![](https://blogger.googleusercontent.com/img/a/AVvXsEgAm_v1DP0GS_058nKAbjqZ6H6J6Sm8Yk0979ENqKx1BwRHjZ6huU3c3BxaW1c-65ZP4N0wS3d0zXVdIFS_IsxLZ1fqeIqXMDLXJXas9nnxxl2fzKRprca9qtVKUNZglg8SseeXcVIezuYS2MOahPkOaAdJsTdBOcgz7uIXZzUtohY2PSHABeHQ9L8TRg=w276-h400-rw)
ಭದ್ರಾವತಿ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿ ಪರವಾಗಿ ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ಭಾನುವಾರ ಕ್ಷೇತ್ರದ ವಿವಿಧೆಡೆ ಮತಯಾಚನೆ ನಡೆಸಿದರು.
ಭದ್ರಾವತಿ, ಏ. ೩೦: ಜಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿ ಪರವಾಗಿ ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ಭಾನುವಾರ ಕ್ಷೇತ್ರದ ವಿವಿಧೆಡೆ ಮತಯಾಚನೆ ನಡೆಸಿದರು.
ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಹುಡ್ಕೋಕಾಲೋನಿ ಹೆಲಿಪ್ಯಾಡ್‌ಗೆ ಆಗಮಿಸಿದ ಇಬ್ರಾಹಿಂ ಅವರಿಗೆ ಸ್ಥಳೀಯ ಮುಖಂಡರು ಅದ್ದೂರಿ ಸ್ವಾಗತ ಕೋರಿದರು. ನಂತರ ಬೊಮ್ಮನಕಟ್ಟೆಗೆ ತೆರಳಿ ಉಂಬ್ಳೆಬೈಲು ರಸ್ತೆ ಮಾರ್ಗವಾಗಿ ಕೃಷ್ಣಪ್ಪ ವೃತ್ತ, ಜಯಶ್ರೀ ವೃತ್ತ, ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ, ಸೀಗೆಬಾಗಿ, ಅನ್ವರ್‌ಕಾಲೋನಿ, ತಾಲೂಕು ಕಛೇರಿ ರಸ್ತೆ, ಕಂಚಿನ ಬಾಗಿಲು, ಖಾಜಿಮೊಹಲ್ಲಾ, ಹೊಸಸೇತುವೆ ರಸ್ತೆ, ಬಿ.ಎಚ್ ರಸ್ತೆ ತಲುಪಿ ನಂತರ ಹುತ್ತಾ ಮಾರ್ಗವಾಗಿ ದೊಣಬಘಟ್ಟಕ್ಕೆ ತೆರಳಿದರು. ಮುಸ್ಲಿಂ ಸಮುದಾಯದವರು ಹೆಚ್ಚಾಗಿರುವ ಪ್ರದೇಶಗಳಲ್ಲಿ ಉರ್ದು ಭಾಷೆಯಲ್ಲಿ ಮತಯಾಚನೆ ನಡೆಸಿ ಶಾರದ ಅಪ್ಪಾಜಿ ಬೆಂಬಲಿಸುವಂತೆ ಮನವಿ ಮಾಡಿದರು.
ಕೆಲವು ಭಾಗಗಳಲ್ಲಿ ಮುಸ್ಲಿಂ ಸಮುದಾಯದ ಹಿರಿಯರು ಇಬ್ರಾಹಿಂ ಅವರನ್ನು ಆಶೀರ್ವದಿಸುವ ಮೂಲಕ ಗಮನ ಸೆಳೆದರು. ಇಬ್ರಾಹಿಂ ಸಹ ಹಿರಿಯರಿಗೆ ಪ್ರೀತಿ, ಗೌರವ ತೋರುವ ಮೂಲಕ ಅವರಿಂದ ಸಲಹೆ, ಸೂಚನೆಗಳನ್ನು ಪಡೆದುಕೊಂಡರು.
ಅಭ್ಯರ್ಥಿ ಶಾರದ ಅಪ್ಪಾಜಿ, ಪಕ್ಷದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮುರ್ತುಜಾಖಾನ್, ಮಾಜಿ ಉಪಮೇಯರ್ ಮಹಮದ್ ಸನ್ನಾವುಲ್ಲಾ, ಪಕ್ಷದ ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ಸೈಯದ್ ಅಜ್ಮಲ್ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಮತಯಾಚನೆಯಲ್ಲಿ ಪಾಲ್ಗೊಂಡಿದ್ದರು.
ಭದ್ರಾವತಿಯಲ್ಲಿ ಮತಯಾಚನೆ ಸಂದರ್ಭದಲ್ಲಿ ಕೆಲವು ಭಾಗಗಳಲ್ಲಿ ಮುಸ್ಲಿಂ ಸಮುದಾಯದ ಹಿರಿಯರು ಇಬ್ರಾಹಿಂ ಅವರನ್ನು ಆಶೀರ್ವದಿಸುವ ಮೂಲಕ ಗಮನ ಸೆಳೆದರು. ಇಬ್ರಾಹಿಂ ಸಹ ಹಿರಿಯರಿಗೆ ಪ್ರೀತಿ, ಗೌರವ ತೋರುವ ಮೂಲಕ ಅವರಿಂದ ಸಲಹೆ, ಸೂಚನೆಗಳನ್ನು ಪಡೆದುಕೊಂಡರು.