ಬೆಂಗಳೂರಿನ ಫ್ರೀಡಂ ಪಾರ್ಕ್ ಡಿ.೧೯ರಂದು ಹಮ್ಮಿಕೊಳ್ಳಲಾಗಿರುವ 'ಮಾಡು ಇಲ್ಲವೇ ಮಡಿ' ಅನಿರ್ಧಿಷ್ಟ ಹೋರಾಟದ ಅಂಗವಾಗಿ ಪೌರಾಡಳಿತ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಎನ್‌ಪಿಎಸ್ ನೌಕರರು ಶನಿವಾರ ಭದ್ರಾವತಿ ತಾಲೂಕು ಪಂಚಾಯಿತಿ ಆವರಣದಲ್ಲಿ 'ಜಾಗೃತಿ ಜಾಥಾ' ನಡೆಸುವ ಮೂಲಕ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
\ಭದ್ರಾವತಿ, ಡಿ. ೧೦: ವಿಧಾನಸಭಾ ಅಧಿವೇಶನದಲ್ಲಿ ಎನ್‌ಪಿಎಸ್ ರದ್ದತಿ ವಿಷಯ ಪ್ರಶ್ನಾವಳಿಯ ಮೊದಲ ಆದ್ಯತೆಯಲ್ಲಿ ಸೇರಿಸುವ ಮೂಲಕ ಡಿ. ೧೯ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿರುವ 'ಮಾಡು ಇಲ್ಲವೇ ಮಡಿ' ಅನಿರ್ಧಿಷ್ಟ ಹೋರಾಟ ಬೆಂಬಲಿಸುವಂತೆ ಆಗ್ರಹಿಸಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರ ಸಂಘದ ತಾಲೂಕು ಘಟಕದ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ರವರಿಗೆ ಮನವಿ ಸಲ್ಲಿಸಲಾಯಿತು.
ಅನಿರ್ಧಿಷ್ಟ ಹೋರಾಟದ ಅಂಗವಾಗಿ ಪೌರಾಡಳಿತ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಎನ್‌ಪಿಎಸ್ ನೌಕರರು ತಾಲೂಕು ಪಂಚಾಯಿತಿ ಆವರಣದಲ್ಲಿ 'ಜಾಗೃತಿ ಜಾಥಾ' ನಡೆಸುವ ಮೂಲಕ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ನೌಕರರ ಭವಿಷ್ಯಕ್ಕೆ ಎನ್‌ಪಿಎಸ್ ಮಾರಕವಾಗಿದ್ದು, ಇದನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಹಲವಾರು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸುಕೊಂಡು ಬರಲಾಗುತ್ತಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತನ ವಹಿಸಲಾಗಿದೆ ಎಂದು ದೂರಿದರು.
ಸಂಘದ ಅಧ್ಯಕ್ಷ ಎ. ರಂಗನಾಥ್ ನೇತೃತ್ವ ವಹಿಸಿದ್ದರು. ಕಾರ್ಯದರ್ಶಿ ಶಿವಾನಾಯ್ಕ, ಖಜಾಂಚಿ ಶ್ರೀಕಾಂತ್, ಉಪಾಧ್ಯಕ್ಷರಾದ ಆರ್.ಯು ಚಂದ್ರಶೇಖರ್, ಹೇಮಂತ್‌ಕುಮಾರ್, ಸಹಕಾರ್ಯದರ್ಶಿಗಳಾದ ಮಹಮದ್ ಜಾಫರ್, ನಂದಿನಿ ಮತ್ತು ಪೂರ್ಣಿಮಾ ಹಾಗು ಸರ್ಕಾರಿ ನೌಕರರ ವಿವಿಧ ಸಂಘಟನೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.