ಮಂಗಳೂರಿನ ಕಥಾಬಿಂದು ಕನ್ನಡ ಕಂಪು ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗು ಬೆಂಗಳೂರಿನ ಸಮೃದ್ಧಿ ಫೌಂಡೇಶನ್ ಮತ್ತು ನಗರದ ಶ್ರೀ ಮರುಳಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ವತಿಯಿಂದ ಉತ್ತರ ಪ್ರದೇಶದ ವಾರಣಾಸಿ ಕಾಶಿ ಜಂಗಮವಾಡಿ ಮಠದಲ್ಲಿ ’ಕನ್ನಡ ಕಂಪು ಸರಣಿ ೫ ಸಾಧನ ಶ್ರೀ ರಾಷ್ಟ್ರ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ ಭದ್ರಾವತಿಯ ಹಿರಿಯ ಸಹಕಾರಿ ಧುರೀಣ ಎನ್. ಕೃಷ್ಣಮೂರ್ತಿ ಅವರಿಗೆ ಸಾಧನ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಭದ್ರಾವತಿ, ಡಿ.೧೯: ಮಂಗಳೂರಿನ ಕಥಾಬಿಂದು ಕನ್ನಡ ಕಂಪು ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗು ಬೆಂಗಳೂರಿನ ಸಮೃದ್ಧಿ ಫೌಂಡೇಶನ್ ಮತ್ತು ನಗರದ ಶ್ರೀ ಮರುಳಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ವತಿಯಿಂದ ಉತ್ತರ ಪ್ರದೇಶದ ವಾರಣಾಸಿ ಕಾಶಿ ಜಂಗಮವಾಡಿ ಮಠದಲ್ಲಿ ’ಕನ್ನಡ ಕಂಪು ಸರಣಿ ೫ ಸಾಧನ ಶ್ರೀ ರಾಷ್ಟ್ರ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ ನಗರದ ಹಿರಿಯ ಸಹಕಾರಿ ಧುರೀಣ ಎನ್. ಕೃಷ್ಣಮೂರ್ತಿ ಅವರಿಗೆ ಸಾಧನ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕೃಷ್ಣಮೂರ್ತಿಯವರು ಹಲವಾರು ವರ್ಷಗಳಿಂದ ಹಳೆನಗರದ ಮಾಡಲ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಅಲ್ಲದೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಕಥಾಬಿಂದು ಕನ್ನಡ ಕಂಪು ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಪಿ.ವಿ ಪ್ರದೀಪ್‌ಕುಮಾರ್, ಸಮೃದ್ಧಿ ಫೌಂಡೇಶನ್ ಅಧ್ಯಕ್ಷ ರುದ್ರಾರಾಧ್ಯ ಮತ್ತು ಮರುಳಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಸಿದ್ದಲಿಂಗಯ್ಯ, ನಗರಸಭೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ನಿವೃತ್ತ ಅಧೀಕ್ಷಕ ಅಭಿಯಂತರ ರವೀಂದ್ರ ಕಿಣಿ, ಡಿಎಸ್‌ಎಸ್ ಮುಖಂಡ ಕೆ. ನಾಗರಾಜ, ಆಯುರ್ವೇದ ಸಂಕಾಯ ಕಾಶಿ ಹಿಂದೂ ವಿಶ್ವವಿದ್ಯಾಲಯ ವಾರಣಾಸಿ ಪ್ರೊಫೆಸರ್ ಡಾ. ಪರಮೇಶ್ವರಪ್ಪ ಎಸ್. ಬ್ಯಾಡಗಿ, ವಿಜ್ಞಾನ ಸಂಸ್ಥಾನ ಕಾಶಿ ವಿಶ್ವವಿದ್ಯಾಲಯ ವಾರಣಾಸಿ ಪ್ರೊಫೆಸರ್ ಡಾ. ಬಸವಪ್ರಭು ಚಿರಲಿ, ಜಂಗಮವಾಡಿ ಮಠ ವ್ಯವಸ್ಥಾಪಕಿ ನಳಿನಿ ಗಂಗಾಧರ ಚಿಲುಮೆ ಮತ್ತು ಶಿವಾನಂದ ಹಿರೇಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.