![](https://blogger.googleusercontent.com/img/a/AVvXsEhWZyIlDAsJe7XZiQwQFzmfcB5hQ-kdtuBCnJ7ALSLuJCtJOo4XbSBngIN8iI9ucJubhjlvNf9J7BVOmmhV35N_YInyv3NTxXu7_au7Z_Yq2IxVUfjBUjq2G3cs7LWgew8LtPV5op0W1k3BL0bbTmPulp9fmuUz6TL-MYjMyhDDdPfgHhrky9uoFTJJug=w400-h251-rw)
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗಡೆಯವರು ಭದ್ರಾವತಿ ತಾಲೂಕಿನ ಪುರಾಣ ಪ್ರಸಿದ್ದ ಗಂಗೂರಿನ ಶ್ರೀ ಉದ್ದಾಂಜನೇಯ ಸ್ವಾಮಿ ದೇವಸ್ಥಾನ ಶ್ರೀ ಉದ್ದಾಮ ಕ್ಷೇತ್ರದ ನೂತನ ಅಂತರ್ಜಾಲ ತಾಣ ಲೋಕಾರ್ಪಣೆಗೊಳಿಸಿದರು.
ಭದ್ರಾವತಿ, ಮಾ. ೨೯: ತಾಲೂಕಿನ ಪುರಾಣ ಪ್ರಸಿದ್ದ ಗಂಗೂರಿನ ಶ್ರೀ ಉದ್ದಾಂಜನೇಯ ಸ್ವಾಮಿ ದೇವಸ್ಥಾನ ಶ್ರೀ ಉದ್ದಾಮ ಕ್ಷೇತ್ರ ವಾರ್ಷಿಕ ಜಾತ್ರಾ ಮಹೋತ್ಸವ ಮಾ.೩೧ರವರೆಗೆ ನಡೆಯಲಿದೆ.
ಬುಧವಾರ ಬೆಳಿಗ್ಗೆ ಕುಡಿಪೂಜೆ, ಧ್ವಜಾರೋಹಣ, ಉದ್ದಾಮನಿಗೆ ಪಂಚಾಮೃತ-ರುದ್ರಾಭಿಷೇಕ, ಗಣಪತಿ ಪುಣ್ಯಾಹ ನಾಂದಿ, ಮಹಾಸಂಕಲ್ಪ, ಅಷ್ಟದ್ರವ್ಯ ಮಹಾ ಗಣಪತಿ ಹೋಮ, ಪುರಸ್ಸರ ರುದ್ರಹೋಮ, ೧೦೮ ದಂಪತಿಗಳಿಂದ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆ, ಕೆಂಚಾಂಬಿಕ ಮೂಲಮಂತ್ರ ಹೋಮ, ಮಧ್ಯಾಹ್ನ ಮಹಾಮಂಗಳಾರತಿ, ಮಹಾಪ್ರಸಾದ ವಿನಿಯೋಗ ಕಾರ್ಯಕ್ರಮಗಳು ಜರುಗಿದವು. ಸ್ವಾಮಿಗೆ ವಿವಿಧ ಹಣ್ಣುಗಳಿಂದ ಅಲಂಕಾರ ಕೈಗೊಳ್ಳಲಾಗಿತ್ತು.
ಸಂಜೆ ಮಂಡಲಪೂಜೆ, ವಾಸ್ತುರಾಕ್ಷೋಘ್ನ ಸುದರ್ಶನ ಹೋಮ, ಲಕ್ಷ್ಮೀನೃಸಿಂಹ ಹೋಮ, ದಿಗ್ಬಲಿ, ಪ್ರಾಕೋತ್ಸವ, ಅಶ್ಥಾವಧಾನ ಸೇವೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಮಾ.೩೦ರಂದು ಬೆಳಿಗ್ಗೆ ೬.೩೦ಕ್ಕೆ ಕುಂಭಾಭಿಷೇಕ ನಡೆಯಲಿದೆ. ೧೦೦೮ ಕಳಶಗಳ ಗಂಗಾ ಪೂಜೆ ಮತ್ತು ಗಂಗಾ ಕಳಶಗಳ ಮೆರವಣಿಗೆ, ಕುಂಭಾಭಿಷೇಕ, ಮೋದಕ ಅಥರ್ವಶೀರ್ಷ ಗಣಪತಿ ಹೋಮ, ರಾಮತಾರಕ ಹೋಮ, ಬನ್ನಿಮಹಾಕಾಳಿ ಹೋಮ ಹಾಗು ಮಧ್ಯಾಹ್ನ ಮಹಾಮಂಗಳಾರತಿ, ಮಹಾಪ್ರಸಾದ ವಿನಿಯೋಗ ನಡೆಯಲಿದೆ.
ಸಂಜೆ ೪ ಗಂಟೆಗೆ ಶ್ರೀ ರಾಮತಾರಕ ಜಪ, ಸಂಜೆ ೬ ಗಂಟೆಗೆ ಪಂಚದುರ್ಗಾ ದೀಪ ನಮಸ್ಕಾರ, ವನದುರ್ಗಾ ಹೋಮ, ವಿಜಯದುರ್ಗ ಹೋಮ, ಪ್ರಾಕಾರೋತ್ಸವ, ಅಷ್ಟಾವಧಾನ ಸೇವೆ, ಮಹಾಮಂಗಳಾರತಿ, ಮಹಾಪ್ರಸಾದ ವಿನಿಯೋಗ ನಡೆಯಲಿದೆ. ಸ್ವಾಮಿಗೆ ವಿವಿಧ ಹೂವುಗಳಿಂದ ಅಲಂಕಾರ ನಡೆಯಲಿದೆ.
ಮಾ.೩೧ರಂದು ಬೆಳಿಗ್ಗೆ ಸೂರ್ಯೋದಯಕ್ಕೂ ಮುನ್ನ ಬಾಲಾರ್ಕ ಗಣಪತಿ ಹೋಮಾರಂಭ, ಶನಿ ಶಾಂತಿ ಹೋಮ, ಸೂರ್ಯೋದಯಕ್ಕೆ ಸರಿಯಾಗಿ ಪೂರ್ಣಹುತಿ, ಸ್ವಾಮಿಗೆ ಪಂಚಾಮೃತ ಅಭಿಷೇಕ, ತುಪ್ಪ, ಜೇನು ತುಪ್ಪ, ಎಳನೀರು, ಕಬ್ಬಿನ ಹಾಲು ಮತ್ತು ರುದ್ರಾಭಿಷೇಕ, ಮಾರುತಿ ಮೂಲ ಮಂತ್ರ ಹೋಮ, ಕೆಂಚರಾಯ ಮೂಲ ಮಂತ್ರ ಹೋಮ, ನವಗ್ರಹ ಹೋಮ ನಡೆಯಲಿವೆ. ಸಂಜೆ ೬ ಗಂಟೆಗೆ ಆಶ್ಲೇಷ ಬಲಿ ಪೂಜೆ, ಶ್ರೀ ವಲ್ಲಿಸಹಿತ ಸುಬ್ರಹ್ಮಣ್ಯ ಶಕ್ತಿಧರ ಹೋಮ, ಆಶ್ಲೇಷ ಬಲಿ ಪೂಜೆ, ಮಹಾ ಮಂಗಳಾರತಿ ಮತ್ತು ಮಹಾಪ್ರಸಾದ ವಿನಿಯೋಗ ಜರುಗಲಿವೆ.
ಅಂತರ್ಜಾಲ ತಾಣ(www.uddanaanjaneya.org) ಲೋಕಾರ್ಪಣೆ :
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗಡೆಯವರು ಶ್ರೀ ಕ್ಷೇತ್ರದ ನೂತನ ಅಂತರ್ಜಾಲ ತಾಣ ಲೋಕಾರ್ಪಣೆಗೊಳಿಸಿದರು.
ಶ್ರೀ ಉದ್ದಾಂಜನೇಯ ಸೇವಾ ಟ್ರಸ್ಟ್ ಪ್ರಮುಖರಾದ ಜಯಶಂಕರ್, ಹೊಸಹಳ್ಳಿ ತಾಂಡದ ರಮೇಶ್‌ನಾಯ್ಕ, ಮಂಜಾನಾಯ್ಕ, ಎಚ್.ಎಂ ರಾಮಚಂದ್ರಪ್ಪ, ಗಂಗೂರು ಎಸ್. ವಾಗೀಶ್‌ರಾವ್, ಶ್ರೀರಾಮನಗರ ಎಂ.ಕೆ ನಾರಾಯಣಸ್ವಾಮಿ, ಹೊಸಹಳ್ಳಿ ತಾಂಡದ ಎಸ್. ಗೋವಿಂದನಾಯ್ಕ, ಅಣ್ಣಪ್ಪನಾಯ್ಕ ಮತ್ತು ದೊಡ್ಡೇರಿ ಡಿ.ಸಿ ತಿಮ್ಮಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.