ಗ್ರಾಮ ಪಂಚಾಯಿತಿ ಸದಸ್ಯೆ ಕಾಂಗ್ರೆಸ್ ಸೇರ್ಪಡೆ
ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗೌರಮ್ಮ ಮಹಾದೇವ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭದ್ರಾವತಿ, ಮಾ. ೨೩ : ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗೌರಮ್ಮ ಮಹಾದೇವ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಗೌರಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಚುನಾವಣಾಧಿಕಾರಿಯಾದ ತಾಲೂಕು ಕಾರ್ಯನಿರ್ವಹಣಾಧಿಕಾರಿ ರಮೇರ್ಶರವರು ಅವಿರೋಧ ಆಯ್ಕೆ ಘೋಷಿಸಿದರು.
ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಒಟ್ಟು ೧೩ ಸದಸ್ಯ ಬಲಹೊಂದಿದ್ದು, ಕಾಂಗ್ರೆಸ್ ಪಕ್ಷದ ಬೆಂಬಲಿತರು ಅಧಿಕಾರದ ಚುಕ್ಕಾಣಿ ಹಿಡಿದ್ದಾರೆ. ಒಪ್ಪಂದ ಮಾಡಿಕೊಂಡು ಅಧಿಕಾರ ಹಂಚಿಕೆ ಮಾಡಿಕೊಳ್ಳಲಾಗಿದೆ. ಅದರಂತೆ ಅಧ್ಯಕ್ಷರಾಗಿದ್ದ ಪಾರ್ವತಿ ಬಾಯಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ನಡೆದ ಚುನಾವಣೆಯಲ್ಲಿ ಗೌರಮ್ಮ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯಿತಿ ಸದಸ್ಯೆ ಕಾಂಗ್ರೆಸ್ ಸೇರ್ಪಡೆ :
ಗ್ರಾಮ ಪಂಚಾಯ್ತಿ ಸದಸ್ಯೆ ನೀಲಾ ಬಾಯಿ ಹಾಗೂ ಅವರ ಪತಿ ಚಂದ್ರನಾಯ್ಕರವರು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮಣಿಶೇಖರ್‌ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಆರ್.ಎನ್ ರುದ್ರೇಶ್, ಸದಸ್ಯರಾದ ಎಂ. ಜಯಣ್ಣ, ಕುಬೇರ ನಾಯ್ಕ, ಸಿ. ವಿಶ್ವನಾಥ್, ಮಲಕ್ ಬಿ ವೀರಪ್ಪನ್, ಸ್ವಾಮಿನಾಥನ್, ಜಿ.ಆರ್ ನಾಗರಾಜಪ್ಪ, ಭಾಗ್ಯ, ಉಮಾದೇವಿ ತಿಪ್ಪೇಶ್, ಪಾರ್ವತಿ ಬಾಯಿ, ಸಿದ್ದಮ್ಮ ನಾಗೇಶ್, ಕೂಡ್ಲಿಗೆರೆ ವಿಎಸ್‌ಎಸ್‌ಎನ್ ಅಧ್ಯಕ್ಷ ಎನ್.ಎಚ್ ಮಹೇಶ್, ಬ್ಲಾಕ್ ಕಾಂಗ್ರೆಸ್ ಸಮಿತಿ ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ಮಣಿ ಎಎನ್‌ಎಸ್, ಅನಿತಾ ಮಲ್ಲೇಶ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪರಮೇಶ್ವರಪ್ಪ, ಮುಖಂಡರಾದ ಎಸ್. ಮಹಾದೇವ, ಕಲ್ಪನಹಳ್ಳಿ ಕಿರ್ಯಾನಾಯ್ಕ, ಪ್ರವೀಣ್ ನಾಯ್ಕ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಗ್ರಾಮದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ಕೂಡ್ಲಿಗೆರೆ ಗ್ರಾಮ ಪಂಚಾಯ್ತಿ ಸದಸ್ಯೆ ನೀಲಾ ಬಾಯಿ ಹಾಗೂ ಅವರ ಪತಿ ಚಂದ್ರನಾಯ್ಕರವರು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮಣಿಶೇಖರ್‌ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾದರು.