ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ, ಶಿವಮೊಗ್ಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ಡಿ. ೧೩: ಮಕ್ಕಳು ಸರ್ವತೋಮುಖ ಬೆಳವಣಿಗೆ ಹೊಂದುವಂತೆ ರೂಪಿಸುವುದೇ ಶಿಕ್ಷಣ. ಇದನ್ನು ನಾವೆಲ್ಲರೂ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಹೇಳಿದರು.
ಅವರು ಮಂಗಳವಾರ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ, ಶಿವಮೊಗ್ಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.
ಶಿಕ್ಷಣದ ಜೊತೆಗೆ ಮಕ್ಕಳ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಹೆಚ್ಚಿನದ್ದಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಮಕ್ಕಳ ಬೆಳವಣಿಗೆಗೆ ಪೂರಕವಾಗಿದೆ ಎಂದರು.
ವೇದಿಕೆಯಲ್ಲಿ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಸದಸ್ಯೆ ಸರ್ವಮಂಗಳ ಭೈರಪ್ಪ, ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ತಹಸೀಲ್ದಾರ್ ಆರ್. ಪ್ರದೀಪ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಧ್ಯಕ್ಷ ಬಿ. ಸಿದ್ದಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆನಂದಕುಮಾರ್, ಶಂಕರಪ್ಪ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಜೆ. ಸುಮತಿ, ಅಧ್ಯಕ್ಷ ಪೃಥ್ವಿರಾಜ್, ನಿರ್ದೇಶಕರಾದ ಯು. ಮಹಾದೇವಪ್ಪ, ಬಸವರಾವ್‌ದಾಳೆ, ಶ್ರೀಧರ್ ಗೌಡ, ಮಾಯಮ್ಮ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕೆ. ಬಸವರಾಜಪ್ಪ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪಾಲಾಕ್ಷಪ್ಪ, ಅಪೇಕ್ಷ ಮಂಜುನಾಥ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಸಿ.ಆರ್ ಪರಮೇಶ್ವರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಶಿಕ್ಷಕರು, ಸಿಬ್ಬಂದಿ ವರ್ಗದವರು, ಜಿಲ್ಲೆಯ ೭ ತಾಲೂಕುಗಳ ವಿವಿಧ ಶಾಲೆಗಳ ಶಿಕ್ಷಕರು, ಪೋಷಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.