ಭದ್ರಾವತಿ, ಮಾ. ೨೩ : ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಮಾ.೨೫ರ ಮಧ್ಯಾಹ್ನ ೩ ಗಂಟೆಗೆ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸರ್ವಮಂಗಳಮ್ಮ ಶಿವಶಂಕರಯ್ಯ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಪ್ರಶಸ್ತಿ ಪುರಸ್ಕೃತರಾದ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಅಧ್ಯಕ್ಷೆ ಡಾ.ಎಸ್.ಜಿ ಸುಶೀಲಮ್ಮ ಸಮರಂಭ ಉದ್ಘಾಟಿಸುವರು. ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ಅಧ್ಯಕ್ಷೆ ಆರ್.ಎಸ್ ಶೋಭ ಅಧ್ಯಕ್ಷತೆ ವಹಿಸಲಿದ್ದಾರೆ.
ಪ್ರಶಸ್ತಿ ಸ್ಥಾಪಕರಾದ ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ ಉಪಸ್ಥಿತರಿರುವರು. ಬೆಂಗಳೂರಿನ ವಕೀಲರಾದ ಶ್ರೀದೇವಿ ಅಂಚಿ ಚೀಟಿ ಮತ್ತು ಮಹಿಳೆ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದು, ಸಮಾಜದ ಉಪಾಧ್ಯಕ್ಷೆ ಬಿ.ಎಸ್ ಭಾಗ್ಯಲಕ್ಷ್ಮಿ, ರಾಜ್ಯಮಟ್ಟದ ಕರಾಟೆಪಟು ಸಿಂಚನ ಅವರಿಗೆ ಸನ್ಮಾನ ನಡೆಯಲಿದೆ.
ಸಮಾಜದ ಗೌರವಾಧ್ಯಕ್ಷೆ ಗೌರಮ್ಮ ಶಂಕರಯ್ಯ, ಸಲಹೆಗಾರರಾದ ಯಶೋಧ ವೀರಭದ್ರಪ್ಪ, ಪ್ರಧಾನ ಕಾರ್ಯದರ್ಶಿ ನಾಗರತ್ನ ವಾಗೀಶ್ ಕೋಠಿ ಮತ್ತು ವೀರಶೈವ ಸೇವಾಸಮಿತಿ ಅಧ್ಯಕ್ಷ ಆರ್. ಮಹೇಶ್‌ಕುಮಾರ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಮಾಜದ ಅಧ್ಯಕ್ಷೆ ಆರ್.ಎಸ್ ಶೋಭ ಕೋರಿದ್ದಾರೆ.