ಡಿ.೫ರಂದು ೬ನೇ ವರ್ಷದ ಗುರುಪೂಜೆ, ಪುತ್ಥಳಿ ಅನಾವರಣ
ಭದ್ರಾವತಿ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವದ ಅಂಗವಾಗಿ ಭಾನುವಾರ ಧ್ವಜಾರೋಹಣ ಹಾಗು ಧಾರ್ಮಿಕ ಆಚರಣೆಗಳು ಜರುಗಿದವು.
ಭದ್ರಾವತಿ, ನ. ೨೭ : ನಗರದ ತರೀಕೆರೆ ರಸ್ತೆ ಶ್ರೀ ಶಿವಸುಬ್ರಮಣ್ಯ ಸ್ವಾಮಿ ಆಶ್ರಮ ಹಾಗು ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಅಂಗವಾಗಿ ಭಾನುವಾರ ಧ್ವಜಾರೋಹಣ ನೆರವೇರಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ಕಾರ್ತಿಕ ದೀಪೋತ್ಸವ ವಿಜೃಂಭಣೆಯಿಂದ ಡಿ.೫ರ ವರೆಗೆ ನಡೆಯುತ್ತಿದ್ದು, ಧ್ವಜಾರೋಹಣದೊಂದಿಗೆ ಆರಂಭಗೊಂಡ ದೀಪೋತ್ಸವದಲ್ಲಿ ಪ್ರತಿದಿನ ವಿವಿಧ ಧಾರ್ಮಿಕ ಆಚರಣೆಗಳು ಜರುಗಲಿವೆ. ಧ್ವಜಾರೋಹಣದ ಅಂಗವಾಗಿ ಹೋಮ-ಹವನ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಶ್ರೀ ಕ್ಷೇತ್ರದ ಶ್ರೀ ಮುರುಗೇಶ್ ಸ್ವಾಮೀಜಿ ದಿವ್ಯಸಾನಿಧ್ಯದಲ್ಲಿ ಜರುಗಿದವು.
ಎಂ.ಸಿ ಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಾ ಬಸಪ್ಪ, ಶಿವಮೊಗ್ಗ ಜಿಲ್ಲಾ ಸೇವಾದಳ ಅಧ್ಯಕ್ಷ ಮಂಜುನಾಥ್ ಬಾಬು, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಶ್ರೀ ಕ್ಷೇತ್ರದ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಎ. ಚಂದ್ರಘೋಷಣ್, ಸೇವಾಕರ್ತರಾದ ಮಂಜುನಾಥ್, ಸೋಮು, ಮೂರ್ತಿ, ಸಂಜೀವ್ ಕುಮಾರ್, ಎಂ. ವೇಲು, ಮಣಿ, ನಾರಾಯಣಸ್ವಾಮಿ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.
ಡಿ.೫ರಂದು ೬ನೇ ವರ್ಷದ ಗುರುಪೂಜೆ-ಪುತ್ಥಳಿ ಪ್ರತಿಷ್ಠಾಪನೆ :
ಶ್ರೀ ಕ್ಷೇತ್ರದ ಸಂಸ್ಥಾಪಕರಾದ ಶ್ರೀ ಭದ್ರಗಿರಿ ಸಿದ್ದರ್ ಮಹಾ ಸ್ವಾಮೀಜಿಯವರ ೬ನೇ ವರ್ಷದ ಗುರುಪೂಜೆ ಮತ್ತು ಪುತ್ಥಳಿ ಪ್ರತಿಷ್ಠಾಪನೆ ಡಿ.೫ರಂದು ನಡೆಯಲಿದ್ದು, ಈ ಸಂಬಂಧ ಬೆಳಿಗ್ಗೆ ೧೦.೩೦ಕ್ಕೆ ಗುರುವಂದನೆ ಹಾಗು ಧಾರ್ಮಿಕ ಸಭೆ ಆರಂಭಗೊಳ್ಳಲಿದೆ.
ಶ್ರೀ ಕ್ಷೇತ್ರದ ಶ್ರೀ ಮುರುಗೇಶ್ ಸ್ವಾಮೀಜಿ, ಚನ್ನಗಿರಿ ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಸ್ವಾಮೀಜಿ, ಬಾಗಲಕೋಟೆ ಸುಕ್ಷೇತ್ರ ಕುಳ್ಳೂರು ಶ್ರೀ ಗುರು ಶಿವಯೋಗೀಶ್ವರ ಸಂಸ್ಥಾನ ಕಲ್ಮಠದ ಶ್ರೀ ಬಸವಾನಂದ ಭಾರತಿ ಸ್ವಾಮೀಜಿ, ಚಿತ್ರದುರ್ಗ ಬಂಜಾರ ಮಠದ ಪೀಠಾಧ್ಯಕ್ಷ ಶ್ರೀ ಸೇವಾಲಾಲ್ ಸರ್ದಾರ್‌ಜೀ ಸ್ವಾಮೀಜಿ, ಜಮ್ಮು ಹಾಕನೋರ್ ಶ್ರೀರಾಮ್ ಮಂದಿರ ಪೌಲಿವಾಲ ಆಶ್ರಮಂ ಶ್ರೀ ಅಣ್ಣಮಲೈಮೌನ ಸ್ವಾಮೀಜಿ ಮತ್ತು ಹರಿದ್ವಾರ್ ಕನ್ಕಾಲ್, ಭೈರಾಗಿ ಕ್ಯಾಂಪ್, ಅಭಿದ್ ಗಂಗಾ ಮೈಯ್ಯ ಅಮಂ ಶ್ರೀ ಕೃಷ್ಣನಂದ ಭಾರತಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಶ್ರೀ ಕ್ಷೇತ್ರದ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಎ. ಚಂದ್ರಘೋಷನ್ ಅಧ್ಯಕ್ಷತೆ ವಹಿಸಲಿದ್ದು, ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಎಸ್ ಸುರೇಶ್ ಉದ್ಘಾಟಿಸುವರು. ಕೇಂದ್ರ ಸಚಿವರಾದ ಶೋಭಕರಂದ್ಲಾಜೆ, ಗೃಹಸಚಿವ ಅರಗಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಶಾಸಕರಾದ ಬಿ.ಕೆ ಸಂಗಮೇಶ್ವರ್, ಸಿ.ಟಿ ರವಿ, ಮಾಜಿ ಶಾಸಕ ಜಿ.ಎಚ್ ಶ್ರೀನಿವಾಸ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಎಂ.ಸಿ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಬಸಪ್ಪ ಮತ್ತು ಭದ್ರಗಿರಿ ಸೇವಾ ಟ್ರಸ್ಟ್ ಅಧ್ಯಕ್ಷ ಆರ್. ಶ್ಯಾಮರಾಜ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.