ಭದ್ರಾವತಿ ತಾಲೂಕಿನ ಶ್ರೀ ಛತ್ರಪತಿ ಶಿವಾಜಿ ಮರಾಠ ಬಾಂಧವರು ಹಾಗು ಜೀಜಾಮಾತಾ ಮಹಿಳಾ ಮಂಡಳಿ ವತಿಯಿಂದ ಶನಿವಾರ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ೩೯೬ನೇ ಜಯಂತ್ಯೋತ್ಸವ ಮತ್ತು ಬೃಹತ್ ಭವ್ಯ ಮೆರವಣಿಗೆ ಕಾರ್ಯಕ್ರಮ ಶ್ರೀ ಮುರುಗೇಶ್ ಸ್ವಾಮೀಜಿ, ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ, ಮಾ. ೨೫ : ಛತ್ರಪತಿ ಶಿವಾಜಿ ಮಹಾರಾಜರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ತಾಲೂಕಿನ ಶ್ರೀ ಛತ್ರಪತಿ ಶಿವಾಜಿ ಮರಾಠ ಬಾಂಧವರು ಹಾಗು ಜೀಜಾಮಾತಾ ಮಹಿಳಾ ಮಂಡಳಿ ವತಿಯಿಂದ ಶನಿವಾರ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ೩೯೬ನೇ ಜಯಂತ್ಯೋತ್ಸವ ಮತ್ತು ಬೃಹತ್ ಭವ್ಯ ಮೆರವಣಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿವಾಜಿ ಮಹಾರಾಜರ ಆದರ್ಶ ಗುಣಗಳು ಎಲ್ಲರಿಗೂ ಮಾದರಿಯಾಗಿವೆ. ಮರಾಠ ಸಮಾಜದವರು ಇನ್ನೂ ಹೆಚ್ಚು ಸಂಘಟಿತರಾಗುವ ಮೂಲಕ ಸಮಾಜದ ಏಳಿಗೆಗೆ ಬದ್ಧರಾಗಬೇಕು. ಸಮಾಜದ ಬೆಳವಣಿಗೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಾಗಿದ್ದೇನೆ ಎಂದರು.
ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಮುರುಗೇಶ್ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಮರಾಠ ಸಮಾಜದ ಪ್ರಮುಖರಾದ ರಘುನಾಥರಾವ್ ಗಿಡ್ಡೆ ಅಧ್ಯಕ್ಷತೆ ವಹಿಸಿದ್ದರು. ಚಿಕ್ಕಮಗಳೂರಿನ ತನ್ಮಹಿ ಸಿಂಗಾರ್ ವಿಶೇಷ ಉಪನ್ಯಾಸ ನಡೆಸಿಕೊಟ್ಟರು.
ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ಕುಮಾರ್, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ. ಶ್ರೀನಿವಾಸ್ ಕರಿಯಣ್ಣ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ವೈ.ಎಚ್ ನಾಗರಾಜ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ, ಸಮಾಜ ಸೇವಕ ಪೊಲೀಸ್ ಉಮೇಶ್ ಸೇರಿದಂತೆ ಮರಾಠ ಸಮಾಜದ ವಿವಿಧ ಸಂಘಟನೆಗಳ ಮುಖಂಡರು ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಹೊಸಮನೆ ಶಿವಾಜಿ ವೃತ್ತದಿಂದ ಆರಂಭಗೊಂಡು ಲೋಯರ್ ಹುತ್ತಾ ಬಸ್ ನಿಲ್ದಾಣದವರೆಗೂ ಶಿವಾಜಿ ಮಹಾರಾಜರ ಪ್ರತಿಮೆಯೊಂದಿಗೆ ಭವ್ಯ ಮೆರವಣಿಗೆ ನಡೆಯಿತು.