ಭದ್ರಾವತಿಯಲ್ಲಿ ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಜೆಡಿಎಸ್ ಮುಖಂಡ ಎಸ್. ಮಣಿಶೇಖರ್ ಹಾಗು ಸುಮಾರು ೫೦೦ ಮಂದಿ ಬೆಂಬಲಿಗರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಭದ್ರಾವತಿ, ಫೆ. ೧೧: ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಜೆಡಿಎಸ್ ಮುಖಂಡ ಎಸ್. ಮಣಿಶೇಖರ್ ಹಾಗು ಸುಮಾರು ೫೦೦ ಮಂದಿ ಬೆಂಬಲಿಗರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಹಳೇನಗರದ ಕನಕಮಂಟಪದಲ್ಲಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಎಸ್. ಮಣಿಶೇಖರ್‌ರವರನ್ನು ಪಕ್ಷಕ್ಕೆ ಸ್ವಾಗತಿಸಿ ಅಭಿನಂದಿಸಿದರು.
ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕ ಆರ್. ನಾಗೇಶ್, ದೇಶ ಪ್ರೇಮಿ ಟಿಪ್ಪು ಯುವಕರ ಸಂಘದ ಅಧ್ಯಕ್ಷ ಮೆಹಬೂಬ್, ಕುರುಬ ಸಮಾಜದ ಪ್ರಮುಖರಾದ ಕುಮಾರ್(ಮಾಸ್ಟರ್), ರಾಜು ಹೋಬಳಿದಾರ್, ಮಂಜುನಾಥ್, ನಾಗತಿಬೆಳಗಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಸ್. ವೇಲುಸ್ವಾಮಿ, ನದೀಮ್ ಪಾಷ, ಜಾವೀದ್, ಕೈಸರ್, ನಾಗರಾಜ್ ಸಿಂಧ್ಯಾ, ಕೋಡಿಹಳ್ಳಿ ರುದ್ರೇಶ್, ಹೊಸಮನೆ ಹೇಮಂತ್‌ಕುಮಾರ್, ಕೂಡ್ಲಿಗೆರೆ ರವಿಕುಮಾರ್, ಮುಕುಂದ ಸೇರಿದಂತೆ ಸುಮಾರು ೫೦೦ ಮಂದಿ ಬೆಂಬಲಿಗರು ಎಸ್. ಮಣಿಶೇಖರ್ ಅವರೊಂದಿಗೆ ಪಕ್ಷಕ್ಕೆ ಸೇರ್ಪಡೆಗೊಂಡರು.
ಎಸ್. ಮಣಿಶೇಖರ್ ಮೂಲತಃ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಸಹ ಸೇವೆ ಸಲ್ಲಿಸಿದ್ದರು. ಕಳೆದ ಬಾರಿ ಜಿಲ್ಲಾ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡು ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು.