ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪ ನೂತನವಾಗಿ ೨.೧೭ ಕೋ.ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಖಾಸಗಿ ಬಸ್ ನಿಲ್ದಾಣ.
ಭದ್ರಾವತಿ, ಮಾ. ೨೪ : ಕರ್ನಾಟಕ ನಗರ ಭೂ ಸಾರಿಗೆ ನಿರ್ದೇಶನಾಲಯ ಮತ್ತು ನಗರಸಭೆ ಉದ್ದಿಮೆ ನಿಧಿ ವತಿಯಿಂದ ನಗರದ ಹೃದಯ ಭಾಗದಲ್ಲಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪ ನೂತನವಾಗಿ ೨.೧೭ ಕೋ.ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಖಾಸಗಿ ಬಸ್ ನಿಲ್ದಾಣದ ಉದ್ಘಾಟನೆ ಮಾ.೨೫ರ ಮಧ್ಯಾಹ್ನ ೧೨ ಗಂಟೆಗೆ ನಡೆಯಲಿದೆ.
ಚುನಾವಣೆ ಘೋಷಣೆಯಾಗುವ ಸಾಧ್ಯತೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಮಾ.೨೬ರ ಭಾನುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮ ಶನಿವಾರ ನಡೆಯುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ ನಾರಾಯಣಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ, ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ್, ಪೌರಾಡಳಿತ ಇಲಾಖೆ ಸಚಿವ ಎನ್. ನಾಗರಾಜ್(ಎಂ.ಟಿ.ಬಿ), ಮಾಜಿ ಬಿ.ಎಸ್ ಯಡಿಯೂರಪ್ಪ, ಶಾಸಕರಾದ ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ವಿವಿಧ ನಿಗಮ ಮಂಡಳಿ ಅಧ್ಯಕ್ಷರುಗಳಾದ ಡಾ. ರಾಜು ಎಂ. ತಲ್ಲೂರು, ಎಚ್.ಟಿ ಬಳಿಗಾರ, ಕೆ.ಎಸ್ ಗುರುಮೂರ್ತಿ, ಎಚ್.ಎಚ್ ಶ್ರೀಪಾದರಾವ್, ಕೆ.ಬಿ ಪವಿತ್ರ ರಾಮಯ್ಯ, ಎನ್.ಜಿ ನಾಗರಾಜ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷೆ ಬಿ.ಪಿ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಸದಸ್ಯ ಜಾರ್ಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ನಗರಸಭಾ ಸದಸ್ಯರು ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಮನುಕುಮಾರ್ ಕೋರಿದ್ದಾರೆ.