ಲಯನ್ಸ್ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ ೩೧೭ಸಿ ವತಿಯಿಂದ ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಹಾಕಿ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವೀರಭದ್ರ ಲಯನ್ಸ್ ಜಿಲ್ಲಾ ಕ್ರೀಡಾಕೂಟಕ್ಕೆ ವಿಐಎಸ್‌ಎಲ್ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಚಾಲನೆ ನೀಡಿದರು.
ಭದ್ರಾವತಿ, ಏ. ೯: ಲಯನ್ಸ್ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ ೩೧೭ಸಿ ವತಿಯಿಂದ ನ್ಯೂಟೌನ್ ವಿಐಎಸ್‌ಎಲ್ ಹಾಕಿ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವೀರಭದ್ರ ಲಯನ್ಸ್ ಜಿಲ್ಲಾ ಕ್ರೀಡಾಕೂಟಕ್ಕೆ ವಿಐಎಸ್‌ಎಲ್ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಚಾಲನೆ ನೀಡಿದರು.
ದಿವಂಗತ ಲಯನ್ಸ್ ಕೆ.ಸಿ ವೀರಭದ್ರಪ್ಪ ಸ್ಮರಣಾರ್ಥ ಜಿಲ್ಲಾ ಗವರ್ನರ್ ಲಯನ್ಸ್ ಡಾ. ಎಂ.ಕೆ ಭಟ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟದಲ್ಲಿ ಜಿಲ್ಲೆಯ ಲಯನ್ಸ್ ಹಾಗು ಲಿಯೋ ಕ್ಲಬ್ ಸದಸ್ಯರು ಭಾಗವಹಿಸಿದ್ದರು.
ನ್ಯೂಟೌನ್ ಶಿವಭದ್ರ ಟ್ರಸ್ಟ್ ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಅಧ್ಯಕ್ಷ, ವೈದ್ಯ ಡಾ. ಟಿ. ನರೇಂದ್ರ ಭಟ್, ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಎನ್ ಕಾರ್ತಿಕ್, ಕಾರ್ಯದರ್ಶಿ ಎಂ. ನಾಗರಾಜ್ ಶೇಟ್, ಖಜಾಂಚಿ ಜಿ.ಪಿ ದರ್ಶನ್, ಶ್ರೀಮತಿ ಕೆ.ಸಿ ವೀರಭದ್ರಪ್ಪ, ಕ್ರೀಡಾ ಸಂಯೋಜಕರಾಗಿ ಎಲ್. ದೇವರಾಜ್, ಗಿರೀಶ್ ಬಂಡಿಗಡಿ ಮತ್ತು ಎಂ.ಜಿ ರಾಜೀವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಖೋ ಖೋ ಕ್ರೀಡಾಪಟು, ಏಕಲವ್ಯ ಪ್ರಶಸ್ತಿ ವಿಜೇತ ಮುನಿರ್‌ಬಾಷಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ದೊಡ್ಡೇರಿ ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ ಸೌಲಭ್ಯ ವಿತರಿಸಲಾಯಿತು.
ಲಯನ್ಸ್ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ ೩೧೭ಸಿ ವತಿಯಿಂದ ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಹಾಕಿ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವೀರಭದ್ರ ಲಯನ್ಸ್ ಜಿಲ್ಲಾ ಕ್ರೀಡಾಕೂಟದಲ್ಲಿ ಏಕಲವ್ಯ ಪ್ರಶಸ್ತಿ ವಿಜೇತ ಮುನಿರ್‌ಬಾಷಾರನ್ನು ಸನ್ಮಾನಿಸಿ ಗೌರವಿಸಲಾಯಿತು.