ರಾಜ್ಯ ವಿಧಾನಸಭಾ ಚುನಾವಣೆ ಪ್ರಕ್ರಿಯೆಗಳು ಆರಂಭಗೊಳ್ಳುವ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆ ಮೇರೆಗೆ ಶನಿವಾರ ಭದ್ರಾವತಿ ಸಿದ್ಧಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು
ಭದ್ರಾವತಿ, ಮಾ. 25: ರಾಜ್ಯ ವಿಧಾನಸಭಾ ಚುನಾವಣೆ ಪ್ರಕ್ರಿಯೆಗಳು ಆರಂಭಗೊಳ್ಳುವ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆ ಮೇರೆಗೆ ಶನಿವಾರ ಸಿದ್ಧಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮತದಾರರ ಸಾಕ್ಷರತಾ ಸಂಘಗಳ ಸಂಚಾಲಕರು, ಚುನಾವಣಾ ಜಾಗೃತ ಸಂಘಗಳ ಸಂಚಾಲಕರು ಮತ್ತು ಕ್ಯಾಂಪಸ್ ಅಂಬಾಸಿಡರ್, ಬಿಎಲ್‌ಓಗಳು ತರಬೇತಿ ಕಾರ್ಯಾಕ್ರಮದಲ್ಲಿ ಪಾಲ್ಗೊಂಡಿದ್ದರು.
ಸಂಪನ್ಮೂಲ ವ್ಯಕ್ತಿಗಳಾದ ರಾಜ್ಯಮಟ್ಟದ ತರಬೇತುದಾರ ಬಿ.ಆರ್.ಸಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನವೀದ್ ಅಹಮದ್ ಪರ್ವೀಜ್, ತಾಲೂಕು ಮಟ್ಟದ ಇಎಲ್‌ಸಿ ತರಬೇತುದಾರರಾದ ಸಹಾಯಕ ಪ್ರಾಧ್ಯಾಪಕ ಡಾ. ಎಚ್.ಎಸ್ ಶಿವರುದ್ರಪ್ಪ, ಸಹ ಶಿಕ್ಷಕ ಎಂ.ಜಿ ನವೀನ್‌ಕುಮಾರ್, ಮುಖ್ಯ ಶಿಕ್ಷಕ ಸಿ.ಡಿ ಮಂಜುನಾಥ್ ಮತ್ತು ಸಹ ಶಿಕ್ಷಕ ಬಿ. ಮಂಜಪ್ಪ, ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆ, ನಿಧನ ಹೊಂದಿರುವ ಮತದಾರರನ್ನು ತೆಗೆದು ಹಾಕುವುದು ಹಾಗು ತಿದ್ದುಪಡಿ ಮಾಡುವ ಕುರಿತು ಮತ್ತು ಚುನಾವಣೆ ಪ್ರಕ್ರಿಯೆಗಳು, ಮತದಾರರ ಭಾಗವಹಿಸುವಿಕೆ, ಜಾಗೃತಿ ಮೂಡಿಸುವುದು, ಇವಿಎಂ, ವಿವಿ ಪ್ಯಾಡ್ ಬಳಕೆ ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಿದರು.
ಉಪವಿಭಾಗಾಧಿಕಾರಿ ರವಿಚಂದ್ರನಾಯಕ್, ತಹಸೀಲ್ದಾರ್ ಗ್ರೇಡ್-2 ರಂಗಮ್ಮ, ಉಪತಹಸೀಲ್ದಾರ್ ಮಂಜಾನಾಯ್ಕ, ನಗರಸಭೆ ಪೌರಾಯುಕ್ತ ಮನುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಶಿರಸ್ತೇದಾರ್ ರಾಧಾಕೃಷ್ಣಭಟ್, ಮಲ್ಲಿಕಾರ್ಜುನಯ್ಯ, ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ತಾಲೂಕಿನ 253 ಬಿಎಲ್ಓ, 128 ಪ್ರೌಢಶಾಲೆ ಹಾಗು ಕಾಲೇಜುಗಳ ಮತದಾರರ ಸಾಕ್ಷರತಾ ಸಂಘಗಳ ಸಂಚಾಲಕರು ಭಾಗವಹಿಸಿದ್ದರು.