![](https://blogger.googleusercontent.com/img/a/AVvXsEhYVF7Ug53aglOwJwtTT5fVSOF67K_2rl-s21FD5Dv6LJ6DuSwMZb4OLa7CAhf2EDA1maeiWVSsIKtE7CQCq1hBAqPKqsANk-8Uj-ZVEPrzgRbBEG72HQA1qbbmA48ZM45iUNGiWBUDHiopHme5L1TbACgdjw-N6SJlqN8m0yGhEsauqiB10LPf1SFTDA=w400-h186-rw)
ಭದ್ರಾವತಿ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಮತ್ತು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಬುಧವಾರ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ೯೭ನೇ ಜನ್ಮದಿನೋತ್ಸವ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಂದ ಪಲ್ಲಕ್ಕಿ ಸೇವೆ ನಡೆಯಿತು.
ಭದ್ರಾವತಿ, ನ. ೨೩ : ನಗರದ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಮತ್ತು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಬುಧವಾರ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ೯೭ನೇ ಜನ್ಮದಿನೋತ್ಸವ ಹಲವು ಧಾರ್ಮಿಕ ಹಾಗು ಸೇವಾ ಕಾರ್ಯಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.
ಶ್ರೀ ಸತ್ಯ ಸಾಯಿ ಸೇವಾ ಕ್ಷೇತ್ರದಲ್ಲಿ ಬೆಳಿಗ್ಗೆ ಓಂಕಾರ, ಜ್ಯೋತಿರ್ಧ್ಯಾನ, ಸುಪ್ರಭಾತ, ನಗರಸಂಕೀರ್ತನೆ, ಪ್ರಶಾಂತಿ ಧ್ವಜಾರೋಹಣ, ಶ್ರೀ ಸಾಯಿ ಸತ್ಯ ನಾರಾಯಣ ಪೂಜೆ, ಸಹಸ್ರ ನಾಮಾರ್ಚನೆ, ಶಿವಮೊಗ್ಗ ಮಿಡ್‌ಟೌನ್ ರೋಟರಿ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗು ಶ್ರೀ ಸತ್ಯ ಸಾಯಿ ಶಾಲಾ ಮಕ್ಕಳಿಂದ ಪಲ್ಲಕ್ಕಿ ಸೇವೆ, ಮಹಾಮಂಗಳಾರತಿ, ಶಾಲಾ ಮಕ್ಕಳಿಗೆ ಮಹಾಪ್ರಸಾದ ವಿನಿಯೋಗ ಜರುಗಿತು. ಮಧ್ಯಾಹ್ನ ನಾರಾಯಣರಿಗೆ ವಸ್ತ್ರದಾನ ಮತ್ತು ನಾರಾಯಣ ಸೇವೆ, ಭಕ್ತಾಧಿಗಳಿಗೆ ಮಹಾಪ್ರಸಾದ ವಿನಿಯೋಗ, ಸಂಜೆ ಕಲಾವಾದ್ಯಗಳೊಂದಿಗೆ ಹಾಡುಗಾರಿಕೆ ಹಾಗು ಭಜನೆ, ಚಿಂತನೆ, ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ಜರುಗಿದವು.
ಭದ್ರಾವತಿ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಮತ್ತು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಬುಧವಾರ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ೯೭ನೇ ಜನ್ಮದಿನೋತ್ಸವ ಹಿನ್ನಲೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಕಾರ್ಯದರ್ಶಿ ಡಿ. ಪ್ರಭಾಕರ ಬೀರಯ್ಯ, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಶಿಕ್ಷಣ ಸಂಯೋಜಕ ಪರಮೇಶ್ವರಪ್ಪ, ಪ್ರಾಂಶುಪಾಲರಾದ ಮೃತ್ಯುಂಜಯ ಕಾನಿಟ್ಕರ್, ಶಾಮರಾಯಚಾರ್, ಉಪಪಾಂಶುಪಾಲ ಪ್ರಸನ್ನ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗು ಸಿಬ್ಬಂದಿ ವರ್ಗದವರು, ಉದ್ಯಮಿ ಬಿ.ಕೆ ಜಗನ್ನಾಥ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತಾಧಿಗಳು ಪಾಲ್ಗೊಂಡಿದ್ದರು.
ಭದ್ರಾವತಿ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಮತ್ತು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಬುಧವಾರ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ೯೭ನೇ ಜನ್ಮದಿನೋತ್ಸವ ಹಿನ್ನಲೆಯಲ್ಲಿ ಶ್ರೀ ಸಾಯಿ ಸತ್ಯನಾರಾಯಣ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.