ಭದ್ರಾವತಿ ತಾಲೂಕಿನ ಅರಕೆರೆ ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠದ ಜೀರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ೫ ಲಕ್ಷ ರು. ಆರ್ಥಿಕ ನೆರವು ನೀಡಿದ್ದಾರೆ.
ಭದ್ರಾವತಿ, ನ. ೧೮: ತಾಲೂಕಿನ ಅರಕೆರೆ ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠದ ಜೀರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ೫ ಲಕ್ಷ ರು. ಆರ್ಥಿಕ ನೆರವು ನೀಡಿದ್ದಾರೆ.
ಭಕ್ತಾಧಿಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠ ಟ್ರಸ್ಟ್ ವತಿಯಿಂದ ಜೀರ್ಣೋದ್ದಾರ ಕಾರ್ಯಕ್ಕೆ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಆರ್ಥಿಕ ನೆರವು ನೀಡಲಾಗಿದೆ. ಧರ್ಮಸ್ಥಳದ ಕೆ. ಮಹಾವೀರ ಅಜ್ರಿಯವರು ಮಂಜೂರಾತಿ ಪತ್ರದೊಂದಿಗೆ ಚೆಕನ್ನು ಟ್ರಸ್ಟ್‌ಗೆ ಕಳುಹಿಸಿ ಕೊಟ್ಟಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ತಾಲೂಕು ಯೋಜನಾಧಿಕಾರಿ ಮಾಧವ್‌ರವರು ಚೆಕನ್ನು ಹಸ್ತಾಂತರಿಸಿದರು. ವಿರಕ್ತ ಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಗ್ರಾಮ ಪಂಚಾಯಿತಿ ಸದಸ್ಯ ಎಸ್.ಎಲ್ ರವಿಕುಮಾರ್, ಎಸ್. ಗುರುಮೂರ್ತಿ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಚಂದ್ರಪ್ಪ, ತಿಮಪ್ಪ, ರಾಕೇಶ್ ದಾನವಾಡಿ, ಜೆ.ಎಂ ಭೈರೇಶ್ ಕುಮಾರ್ ಹಾಗು ಮಹಿಳಾ ಸ್ವ ಸಹಾಯ ಸಂಘಗಳ ಒಕ್ಕೂಟದ ಸದಸ್ಯರು, ಗ್ರಾಮದ ಪ್ರಮುಖರು ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.