ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಜಾರಿಟೇಬಲ್ ಟ್ರಸ್ಟ್ ವತಿಯಿಂದ ಫೆ.೭ರಂದು ಬೆಳಿಗ್ಗೆ ಗಂಟೆಗೆ ಮೂಲೆಕಟ್ಟೆ ಇನ್ಫ್ಯಂಟ್ ಜೀಸಸ್ ಚರ್ಚ್ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಸೆಲ್ವರಾಜ್ ತಿಳಿಸಿದರು.
ಭದ್ರಾವತಿ, ಫೆ. ೨ : ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಜಾರಿಟೇಬಲ್ ಟ್ರಸ್ಟ್ ವತಿಯಿಂದ ಫೆ.೭ರಂದು ಬೆಳಿಗ್ಗೆ ಗಂಟೆಗೆ ಮೂಲೆಕಟ್ಟೆ ಇನ್ಫ್ಯಂಟ್ ಜೀಸಸ್ ಚರ್ಚ್ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಸೆಲ್ವರಾಜ್ ತಿಳಿಸಿದರು.
ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಕ್ರೈಸ್ತ ಸಮುದಾಯಕ್ಕೆ ಜಾಗವನ್ನು ದಾನವಾಗಿ ಕೊಟ್ಟಿದ್ದಾರೆ. ಈ ಜಾಗಕ್ಕೆ ಸಂಬಂಧಿಸಿದಂತೆ ಕ್ರೈಸ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಶಾಸಕರು ಕ್ರೈಸ್ತ ಸಮುದಾಯದವರ ಮೇಲೆ ಹೊಂದಿರುವ ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.
ಈ ಜಾಗದಲ್ಲಿ ಸಮುದಾಯ ಭವನ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದರಿಂದ ಕ್ರೈಸ್ತ ಸಮುದಾಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಈಗಾಗಲೇ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ರು.೫೦ ಲಕ್ಷ ಅನುದಾನ ಸಹ ಬಿಡುಗಡೆಯಾಗಿದೆ. ಅಂದು ನಡೆಯಲಿರುವ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಫಾಸ್ಟರ್ ರೆವರೆಂಡ್ ಡಾ. ಎಸ್. ದೇವನೇಸನ್ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ರೈಸ್ತರು ಸಮುದಾಯದವರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಟ್ರಸ್ಟ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಲಿದೆ. ಈಗಾಗಲೇ ಎಂಪಿಎಂ ಕಾರ್ಖಾನೆಯನ್ನು ರಾಜಕೀಯಕ್ಕೆ ದುರುದ್ದೇಶಕ್ಕೆ ಬಳಸಿಕೊಂಡು ಮುಚ್ಚಿಸಲಾಗಿದೆ. ಇದೀಗ ವಿಐಎಸ್‌ಎಲ್ ಕಾರ್ಖಾನೆ ಸಹ ಮುಚ್ಚಿಸುವ ಹುನ್ನಾರ ನಡೆಸುತ್ತಿರುವುದನ್ನು ಟ್ರಸ್ಟ್ ಖಂಡಿಸುತ್ತದೆ. ತಕ್ಷಣ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸಿ ಅಭಿವೃದ್ಧಿ ಪಡಿಸಬೇಕೆಂದರು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಾದರ್ ಆರೋಗ್ಯ ರಾಜ್, ನಗರಸಭೆ ಮಾಜಿ ಸದಸ್ಯ ಪ್ರಾನ್ಸಿಸ್, ಪಿ.ವಿ ಪೌಲ್, ದೇವಿಡ್, ದಾಸ್, ಫಾಸ್ಟರ್ ಪಾಂಡು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.