಜನ್ನಾಪುರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ನಿವಾಸಿಗಳು ಪಾಲ್ಗೊಂಡಿದ್ದರು.
ಅ.೧೬ರಂದು ಜನ್ನಾಪುರ ಕೆರೆಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದ್ದು, ಇದಕ್ಕೂ ಮೊದಲು ವಿವಿಧ ಕಲಾತಂಡಗಳೊಂದಿಗೆ ರಾಜಬೀದಿ ಉತ್ಸವ ಮೆರವಣಿಗೆ ನಡೆಯಲಿದೆ.