![](https://blogger.googleusercontent.com/img/a/AVvXsEhWwJJDO8mS9bTKwfIgxzY2-emCCPdm4bIRAEqdTdn12ZaM0p5l9Fl_0UJUTs1hmHvorVs3LCuMlN-LdkxzFQvN-z_rLBF1702WrN0twu368HjbhKLbItS4clQqyW8eWg0wuLtS2DDirbXm6NuLcizhcp1Uvs0IAiZKwt5vxIBxaAriF-kZV5S-I-PQww=w400-h180-rw)
ಭದ್ರಾವತಿ ಕಾಗದನಗರ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗಕಟ್ಟೆಯಲ್ಲಿ ಸೋಮವಾರ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ ಕಾರ್ಯಕ್ರಮದಲ್ಲಿ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಪಾಲ್ಗೊಂಡು ವೈಕುಂಠನಾಥ ದರ್ಶನ ಪಡೆದರು.
ಭದ್ರಾವತಿ, ಜ. ೨: ಕಾಗದನಗರ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗಕಟ್ಟೆಯಲ್ಲಿ ಸೋಮವಾರ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ ಕಾರ್ಯಕ್ರಮದಲ್ಲಿ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಪಾಲ್ಗೊಂಡು ವೈಕುಂಠನಾಥ ದರ್ಶನ ಪಡೆದರು.
ಪ್ರತಿವರ್ಷದಂತೆ ಈ ಬಾರಿ ಸಹ ದೇವಸ್ಥಾನದಲ್ಲಿ ದೀಪೋತ್ಸವ ಹಾಗು ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. ಸಂಜೆ ದೀಪೋತ್ಸವಕ್ಕೂ ಮೊದಲು ಪ್ರಮುಖ ರಸ್ತೆಯಲ್ಲಿ ಶ್ರೀ ಸ್ವಾಮಿಯ ಉತ್ಸವ ಮೆರವಣಿಗೆ ನಡೆಯಿತು. ನಂತರ ಶಾರದ ಅಪ್ಪಾಜಿ ದೀಪ ಬೆಳಗಿಸುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಿದರು.
ನಗರಸಭಾ ಸದಸ್ಯ ಬಸವರಾಜ ಬಿ. ಆನೇಕೊಪ್ಪ ನೇತೃತ್ವದಲ್ಲಿ ಶಾರದ ಅಪ್ಪಾಜಿ ಹುಟ್ಟುಹಬ್ಬ ಆಚರಿಸಿ ಕೇಕ್ ಕತ್ತರಿಸಿ ಲಾಡು ವಿತರಿಸಲಾಯಿತು. ದೇವಸ್ಥಾನ ಸಮಿತಿ ವತಿಯಿಂದ ಶಾರದ ಅಪ್ಪಾಜಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ದೇವಸ್ಥಾನದಲ್ಲಿರುವ ಎಲ್ಲಾ ಮೂಲ ವಿಗ್ರಹಗಳಿಗೂ ವಿಶೇಷ ಅಲಂಕಾರದೊಂದಿಗೆ ಪೂಜೆ, ಹೋಮ-ಹವನ, ತೀರ್ಥಪ್ರಸಾದ ವಿನಿಯೋಗ ನಡೆಯಿತು. ಪ್ರಧಾನ ಅರ್ಚಕ ರಮೇಶ್ ಭಟ್ಟರು ತರಳಿಮಠ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.
ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ನಗರಸಭಾ ಸದಸ್ಯರಾದ ರೂಪಾವತಿ ಗುಣಶೇಖರ್, ಸವಿತಾ ಉಮೇಶ್, ಪಲ್ಲವಿ ದಿಲೀಪ್, ಉದಯ್‌ಕುಮಾರ್, ಕುಶಾಲ್, ಭಾಗ್ಯಮ್ಮ, ದೇವಸ್ಥಾನ ಸಮಿತಿ ಪ್ರಮುಖರಾದ ನಿಂಗಪ್ಪ, ಗೋಪಿನಾಥ್ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.